ಕೋವಿಡ್ 19ದಲ್ಲೂ ರಾಜಕೀಯ ಸಲ್ಲ
Team Udayavani, Apr 28, 2020, 4:37 PM IST
ಬೀಳಗಿ: ಮನುಕುಲವನ್ನು ಕಾಡುತ್ತಿರುವ ಮಹಾಮಾರಿ ಕೋವಿಡ್ 19 ವೈರಸ್‌ಗೆ ಜನರು ಭಯಭೀತರಾಗಿದ್ದಾರೆ. ಇಂಥಹ ಸಂದಿಗ್ಧ ಸ್ಥಿತಿಯಲ್ಲಿಯೂ ರಾಜಕಾರಣ ಮಾಡುವುದು ಸಲ್ಲದು ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 19 ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ದಿಟ್ಟ ಮತ್ತು ಸಮಯೋಚಿತ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಇಂತಹ ರಾಷ್ಟ್ರೀಯ ವಿಪತ್ತಿನಲ್ಲಿಯೂ ವಿರೋಧ ಪಕ್ಷಗಳು ಅನಾವಶ್ಯಕವಾಗಿ ರಾಜಕೀಯ ಬೆರೆಸಿ ವಿರೋಧ ಮಾಡುತ್ತಿವೆ. ಇದು ಸರಿಯಾದ ಕ್ರಮವಲ್ಲ ಎಂದರು.
ಕೋವಿಡ್-19ಕ್ಕೆ ಇಡೀ ಜಗತ್ತೆ ನಲುಗಿ ಹೋಗಿದೆ. ಭಾರತಕ್ಕೂ ಬಂದೊದಗಿರುವ ಈ ಗಂಡಾಂತರದಿಂದ ಎಲ್ಲ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುವುದರೊಂದಿಗೆ ಜನರಿಗೆ ನೆರವಾಗಬೇಕಿರುವುದು ಅವಶ್ಯಕವಾಗಿದೆ. ಈ ಕಷ್ಟದ ದಿನಗಳು ಬೇಗನೆ ನಿವಾರಣೆಯಾಗಲಿದೆ. ಕೊರೊನಾಕ್ಕೂ ಔಷಧ ಶೋಧನೆಯ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾರಣ ಪಕ್ಷಭೇದ ಮರೆತು, ರಾಜಕಾರಣ ದೂರವಿಟ್ಟು ಮಾನವೀಯ ನೆಲೆಗಟ್ಟಿನ ಮೇಲೆ ಕೊರೊನಾ ಯುದ್ದವನ್ನು ಗೆಲ್ಲುವುದೊಂದೆ ಗುರಿಯಾಗಬೇಕು. ತೊಂದರೆಯಲ್ಲಿರುವ ಬಡ-ನಿರ್ಗತಿಕ ಕುಟುಂಬಗಳಿಗೆ ಉದಾರವಾಗಿ ಎಲ್ಲರೂ ನೆರವು ನೀಡಲು ಮುಂದಾಗುವ ಮೂಲಕ ಬಸವಣ್ಣನವರ ಜಯಂತಿಗೆ ನಿಜಾರ್ಥ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.