ಚಿಕ್ಕಬಳ್ಳಾಪುರ: ಕ್ವಾರಂಟೈನ್ ಗೆ ಒಳಗಾಗಿದ್ದ 10 ಮಂದಿ ಪೊಲೀಸ್ ಅಧಿಕಾರಿಗಳ ವರದಿ ನೆಗೆಟಿವ್
Team Udayavani, Apr 27, 2020, 9:12 AM IST
ಚಿಕ್ಕಬಳ್ಳಾಪುರ: ಇತ್ತೀಚೆಗೆ ಅಕ್ರಮವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಕಾರ್ಯಾಚರಣೆ ನಡೆಸಿ ಬಂಧಿಸಿದ್ದ ವ್ಯಕ್ತಿಯಲ್ಲಿ ಕೋವಿಡ್-19 ಪಾಸಿಟಿವ್ ಬಂದಿದ್ದರ ಹಿನ್ನಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ಹತ್ತು ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವರದಿ ನೆಗೆಟಿವ್ ಬಂದಿದ್ದು ಪೊಲೀಸ್ ಇಲಾಖೆ ಆತಂಕ ದೂರವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಏ.23 ರಂದು ನೆರೆಯ ಆಂಧ್ರಪ್ರದೇಶದದಿಂದ ಮೂವರು ವ್ಯಕ್ತಿಗಳು ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ತರುವುದನ್ನು ಖಚಿತ ಪಡಿಸಿಕೊಂಡು ಪೊಲೀಸರು ದಾಳಿ ನಡೆಸಿದ್ದರು. ಈ ಪೈಕಿ 18 ವರ್ಷದ ಚಿಕ್ಕಬಳ್ಳಾಪುರ ನಗರದ ಯುವಕನಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಅದೃಷ್ಟವಶಾತ್ ಅವರ ವೈದ್ಯಕೀಯ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.
ಇನ್ನೂ ಜಿಲ್ಲಾ ಪೊಲೀಸ್ ಇಲಾಖೆ ಕೋವಿಡ್-19 ಲಾಕ್ ಡೌನ್ ಹಿನ್ನಲೆಯಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನುಕೋವಿಡ್ ಕಂಟೈನ್ ಮೆಂಟ್ ವಲಯದಲ್ಲಿ ನಿಯೋಜಿಸಬಾರದು. ಪ್ರತಿದಿನ 15% ಸಿಬ್ಬಂದಿ ಕಡ್ಡಾಯವಾಗಿ ರಜೆ ಪಡೆಯಬೇಕು. ಇದು ಅಧಿಕಾರಿಗಳಿಗೂ ಅನ್ವಯಿಸುತ್ತದೆ. ವೈದ್ಯರ ಸೂಚನೆಯ ಮೇರೆಗೆ ಅಗತ್ಯವಿದ್ದರೆ ಹೈಡ್ರಾಕ್ಸಿ ಕ್ಲೋರೊಕ್ವಿನ್ ತೆಗೆದುಕೊಳ್ಳುಬೇಕು ಸ್ವಯಂಪ್ರೇರಿತವಾಗಿ ಹಾಗೂ ವಾಹನಗಳ ತಪಾಸಣೆ ಮಾಡುವ ವೇಳೆಯಲ್ಲಿ ಯಾವುದೇ ವ್ಯಕ್ತಿ ಅಥವಾ ವಾಹನವನ್ನು ಸ್ಪರ್ಶ ಮಾಡಬಾರದು ಹಾಗೂ 5 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಹಾಗೂ ಈಗಾಗಲೇ ತಿಳಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ತಮ್ಮ ಅಧೀನ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.