ನಾರ್ವೆ ಮಕ್ಕಳು ನಲಿದಾಡಿದರು
Team Udayavani, Apr 28, 2020, 3:51 PM IST
ನಾರ್ವೆ: ಒಂದೂವರೆ ತಿಂಗಳ ನಂತರ ನಾರ್ವೆಯಲ್ಲಿ ಮತ್ತೆ ಮಕ್ಕಳ ಕಲರವ ಶಾಲೆಯಲ್ಲಿ ಕೇಳಿಬರುತ್ತಿದೆ.
ಶೈಕ್ಷಣಿಕ ಕ್ಷೇತ್ರ ಚಟುವಟಿಕೆ ಆರಂಭಿಸಿದೆ. ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸ್ಥಗಿತಗೊಂಡಿದ್ದ ಪ್ರಾಥಮಿಕ ಶಾಲೆಗಳು ಸೋಮವಾರ ತೆರೆದಿವೆ. ಈ ಮೂಲಕ ನಾರ್ವೆ ಒಂದೊಂದೇ ಹಂತವಾಗಿ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುತ್ತಿದೆ.
ನರ್ಸರಿ ಶಾಲೆಗಳ ಪುನರಾರಂಭಿಸಿ ಒಂದು ವಾರದ ಅಂತರದಲ್ಲೇ ಒಂದರಿಂದ ಐದನೇ ತರಗತಿಗಳು ಪ್ರಾರಂಭಗೊಂಡಿವೆ. ವಿದ್ಯಾರ್ಥಿಗಳು 6 ವಾರಗಳ ನಂತರ ಶಾಲೆಯತ್ತ ಮುಖ ಮಾಡಿದ್ದಾರೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಮಿತಿಗೊಳಿಸಿರುವ ಸರಕಾರ ಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳಿಗಷ್ಟೇ ಅವಕಾಶ ನೀಡಿದೆ.
ದೇಶದಲ್ಲಿ ಸೋಂಕು ಪ್ರಸರಣ ಕಡಿತವಾಗಿದ್ದು, ಸೋಂಕು ಪೀಡಿತರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣವಾಗಿ ಶಾಲೆ-ಕಾಲೇಜುಗಳನ್ನು ತೆರೆಯುವಂತೆ ತಿಳಿಸಲಾಗಿದೆ. ಆದರೆ ಈ ನಡೆ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದ್ದು, ಮಕ್ಕಳಿಗೆ ಸೋಂಕು ತಗುಲಬಹುದು ಎಂದು ಕೆಲವು ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ನರ್ಸರಿ ಶಾಲೆಗಳ ಹಲವು ಸಿಬಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರು ಹಿಂದೆ ಮುಂದೆ ನೋಡುತ್ತಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಹೊರತಾಗಿ ಇತರ ಕೆಲ ಕ್ಷೇತ್ರಗಳಿಗೆ ಸರಕಾರ ವಿನಾಯಿತಿ ನೀಡಿದ್ದು, ಹೇರ್ ಸೆಲೂನ್ ಮತ್ತು ಟ್ಯಾಟೋ ಅಂಗಡಿ ಮಾಲಕರಿಗೆ ತಮ್ಮ ವ್ಯವಹಾರವನ್ನು ಪುನರಾರಂಭಿಸುವಂತೆ ಆದೇಶ ನೀಡಿದೆ. ಸಾಮೂಹಿಕ ಕಾರ್ಯಕ್ರಮ ಆಯೋಜನೆ ನಿಷೇಧ ಆದರೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇತರ ಯಾವುದೇ ಸಾಮೂಹಿಕ ಸಮಾರಂಭಗÙನ್ನು ಆಯೋಜಿಸುವಂತಿಲ್ಲ. ಅದರ ಮೇಲಿನ ನಿಷೇಧವನ್ನು ಮುಂದುವರಿಸಿದೆ. ಜತೆಗೆ ದೇಶದ ಜನತೆಯಲ್ಲಿ ಸಾಮಾಜಿಕ ಅಂತರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸರಕಾರ ಸ್ಪಷ್ಟವಾಗಿ ಸೂಚಿಸಿದೆ. ಈ ನಿಯಮಗಳನ್ನು ಯಾರೂ ಮೀರುವಂತಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.