ಮೇಲ್‌ಗಂಗೊಳ್ಳಿ: ಅಕ್ರಮಗಳಿಗೆ ಬ್ರೇಕ್ ಹಾಕಲು ತಾತ್ಕಾಲಿಕ ಚೆಕ್‌ಪೋಸ್ಟ್
Team Udayavani, Apr 28, 2020, 5:00 AM IST
ಗಂಗೊಳ್ಳಿ: ಲಾಕ್‌ಡೌನ್ ಸಮಯದಲ್ಲಿ ವಾಹನ ಮತ್ತು ಜನರ ಸಂಚಾರಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹಾಗೂ ಅಕ್ರಮ ಗೋ ಸಾಗಾಟ ಮತ್ತು ಅಕ್ರಮ ಮರಳು ಸಾಗಾಟ ಮಟ್ಟ ಹಾಕುವ ದೃಷ್ಟಿಯಿಂದ ಗಂಗೊಳ್ಳಿ ಗ್ರಾಮದ ಮೇಲ್‌ಗಂಗೊಳ್ಳಿ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಹೊಸ ಚೆಕ್ ಪೋಸ್ಟ್ ತೆರೆಯಲಾಗಿದೆ.
ಲಾಕ್ ಡೌನ್ ಸಮಯದಲ್ಲೂ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರು ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿರುವುದು ಮತ್ತು ಆಟೋರಿಕ್ಷಾ ಸಂಚಾರ ಸೇರಿದಂತೆ ದ್ವಿಚಕ್ರ ಹಾಗೂ ಇನ್ನಿತರ ವಾಹನಗಳ ಸಂಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಲಾಕ್ ಡೌನ್ ಸಮಯದಲ್ಲಿ ಜಾನುವಾರು ಕಳ್ಳತನ ಹಾಗೂ ಅಕ್ರಮ ಗೋಮಾಂಸ ಸಾಗಾಟ ಆರೋಪ ಕೇಳಿ ಬಂದಿತ್ತು. ಅದಲ್ಲದೆ ಅಕ್ರಮ ಮರಳು ಸಾಗಾಟದ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿತ್ತು.
ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ನಾಯಕವಾಡಿ ಸಮೀಪ ತೆರೆಯಲಾಗಿದ್ದ ಪೊಲೀಸ್ ಚೆಕ್ ಪೋಸ್ಟ್‌ನ್ನು ಈಗ ಗಂಗೊಳ್ಳಿಯ ಮೇಲ್‌ಗಂಗೊಳ್ಳಿಯಲ್ಲಿ ತೆರೆಯಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಸಿಬಂದಿ ನಿಯೋಜಿಸಲಾಗಿದ್ದು, ಗಂಗೊಳ್ಳಿಗೆ ಬಂದು ಹೋಗುವ ಎಲ್ಲ ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಸಂಚರಿಸುವ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.