ಬಸವ ಜಯಂತಿ ಸರಳ ಆಚರಣೆ
ಸಾಮಾಜಿಕ ಅಂತರ ಕಾಯ್ದುಕೊಂಡ ಜನಪ್ರತಿನಿಧಿಗಳು-ಗಣ್ಯರು-ಅಧಿಕಾರಿಗಳು
Team Udayavani, Apr 27, 2020, 1:35 PM IST
ಬೀದರ: ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ವೃತ್ತದಲ್ಲಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಧ್ವಜಾರೋಹಣ ನೆರವೇರಿಸಿದರು.
ಬೀದರ: ಕೋವಿಡ್ ವೈರಸ್‌ನಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ರವಿವಾರ ನಗರದಲ್ಲಿ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗೆ ಆದ್ಯತೆ ನೀಡಲಾಯಿತು.
ನಗರದ ಬಸವೇಶ್ವರ ಪ್ರತಿಮೆ ಬಳಿ ಸಚಿವ ಪ್ರಭು ಚವ್ಹಾಣ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು. ಬಳಿಕ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಈ ವೇಳೆ ಮಾತನಾಡಿದ ಸಚಿವ ಚವ್ಹಾಣ, ಬಸವಣ್ಣನ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತವಾಗಿವೆ. ವಿಶ್ವಕ್ಕೆ ಕಾಡುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸಲು ಜಗಜ್ಯೋತಿ ಬಸವಣ್ಣನವರು ನಮಗೆಲ್ಲರಿಗೂ ಶಕ್ತಿ ಕೊಡಲಿ ಮತ್ತು ದಾರಿ ತೋರಲಿ. ಲಾಕ್‌ಡೌನ್ ಅವಧಿಯಲ್ಲಿ ಜನರು ಮನೆಯಿಂದ ಹೊರಗೆ ಬಾರದೆ ಶರಣರ ವಚನಗಳನ್ನು ಓದಿ ಬದುಕಿನಲ್ಲಿ ರೂಢಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದರು.
ಸಂಸದ ಭಗವಂತ ಖೂಬಾ, ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ ಮಾತನಾಡಿದರು. ಹಲವು ಗಣ್ಯರು, ಅಧಿಕಾರಿಗಳು ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು. ಈ ವೇಳೆ ಎಲಲರೂ ಸಾಮಾಜಿಕ ಅಂತರ ಕಾಯ್ದುಕೊಂಡರು. ಶಾಸಕರಾದ ಬಂಡೆಪ್ಪ ಖಾಶೆಂಪುರ, ರಹೀಮ್ ಖಾನ್, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ಸದಸ್ಯೆ ಶಕುಂತಲಾ ಬೆಲ್ದಾಳೆ, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಎಸ್‌ಪಿ ನಾಗೇಶ ಡಿ.ಎಲ್. ಎಡಿಸಿ ರುದ್ರೇಶ ಗಾಳಿ, ಎಸಿ ಅಕ್ಷಯಶ್ರೀಧರ, ಎಎಸ್‌ಪಿ ಗೋಪಾಲ ಬ್ಯಾಕೋಡ, ಡಿವೈಎಸ್‌ಪಿ ಬಸವೇಶ್ವರ ಹೀರಾ, ಪೌರಾಯುಕ್ತ ಬಿ. ಬಸಪ್ಪ, ಪ್ರಮುಖರಾದ ಗುರುನಾಥ ಕೊಳ್ಳೂರ, ಬಾಬು ವಾಲಿ, ಬಿ.ಜಿ. ಶೆಟಕಾರ, ಬಸವರಾಜ ಧನ್ನೂರು, ಶೈಲೇಂದ್ರ ಲ್ದಾಳೆ, ಅನಿಲ ಬೆಲ್ದಾರ, ಸುರೇಶ ಚನ್ನಶೆಟ್ಟಿ, ಶರಣಪ್ಪ ಮಿಠಾರೆ, ಸೋಮಶೇಖರ ಪಾಟೀಲ ಗಾದಗಿ, ಕುಶಾಲರಾವ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.