ಭಾರತದಲ್ಲಿ 26 ಸಾವಿರ ದಾಟಿದ ಕೋವಿಡ್-19 ಪ್ರಕರಣಗಳು, 824 ಮಂದಿ ಸಾವು
Team Udayavani, Apr 26, 2020, 8:38 AM IST
ಮುಂಬೈ: ಭಾರತದಲ್ಲಿ ಕೋವಿಡ್-19 ಆರ್ಭಟ ಮುಂದುವರಿದಿದ್ದು ಸೋಂಕಿತರ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ಶನಿವಾರ ಮಹಾರಾಷ್ಟ್ರ, ಗುಜರಾತ್ ನಲ್ಲಿ ಸೋಂಕು ಪೀಡಿತರ ಸಂಖ್ಯೆ ದ್ವಿಗುಣಗೊಂಡಿರುವುದು ಕಳವಳವನ್ನು ಹೆಚ್ಚಿಸಿದೆ.
ಕೋವಿಡ್ -19 ಹೊಸ 5,000 ಪ್ರಕರಣಗಳು ಕೇವಲ 4 ದಿನಗಳಲ್ಲಿ ದಾಖಲಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಶನಿವಾರ ಭಾರತದಾದ್ಯಂತ 1,834 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲೇ 811 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ವೈರಸ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 602 ಪ್ರಕರಣಗಳು ದಾಖಲಾಗಿವೆ.
ರಾಷ್ಟ್ರದ್ಯಂತ 824 ಮಂದಿ ಈ ಮಾರಕ ವೈರಸ್ ಗೆ ಪ್ರಾಣತ್ಯೆಜಿಸಿದ್ದು , ಶನಿವಾರ 46 ಮಂದಿ ಬಲಿಯಾಗಿದ್ದಾರೆ. ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಿದೆ.
ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.