ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ ಜೈನ ಶ್ರಾವಕರು


Team Udayavani, Apr 27, 2020, 4:34 PM IST

ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ ಜೈನ ಶ್ರಾವಕರು

ಕಾಗವಾಡ: ಜೈನ ಸಮಾಜದ ತೀರ್ಥಕ್ಷೇತ್ರ, ಜಾರ್ಖಂಡ್‌ ರಾಜ್ಯದ ಸಮ್ಮೇದ ಶಿಖರ್ಜಿ ಮಧುಬನ ಕ್ಷೇತ್ರದ ದರ್ಶನಕ್ಕಾಗಿ ತೆರಳಿದ್ದ ಕಾಗವಾಡ, ಅಥಣಿ, ಚಿಕ್ಕೋಡಿ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ಮೊದಲಾದ ಗ್ರಾಮಗಳ 70 ಶ್ರಾವಕ-ಶ್ರಾವಿಕೆಯರು  ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ್ದು, ಮನೆಗೆ ಮರಳಿ ಬರಲು ಹಂಬಲಿಸುತ್ತಿದ್ದಾರೆ.

ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದ ಜೈನ ಸಮಾಜದ ಆರ್ಚಕರಾದ ಶರದ್‌ ಉಪಾಧ್ಯೆ, ಖಾಸಗಿ ಟ್ರಾವಲರ್ ಆಯೋಜಿಸಿದ್ದ 22 ದಿನಗಳ ಜೈನ ಸಮಾಜದ ತಿರ್ಥಕ್ಷೇತ್ರಗಳ ದರ್ಶನದ ಪ್ರವಾಸಕ್ಕೆಂದು ಮಾ. 11ರಂದು ತೆರಳಿದ್ದರು. ಖಾಸಗಿ ಸಂಸ್ಥೆ ಆಯೋಜಿಸಿದ್ದ ತೀರ್ಥಕ್ಷೇತ್ರ ದರ್ಶನ ಪ್ರವಾಸಕ್ಕೆಂದು ರಸ್ತೆ ಮಾರ್ಗವಾಗಿ 52 ಜನ ಮತ್ತು ರೈಲು ಮೂಲಕ 18 ಜನರಂತೆ 70 ಶ್ರಾವಕರು ಪ್ರಯಾಣ ಬೆಳೆಸಿದ್ದು, ಇದರಲ್ಲಿ ಅಥಣಿ ತಾಲೂಕಿನ ಸವದಿ ಗ್ರಾಮದ 34, ನಂದಗಾಂವ ಗ್ರಾಮದ 12, ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ 8, ಮೋಳವಾಡ ಗ್ರಾಮದ 4, ಇಂಗಳಿ ಗ್ರಾಮದಿಂದ 6 ಜನರು, ಅಡಿಗೆಭಟ್ಟರು 4, ಬಸ್‌ ಚಾಲಕ ಮತ್ತು ನಿರ್ವಾಹಕ ಸೇರಿದ್ದಾರೆ.

ಉಗಾರ ಖುರ್ದ ಪಟ್ಟಣದ ಜೈನ ಸಮಾಜದ ಆರ್ಚಕರಾದ ಶರದ್‌ ಉಪಾಧ್ಯೆ ಅವರಲ್ಲಿ ಒಬ್ಬರು. ಕಾಗವಾಡ ತಾಲೂಕಿನ ಉಗಾರದಿಂದ ಪ್ರಯಾಣ ಬೆಳೆಸಿ ಮಹಾರಾಷ್ಟ್ರದ ಕುಂತಲಗಿರಿ, ಕಚನೇರ, ಜಿಂತೂರ, ಕಾರಂಜಾ, ಮುಕ್ತಗಿರಿ, ರಾಮಟೇಕ್‌, ಮಧ್ಯಪ್ರದೇಶದ ಜಬಲಪೂರ, ಭೆಂಡಾ ಘಾಟ, ಉತ್ತರಪ್ರದೇಶದ ಅಲಹಾಬಾದ್‌ ಹೀಗೆ ತೀರ್ಥಕ್ಷೇತ್ರಗಳ ದರ್ಶನ ಪಡೆಯುತ್ತಾ ಮಾ. 18ರಂದು ಶ್ರೀ ಸಮ್ಮೇದ ಶಿಖರ್ಜಿ ತಲುಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಮಾ. 22 ರಿಂದ ಲಾಕ್‌ಡೌನ್‌ ನಿರ್ಣಯ ಕೈಗೊಂಡಿದ್ದರಿಂದ ಈ ಎಲ್ಲ ಭಕ್ತಾದಿಗಳು ಮಧುಬನ ತೀರ್ಥಕ್ಷೇತ್ರದಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಯ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಆದರೂ ಜನ ತಮ್ಮ ಮನೆಗೆ ತರಳಲು ಹಂಬಲಿಸುತ್ತಿದ್ದಾರೆ ಎಂದು ಆರ್ಚಕ ಶರದ್‌ ಉಪಾಧ್ಯೆ ತಿಳಿಸಿದರು.

ಸಚಿವರು, ಶಾಸಕರಿಂದ ಪ್ರಯತ್ನ: ಜನರನ್ನು ಮರಳಿ ಕರೆತರಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀಮಂತ ಪಾಟೀಲ, ಸಚಿವೆ ಶಶಿಕಲಾ ಜೊಲ್ಲೆ, ಮಹಾರಾಷ್ಟ್ರ ಜವಳಿ ಖಾತೆ ಸಚಿವ ರಾಜೇಂದ್ರ ಯಡ್ರಾಂವಕರ, ದಕ್ಷಿಣ ಭಾರತ ಜೈನ್‌ ಸಭೆ ಅಧ್ಯಕ್ಷ ರಾವಸಾಹೇಬ ಪಾಟೀಲ ಇತರರು ಪ್ರಯತ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.