![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 28, 2020, 5:15 PM IST
ಸಾಂದರ್ಭಿಕ ಚಿತ್ರ
ಮೈಸೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೃಷಿ ಸಾಲ ಮರುಪಾವತಿಗೆ 3 ತಿಂಗಳ ಬಡ್ಡಿ ವಿನಾಯಿತಿ ನೀಡಿ, ಮೇ 31ರ ತನಕ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಿರುವ ಆದೇಶವನ್ನು ಪುನರ್ ಪರಿಶೀಲಿಸಿ 2021ರ ಮಾರ್ಚ್ 31ರವರೆಗೆ ಬಡ್ಡಿ ವಿನಾಯಿತಿ ನೀಡಿ, ಸಾಲ ನವೀಕರಣ ಮಾಡಿ ಅವಧಿ ವಿಸ್ತರಣೆ ಮಾಡಬೇಕು ಎಂದು ರಾಜ್ಯ ರೈತ ಸಂಘ ಟನೆಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತ ಕುಮಾರ್ ಒತ್ತಾಯಿಸಿದ್ದಾರೆ.
ಲಾಕ್‌ಡೌನಿಂದ ರೈತರು ಸಂಕಷ್ಟ ಎದು ರಿಸುವಂತಾಗಿದ್ದು, ಆಹಾರ ಧಾನ್ಯ ಬೆಳೆದ ರೈತರ ಉತ್ಪನ್ನಗಳಿಗೆ ಶೇ. 50ರಷ್ಟು ಬೆಲೆ ಕುಸಿದಿದೆ. ಭತ್ತ, ಮೆಕ್ಕೆಜೋಳ, ಹತ್ತಿ, ಕಡಲೆ, ತೊಗರಿ ಮತ್ತಿತರ ಬೆಳೆಗಳು, ಹಣ್ಣು, ತರಕಾರಿ ಬೆಳೆದ ರೈತರುಗಳಿಗೆ ಮಾರುಕಟ್ಟೆ, ಖರೀದಿದಾರರು ಇಲ್ಲದೆ ಶೇ.40ರಷ್ಟು ಉತ್ಪನ್ನಗಳು ಹಾಳಾಗಿದೆ. ರಾಜ್ಯದಲ್ಲಿ ಬೆಳೆದ ದ್ರಾಕ್ಷಿ, ಕರ್ಬುಜ, ಕಲ್ಲಂಗಡಿ, ಬಾಳೆ, ಪಪ್ಪಾಯ, ಟೊಮೋಟೊ ಬೆಳೆಗಳನ್ನು ಕೆಲವು ರೈತರು ಜಮೀನಿನಲ್ಲಿಯೇ ಉಳುಮೆ ಮಾಡಿ ನಾಶಮಾಡಿದ್ದಾರೆ. ಮತ್ತೆ ಕೆಲ ವರು ರಸ್ತೆಬದಿಯಲ್ಲಿ ಸುರಿದರು. ಇದರಿಂದ ಶೇ.40ರಷ್ಟು ಹಣ್ಣು, ತರಕಾರಿಗಳು ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದ ರೈತರಿಗೆ 1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು. ಕಬ್ಬು ಬೆಳೆದ ರೈತರಿಗೆ 4-5
ತಿಂಗಳಾದರೂ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸಿಲ್ಲ. ಹೀಗಾಗಿ ಸಾಲ ಮರು ಪಾವತಿ ಅಸಾಧ್ಯವಾಗಿದೆ. ಸಕ್ಕರೆ ಬೆಲೆ ಕುಸಿದಿದೆ ಹೊರದೇಶಕ್ಕೆ ರಫ್ತು ಆಗುತ್ತಿಲ್ಲ ಎಂದು ಕಾರ್ಖಾನೆಗಳ ಮಾಲೀಕರು ಸಬೂಬು ಹೇಳುತ್ತಿದ್ದಾರೆ.
ರಾಜ್ಯದ ರೈತರಿಗೆ ಸುಮಾರು 3,500 ಕೋಟಿ ಕಬ್ಬಿನ ಹಣ ಬಾಕಿ ಬರಬೇಕಾಗಿದೆ ರೈತರು ಪಡೆದ ಎಲ್ಲಾ ರೀತಿಯ ಕೃಷಿ ಸಾಲಗಳಿಗೆ ಬಡ್ಡಿ ವಿನಾಯಿತಿ ನೀಡಿ 2021ರ
ಮಾರ್ಚ್ 31ರ ವರೆಗೆ ಮರುಪಾವತಿ ಗಡುವು ವಿಸ್ತರಣೆ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.