ಗೂಂಡಾ ಕಾಯ್ದೆಯಡಿ ಜಮೀರ್‌ ಬಂಧಿಸಿ: ರೇಣು


Team Udayavani, Apr 26, 2020, 11:33 AM IST

26-April-04

ಹೊನ್ನಾಳಿ: ಪಟ್ಟಣ ಪಂಚಾಯತ್‌ ಆವರಣದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ವಾರಿಯರ್ಗೆ ಊಟ ಬಡಿಸಿದರು.

ಹೊನ್ನಾಳಿ: ಬೆಂಗಳೂರಿನ ಪಾದರಾಯನಪುರ ಘಟನೆಗೆ ಮುಖ್ಯ ಕಾರಣಕರ್ತರಾಗಿರುವ ಶಾಸಕ ಜಮೀರ್‌ ಅಹಮ್ಮದ್‌ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.

ಪಟ್ಟಣ ಪಂಚಾಯತ್‌ ಆವರಣದಲ್ಲಿ ಶನಿವಾರ ಕೋವಿಡ್ ವಾರಿಯರ್ಗೆ ಊಟ ಬಡಿಸಿ ಅವರು ಮಾತನಾಡಿದರು. ಪಾದರಾಯನಪುರ ಬಡಾವಣೆಯಲ್ಲಿ ಕೋವಿಡ್ ಸೋಂಕಿತರ ಬಗ್ಗೆ ಮಾಹಿತಿ ಪಡೆಯಲು ತೆರಳಿದ್ದ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಖಂಡನೀಯ. ಇದಕ್ಕೆ ಕಾರಣರಾದ ಜಮೀರ್‌ ಅಹಮ್ಮದ್‌ ಮೇಲೆ ತಕ್ಷಣ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಅವರ ಸಹೋದರ ಸಂಸದ ಡಿ.ಕೆ. ಸುರೇಶ್‌ ಪಾದರಾಯನಪುರ ಘಟನೆಯ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿದ್ದಕ್ಕೆ ಸರ್ಕಾರದ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ದುರುದ್ದೇಶದಿಂದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕರ್ನಾಟಕ ಹಾಗೂ ಕೇರಳ ಗಡಿ ಭಾಗವನ್ನು ಬಂದ್‌ ಮಾಡಬೇಡಿ ಎಂದು ಮನವಿ ಮಾಡಿದ್ದರು. ಈಗ ಅವರ ಮಗ ಕುಮಾರಸ್ವಾಮಿ ನನ್ನ ಕ್ಷೇತ್ರ ರಾಮನಗರಕ್ಕೆ
ಪಾದರಾಯನಪುರದ ಆರೋಪಿಗಳನ್ನು ಸ್ಥಳಾಂತರಿಸಿದ್ದು ತಪ್ಪು ಎಂದು ಹೇಳುತ್ತಾರೆ. ಇಂತಹ ದ್ವಂದ್ವ ಹೇಳಿಕೆಗಳನ್ನು ಕೊಡುವುದು ಎಷ್ಟು ಸರಿ, ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್‌ ರಾಮನಗರಕ್ಕಷ್ಟೇ ಸೀಮಿತರೇ ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ವಿಪಕ್ಷ ನಾಯಕರು ಸರ್ಕಾರಕ್ಕೆ ಸಹಕಾರ ನೀಡದೆ ಅಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು.

ಕೋವಿಡ್ ವೈರಸ್‌ ನಿಯಂತ್ರಣ ಕಾರ್ಯವನ್ನು ಕರ್ನಾಟಕ ಸರ್ಕಾರ ಉತ್ತಮವಾಗಿ ಮಾಡುತ್ತಿದೆ. ಹಾಗಾಗಿ ಆರಂಭದಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ 11ನೇ ಸ್ಥಾನಕ್ಕೆ ಇಳಿದಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಕೂಡ ಮುಖ್ಯಮಂತ್ರಿಗಳನ್ನು ಪ್ರಶಂಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.