ಕೇಂದ್ರದ ತಾರತಮ್ಯ ಸಹಿಸಲ್ಲ: ಸತೀಶ
Team Udayavani, Apr 28, 2020, 4:54 PM IST
ಚಿಕ್ಕೋಡಿ: ಕೇಂದ್ರ ಸರ್ಕಾರವು ರಾಜ್ಯಕ್ಕೆ ಮಾಡುವ ತಾರತಮ್ಯವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಕೋವಿಡ್ 19 ಹಿನ್ನೆಲೆಯಲ್ಲಿ ದೇಣಿಗೆ ರೂಪದಲ್ಲಿ ಕೇಂದ್ರಕ್ಕೆ ಸಲ್ಲಿಕೆಯಾಗಿದ್ದ 10 ಸಾವಿರ ಕೋಟಿ ರೂ. ಗಳಲ್ಲಿ ರಾಜ್ಯಕ್ಕೆ 500 ಕೋಟಿ ರೂ. ನೀಡಿದರೇ ಸಹಾಯವಾಗುತ್ತಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರಕ್ಕೆ ದೇಣಿಗೆ ರೂಪದಲ್ಲಿ ಸಂಗ್ರಹವಾದ 10 ಸಾವಿರ ಕೋಟಿ ರೂ. ಗಳಲ್ಲಿ ರಾಜ್ಯಕ್ಕೆ 500 ಕೋಟಿ ನೀಡಿದ್ದರೇ ರೈತರ ಬೆಳೆಹಾನಿ, ಮಾಸ್ಕ್, ಸ್ಯಾನಿಟೈಸರ್ ಮುಂತಾದ ಸಮಸ್ಯೆಗಳನ್ನು ಬಗೆಹರಿಸಬಹುದಿತ್ತು ಎಂದರು. ಕೋವಿಡ್ 19 ಮುನ್ನೇಚ್ಚರಿಕೆ ಕ್ರಮವಾಗಿ ಬೇರೆ ಕಡೆ ಹೊಲಿಕೆ ಮಾಡಿದರೇ ನಮ್ಮ ರಾಜ್ಯ ಪರವಾಗಿಲ್ಲ. ಆದರೆ ಕೊರೊನಾದಲ್ಲಿ ರೈತರು ಸಾಕಷ್ಟು ತರಕಾರಿ, ವಿವಿಧ ಹಣ್ಣು-ಹಂಪಲಗಳಿಗೆ ಹಾನಿಯುಂಟಾಗಿದೆ. ಕೂಡಲೇ ಸರ್ಕಾರ ಹಾನಿ ನಷ್ಟ ಭರಿಸಬೇಕು. ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು. ರೈತರ ವಿವಿಧ ಬೆಳೆಗಳಿಗೆ ಮಾರಾಟ ಮಾಡಲು ಅನುಕೂಲ ಕಲ್ಪಿಸಬೇಕು ಎಂದರು.
ಲಾಕ್‌ಡೌನ್‌ನಿಂದ ರೈತರಿಗೆ, ಸಾರ್ವಜನಿಕರಿಗೆ ಆದ ಸಮಸ್ಯೆ ಕುರಿತು ಕೆಪಿಸಿಸಿ ಅಭಿಪ್ರಾಯ ಸಂಗ್ರಹ ಮಾಡಲು ಸೂಚಿಸಿದೆ. ಇದರಿಂದ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಕೊರೊನಾ ಹೆಚ್ಚಿರುವ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಅಲ್ಲಿಯ ಸ್ಥಿತಿಗತಿ ಕುರಿತು ಕೆಪಿಸಿಸಿ ಅಧ್ಯಕ್ಷರಿಗೆ ವರದಿ ನೀಡಲಾಗುತ್ತದೆ. ಕೋವಿಡ್ 19 ನಿಯಂತ್ರಿಸಲು ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಶಾಸಕ ಗಣೇಶ ಹುಕ್ಕೇರಿ, ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾಸಕ ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಮಹಾವೀರ ಮೋಹಿತೆ, ಎಚ್.ಎಸ್. ನಸಲಾಪೂರೆ, ಸಾಭೀರ ಜಮಾದಾರ, ಮುದ್ದಸರ ಜಮಾದಾರ, ಗುಲಾಬ ಬಾಗವಾನ, ಮಹಾದೇವ ಕವಲಾಪುರೆ, ಅನಿಲ ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.