ಸಾವಿರ ಉಚಿತ ಮಾಸ್ಕ್ ತಾಲೂಕಾಡಳಿತಕ್ಕೆ ಹಸ್ತಾಂತರ
Team Udayavani, Apr 27, 2020, 5:23 PM IST
ಜೇವರ್ಗಿ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ಧೇವಾಡಗಿ ಸಾವಿರ ಮಾಸ್ಕ್ಗಳನ್ನು ತಹಶೀಲ್ದಾರ್ಗೆ ಹಸ್ತಾಂತರಿಸಿದರು
ಜೇವರ್ಗಿ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ಧೇವಾಡಗಿ ಉಚಿತವಾಗಿ ಸಾವಿರ ಮಾಸ್ಕ್ಗಳನ್ನು ವಿತರಿಸಿದರು.
ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಗಲಿರುಳು ಶ್ರಮವಹಿಸುತ್ತಿವೆ. ಆರೋಗ್ಯ, ಕಂದಾಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ ಬಿಸಿಲು, ಮಳೆ ಲೆಕ್ಕಿಸದೇ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಡೆಗಟ್ಟಬೇಕಾಗಿದೆ ಎಂದು ಶಿವರಾಜ ಪಾಟೀಲ ಹೇಳಿದರು.
ನಂತರ ಸಾವಿರ ಮಾಸ್ಕ್ಗಳನ್ನು ತಹಶೀಲ್ದಾರ್ ಸಿದರಾಯ ಭೋಸಗಿ ಅವರ ಮೂಲಕ ತಾಲೂಕಾಡಳಿತಕ್ಕೆ ಹಸ್ತಾಂತರಿಸಿದರು. ಶಾಸಕ ಡಾ.ಅಜಯಸಿಂಗ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಶಿವನಗೌಡ ಹಂಗರಗಿ, ಬಾಪುಗೌಡ ಪಾಟೀಲ ಬಿರಾಳ, ಮಹಾಂತ ಸಾಹು ಹರವಾಳ, ವೀರೇಶ ಕಂದಗಲ್, ವಿಜಯಕುಮಾರ ಪಾಟೀಲ ಸೇಡಂ, ಅಖಂಡು ಕಲ್ಲಾ, ಶಿವಲಿಂಗ ಕಲ್ಲಹಂಗರಗಿ, ಶಿವುಕುಮಾರ ಕಲ್ಲಾ, ರವಿ ಕೋಳಕೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.