ಹೊರರಾಜ್ಯಗಳ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
Team Udayavani, Apr 28, 2020, 6:45 AM IST
ಬೆಂಗಳೂರು: ಕೋವಿಡ್ 19 ಲಾಕ್‌ಡೌನ್‌ನಿಂದಾಗಿ ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ಸಮಸ್ಯೆಗಳನ್ನು ಆಲಿಸಲು ರಾಜ್ಯ ಸರಕಾರವು ಸಹಾಯವಾಣಿ ಆರಂಭಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು.
ಮುಂಬಯಿ ಕನ್ನಡಿಗರು ಸೇರಿ ದಂತೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರ ಸಮಸ್ಯೆಗಳನ್ನು ಆಲಿಸಲು ತುರ್ತಾಗಿ ಸಹಾಯವಾಣಿಯನ್ನು ಆರಂಭಿಸಬೇಕು ಎಂದು ಕೋರಿ ರಾಜ್ಯ ಮುಜರಾಯಿ, ಮೀನುಗಾರಿಕೆ ಖಾತೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಎ.24ರಂದು ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ತುರ್ತಾಗಿ ಸ್ಪಂದಿಸಿರುವ ಮುಖ್ಯ ಮಂತ್ರಿ ಸಹಾಯ ವಾಣಿಯನ್ನು ಸ್ಥಾಪಿಸಿದ್ದಾರೆ. ಕಾರ್ಮಿಕ ಇಲಾಖೆಯ ಅಧೀನದಲ್ಲಿ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಸಹಾಯವಾಣಿ ಚಾಲನೆ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್ ಉಪಸ್ಥಿತರಿದ್ದರು.
ಲಾಕ್‌ಡೌನ್ ಸಮಸ್ಯೆಯಿಂದ ಪ್ರಯಾಣ ಮಾಡಲು ಸಾಧ್ಯವಾಗದೆ ಹೊರರಾಜ್ಯಗಳಲ್ಲಿ ಉಳಿದು ಸಮಸ್ಯೆಗೆ ಸಿಲುಕಿರುವ ರಾಜ್ಯದ ಕಾರ್ಮಿಕರಿಗಾಗಿ ಹಾಗೂ ಆಹಾರ ಮತ್ತು ಇತರ ಮೂಲಭೂತ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ದೂರು ಬಂದ ಕೂಡಲೇ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಸಹಾಯವಾಣಿ ಕಾರ್ಯಪ್ರವೃತ್ತವಾಗಲಿದೆ.
ಫೋನ್-ಇನ್‌ನಲ್ಲಿ ಉಲ್ಲೇಖ
ಲಾಕ್‌ಡೌನ್‌ನಿಂದಾಗಿ ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಆಪ್ತ ಸಹಾಯವಾಣಿಯೊಂದನ್ನು ಸ್ಥಾಪಿಸುವ ತುರ್ತು ಆವಶ್ಯಕತೆಯ ಬಗ್ಗೆ ಇತ್ತೀಚೆಗೆ “ಉದಯವಾಣಿ’ ವತಿಯಿಂದ ಜಿಲ್ಲಾಧಿಕಾರಿಯವರ ಜತೆ ಆಯೋಜಿಸಿದ್ದ “ಫೋನ್- ಇನ್’ ಕಾರ್ಯಕ್ರಮದಲ್ಲಿ ಗಮನ ಸೆಳೆಯಲಾಗಿತ್ತು. ಅದಕ್ಕೆ ಸ್ಪಂದಿಸಿದ್ದ ಜಿಲ್ಲಾಧಿಕಾರಿಗಳು, ಹೊರ ದೇಶ ಹಾಗೂ ರಾಜ್ಯಗಳಲ್ಲಿ ಲಾಕ್‌ಡೌನ್‌ನಿಂದಾಗಿ ಸಿಲುಕಿಕೊಂಡಿರುವ ಕರಾವಳಿಗರ ಸಹಿತ ಕನ್ನಡಿಗರಿಗೆ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಆಪ್ತ ಸಹಾಯವಾಣಿ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಮೂಲಕ ಹೊರನಾಡ ಕನ್ನಡಿಗರ ಅಹವಾಲು ಆಲಿಸುವ ಪ್ರತ್ಯೇಕ ಸಹಾಯವಾಣಿ ಪ್ರಾರಂಭಿಸುವಲ್ಲಿ ನೆರವಾಗಿರುವುದು ಗಮನಾರ್ಹ.
ಸಹಾಯವಾಣಿ ಸಂಖ್ಯೆ
ಲಾಕ್‌ಡೌನ್‌ನಿಂದಾಗಿ ಹೊರ ರಾಜ್ಯಗಳಲ್ಲಿ ಸಮಸ್ಯೆಗೆ ಸಿಲುಕಿರುವ ಕನ್ನಡಿಗರು 080-22636800 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಸಹಾಯ ವಾಣಿಯು ಬೆಂಗಳೂರಿನ ಡೈರಿ ವೃತ್ತದಲ್ಲಿರುವ ಕಲ್ಯಾಣ ಸುರಕ್ಷಾ ಭವನದಲ್ಲಿ ಕಾರ್ಯ ನಿರ್ವಹಿಸಲಿದೆ. ಕೇಂದ್ರದಲ್ಲಿ ಪ್ರತಿಪಾಳಿಯಲ್ಲಿ 50 ಮಂದಿ ಯಂತೆ 3 ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.