ಸಮರ್ಪಕ ಆಹಾರ ವಿತರಿಸಿ: ಡಾ.ಅಜಯಸಿಂಗ್
Team Udayavani, Apr 27, 2020, 5:18 PM IST
ಜೇವರ್ಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಡಾ.ಅಜಯಸಿಂಗ್ ಮಾತನಾಡಿದರು
ಜೇವರ್ಗಿ: ತಾಲೂಕಿನ ಒಟ್ಟು 42 ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಗತಿಕರಿಗೆ, ಅಲೆಮಾರಿ ಜನಾಂಗದವರಿಗೆ ಆಹಾರ ವಿತರಣೆಯಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ಇಡೀ ದೇಶ ನಲುಗಿದೆ. ಇಂತಹ ಸಂದರ್ಭದಲ್ಲಿ ಮನುಕುಲದ ಉದ್ಧಾರಕ್ಕಾಗಿ ಪ್ರತಿಯೊಬ್ಬರು ಮಾನವೀಯತೆ ಮೆರೆಯಬೇಕಾಗಿದೆ. ತಾಲೂಕಿನ ನಿರ್ಗತಿಕ ಕುಟುಂಬಗಳಿಗೆ ಧರ್ಮಸಿಂಗ್ ಫೌಂಡೇಶನ್ ವತಿಯಿಂದ 42 ಗ್ರಾಪಂ ವ್ಯಾಪ್ತಿಯಲ್ಲಿ 1.35 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ಮುಂಜಾಗ್ರತೆಯಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಒಂದೇ ಒಂದು ಕೊರೊನಾ ಸೋಂಕು ತಗುಲಿದ ಪ್ರಕರಣ ಪತ್ತೆಯಾಗಿಲ್ಲ. ಹೊರ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಂದ ಜೇವರ್ಗಿ ತಾಲೂಕಿಗೆ 9,857 ಜನ ಬಂದಿದ್ದು, ಅದರಲ್ಲಿ 8,871 ಜನರಿಗೆ 14 ದಿವಸ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ರಾಜ್ಯ ಸರ್ಕಾರ ಜೇವರ್ಗಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಈಗಾಗಲೇ ಬರ ನಿರ್ವಹಣೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
ತಹಶೀಲ್ದಾರ್ ಸಿದರಾಯ ಭೋಸಗಿ, ಯಡ್ರಾಮಿ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ, ತಾಪಂ ಇಒ ವಿಲಾಸರಾಜ್, ಡಾ.ಸಿದ್ದು ಪಾಟೀಲ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ.ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೀಶ, ಅಪರಾಧ ವಿಭಾಗದ ಪಿಎಸ್‌ಐ ಸಂಗಮೇಶ ಅಂಗಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.