ಕಳೆದ 7ದಿನಗಳಲ್ಲಿ ದೇಶದ 80ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣ ವರದಿಯಾಗಿಲ್ಲ: ಕೇಂದ್ರ ಸರ್ಕಾರ
28 ದಿನಗಳ ಕಾಲದಿಂದ 17 ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್ 19 ಪ್ರಕರಣ ವರಿಯಾಗಿಲ್ಲ ಎಂದು ವಿವರಿಸಿದ್ದಾರೆ.
Team Udayavani, Apr 28, 2020, 1:03 PM IST
ನವದೆಹಲಿ: ಕಳೆದ ಏಳು ದಿನಗಳಲ್ಲಿ ದೇಶದ 80 ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ತಿಳಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾತುಕತೆಯಲ್ಲಿ ಮಾತನಾಡಿದ ಅವರು, ಕಳೆದ 14 ದಿನಗಳಲ್ಲಿ 47 ಜಿಲ್ಲೆಗಳಲ್ಲಿ ಒಂದೂ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ. 21 ದಿನಗಳಿಂದ 39 ಜಿಲ್ಲೆಗಳಲ್ಲಿ ಯಾವುದೇ ಕೋವಿಡ್ 19 ಸೋಂಕಿತರು ಪತ್ತೆಯಾಗಿಲ್ಲ. 28 ದಿನಗಳ ಕಾಲದಿಂದ 17 ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್ 19 ಪ್ರಕರಣ ವರಿಯಾಗಿಲ್ಲ ಎಂದು ವಿವರಿಸಿದ್ದಾರೆ.
ಕಳೆದ ಹಿಂದಿನ ವಾರಗಳಿಗೆ ಹೋಲಿಸಿದರೆ ಕೋವಿಡ್ 19 ವೈರಸ್ ದ್ವಿಗುಣಗೊಳ್ಳುವ ಅವಧಿ ಕೂಡಾ ಏರಿಕೆಯಾಗಿದೆ ಎಂದು .ಹರ್ಷವರ್ಧನ್ ತಿಳಿಸಿದ್ದಾರೆ. ಕಳೆದ 14ದಿನಗಳ ಹಿಂದೆ ಸೋಂಕು 08.07ದಿನಗಳಲ್ಲಿ ದ್ವಿಗುಣಗೊಳ್ಳುತ್ತಿದ್ದು, ಇದೀಗ ಕಳೆದ ಒಂದು ವಾರದಿಂದ 10.2ದಿನಕ್ಕೆ ಏರಿಕೆಯಾಗಿದ್ದು, ಮೂರು ದಿನಗಳಿಂದ 10.9ದಿನಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ದಿಲ್ಲಿಯ ಕೋವಿಡ್ 19 ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಸಚಿವರು, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬಜಾಜ್, ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮತ್ತು ಇತರ ಇಲಾಖೆಯ ಅಧಿಕಾರಿಗಳ ಜತೆ ಪುನರ್ ವಿಮರ್ಶೆ ನಡೆಸಿದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.