ಪಡಿತರ ಅಕ್ಕಿ ಸಾಗಾಟ ಸತ್ಯಕ್ಕೆ ದೂರ

Team Udayavani, Apr 26, 2020, 11:16 AM IST

br-tdy-1

ಆನೇಕಲ್‌: ಬಡವರ ಪರವಾಗಿ ನಿಲ್ಲುವುದೇ ಸರ್ಕಾರದ ಧ್ಯೇಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಹೇಳಿದರು. ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ಡಿಕೆ ಶಿವಕುಮಾರ್‌ ಸರ್ಜಾಪುರದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ತಮಿಳುನಾಡಿಗೆ ಬಿಜೆಪಿಯವರು ಸಾಗಿಸುತ್ತಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ, ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜಿಲ್ಲಾಧಿಕಾರಿಗಳು ಇದರ ಬಗ್ಗೆ ಶುಕ್ರವಾರವೇ ಯಾವುದೇ ಅಕ್ರಮ ನಡೆದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಡೀ ರಾಜ್ಯದಲ್ಲಿ ಇಲಾಖೆ ಎಷ್ಟು ಗಂಭೀರವಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಈ ಒಂದು ತಿಂಗಳಲ್ಲಿ 141 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಿರುವುದು ಇತಿಹಾಸದಲ್ಲೇ ಮೊದಲು ಎಂದು ಹೇಳಿದರು.

ಸರ್ಜಾಪುರದ ರೇಷ್ಮೆ ಬೆಳಗಾರರ ಹಾಗೂ ರೈತರ ಸೇವಾ ಸಹಕಾರಿ ಸಂಘಕ್ಕೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ 16000 ಕ್ವಿಂಟಲ್‌ ಅಕ್ಕಿ ಬಂದಿದ್ದು, ಅವರಿಗೆ ಅದನ್ನು ದಾಸ್ತಾನು ಮಾಡಲು ಜಾಗ ಸಾಕಾಗದ ಹಿನ್ನೆಲೆಯಲ್ಲಿ ಖಾಸಗಿಯವರ ಜಾಗದಲ್ಲಿ ಇಟ್ಟಿದ್ದರು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಹತ್ತಿರ ಪರವಾನಗಿ ಪಡೆದಿದ್ದರು. ಡಿಕೆ ಶಿವಕುಮಾರ್‌ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವೆಂದರು. ಎಸ್‌ಟಿಆರ್‌ಆರ್‌ ಅಧ್ಯಕ್ಷ ಸಿ.ಮುನಿರಾಜು ಮಾತನಾಡಿ, ಬಿಜೆಪಿ ಅವರು ಪಡಿತರ ಅಕ್ಕಿಯನ್ನು ಮಾರಾಟ ಮಾಡಿ ಜೀವನ ಮಾಡುತ್ತಿದ್ದಾರೆಂದು ಕಾಂಗ್ರೆಸ್‌ ನವರು ಆರೋಪಿಸಿದ್ದಾರೆ. ಅಂತಹ ಸಂಸ್ಕೃತಿ ಕಾಂಗ್ರೆಸ್‌ನವರಿಗಿದೆ. ಅವರೇ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿ. ನಾವು ಎಲ್ಲದಕ್ಕೂ ಸಿದ್ಧ, ದೇಶದಲ್ಲಿ ಬಿಜೆಪಿಯ ಎಲ್ಲಾ ನಾಯಕರು ತಮ್ಮ ಸ್ವಂತ ಹಣದಿಂದ ನಿರಾಶ್ರಿತರಿಗೆ ಅನ್ನ ದಾಸೋಹ ದಿನಸಿ ಪದಾರ್ಥಗಳ ವಿತರಣೆ ಮಾಡುತ್ತಿದ್ದಾರೆಂದು ಹೇಳಿದರು.

ಜಿಲ್ಲಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್‌ ಮಹದೇವಯ್ಯ, ಬೆಂಗಳೂರು ನಗರ ಜಿಪಂ ಅಧ್ಯಕ್ಷ ಮರಿಸ್ವಾಮಿ, ರೇಷ್ಮೆ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಸ್‌.ಟಿ.ಮಂಜುನಾಥ್‌, ತಾಪಂ ಮಾಜಿ ಅಧ್ಯಕ್ಷ ಮುರಳಿಕೃಷ್ಣ, ಮಂಡಲ ಅಧ್ಯಕ್ಷರಾದ ಎನ್‌.ಶಂಕರ್‌, ಜೈಪ್ರಕಾಶ್‌, ಅಶೋಕ್‌ರೆಡ್ಡಿ, ಮುಖಂಡರಾದ ಹುಲ್ಲಳ್ಳಿಶ್ರೀನಿವಾಸ್‌, ಟಿ.ಬಾಬು, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರಿದ್ದರು.

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.