ಆಸ್ತಿ ನೋಂದಣಿ: ರೆಡ್‌ ಝೋನ್‌ನವರೇ ಹೆಚ್ಚು

Team Udayavani, Apr 28, 2020, 5:31 PM IST

ಆಸ್ತಿ ನೋಂದಣಿ: ರೆಡ್‌ ಝೋನ್‌ನವರೇ ಹೆಚ್ಚು

ಸಾಂದರ್ಭಿಕ ಚಿತ್ರ

ಮಾಲೂರು: ಸರ್ಕಾರದ ನಿಯಮದಂತೆ ತಾಲೂಕು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿ ಮತ್ತು ವಿವಾಹ ನೋಂದಣಿ ಕಾರ್ಯವನ್ನು ಆರಂಭಿಸಿದ್ದು, ನೋಂದಣಿಗಾಗಿ ಬಂದ ಬಹುಪಾಲ ಜನರು ಬೆಂಗಳೂರಿನ ವಿವಿಧೆಡೆಗಳಿಂದ ಬಂದವರೇ ಹೆಚ್ಚು. ಕೋವಿಡ್ ಸೋಂಕು ಗಂಭೀರ ಸ್ವರೂಪದಲ್ಲಿರುವ ಕಾಲಘಟ್ಟದಲ್ಲಿಯೇ ಹಸಿರು ವಲಯವಾಗಿರುವ ತಾಲೂಕಿನಲ್ಲಿಯೂ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯಾರಂಭಕ್ಕೆ ಅವಕಾಶ ಕಲ್ಪಿಸಿದ್ದು, ಕಾಗದ ಪತ್ರ, ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಸೋಮವಾರ ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಗೆ ಬಂದು ಬಹುಪಾಲು ಜನರು ಬೆಂಗಳೂರು ಸುತ್ತಮುತ್ತಲಿನ ಪ್ರದೇಶದವರೇ ಆಗಿದ್ದು, ಆ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಿದ್ದು, ಕೆಂಪು ವಲಯವಾಗಿ ಗುರುತಿಸಿಕೊಂಡಿರುವ ಕಾರಣ ಉಪನೋಂದಣಾಧಿಕಾರಿಗಳ ಕಚೇರಿಯ ಸಿಬ್ಬಂದಿ, ಸ್ಥಳೀಯರು ಆತಂಕದಲ್ಲಿದ್ದಾರೆ.

ಈ ಬಗ್ಗೆ ತಮ್ಮ ಹೆಸರು ಬಹಿರಂಗ ಪಡಿಸಲು ಇಚ್ಚಿಸದ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, ಸಾರ್‌ ಇಲ್ಲಿನ ಅಧಿಕಾರಿಗಳು ಹೊರಗಿನವರನ್ನು ಕರೆಸಿಕೊಂಡು ನೋಂದಣಿ
ಮಾಡುತ್ತಿರುವ ಕಾರಣಗಳಿಂದ ಬೆಂಗಳೂರು ಸುತ್ತಮುತ್ತಲಿನಿಂದ ನೋಂದಣಿದಾರರ ಹೆಚ್ಚಾಗಿ ಬಂದಿದ್ದಾರೆ. ನಾವುಗಳು ಸಹ ಮನುಷ್ಯರೇ ನಮಗೂ ಜೀವ ಇದೆ. ಕುಟುಂಬಗಳಿವೆ, ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಬಗ್ಗೆ ಸ್ಥಳೀಯ ಪತ್ರಬರಹಗಾರರು ಅಧಿಕಾರಿಗಳನ್ನು ಪ್ರಶ್ನಿಸಿದಲ್ಲಿ ಆನ್‌ಲೈನ್‌ನಲ್ಲಿ ದಾಖಲೆಗಳು ಬಂದಿರುವುದಾಗಿ ಅಧಿಕಾರಿಗಳು ಉತ್ತರಿಸುತ್ತಿದ್ದಾರೆ. ಡೀಸಿ ನಿರ್ದೇಶನದಂತೆ ನೋಂದಣಿ ಮಾಡಲಾಗುತ್ತಿದೆ ಎಂದು ಉಪನೋಂದಣಾಧಿಕಾರಿ ಪದ್ಮಾವತಿ ಹೇಳಿದ್ದಾರೆ.

ಮಾಲೂರು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಬೆಂಗಳೂರು ಸುತ್ತಮುತ್ತಲಿನವರ ದಾಖಲೆ ನೋಂದಾಯಿಸುತ್ತಿರುವ ಬಗ್ಗೆ ಆರಂಭದಲ್ಲಿ ತಹಶೀಲ್ದಾರ್‌ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಸ್ಥಳೀಯ ಉಪನೋಂದಣಾಧಿಕಾರಿಗಳು ಎರಡು ದಾಖಲೆ ನೋಂದಣಿಗೆ ಮುಂದಾಗಿದ್ದಾರೆ. ಅಂತಿಮವಾಗಿ ಜಿಲ್ಲೆಯ ಹಸಿರು ವಲಯದ ವಾಸಿಗಳ ಪತ್ರ ಮಾತ್ರ ನೋಂದಣಿಗೆ ಡೀಸಿ ನಿರ್ದೇಶನ ನೀಡಿದ್ದಾರೆ.
●ಗೋವಿಂದ ಸ್ವಾಮಿ, ಅಧ್ಯಕ್ಷ, ಸಮತಾ ಸೈನಿಕ ದಳ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.