ಅಮೆರಿಕದಲ್ಲಿ 10ಲಕ್ಷ ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ: 59 ಸಾವಿರ ಮಂದಿ ಸಾವು
ಅಮೆರಿಕಾ 10 ಲಕ್ಷಕ್ಕೂ ಹೆಚ್ಚು ಕೋವಿಡ್ 19 ಪ್ರಕರಣಗಳನ್ನು ಹೊಂದಿರುವ ಮೊದಲ ದೇಶವಾಗಿದೆ
Team Udayavani, Apr 29, 2020, 7:59 AM IST
ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ -19 ಪ್ರತಾಪ ನಿಲ್ಲುವ ಲಕ್ಷಣ ಗೋಚರಸುತ್ತಿಲ್ಲವಾಗಿದ್ದು ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಮೃತಪಟ್ಟವರ ಸಂಖ್ಯೆ ಕೂಡ ಸುಮಾರು 59 ಸಾವಿರಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪ್ರಮಾಣ, ಮತ್ತು ಸಾವಿನ ಪ್ರಮಾಣ ಹೆಚ್ಚಾಗಿರುವ ದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ಆದರೇ ಕಳೆದ ಹಲವು ದಿನಗಳಿಗೆ ಹೋಲಿಸಿದರೆ ವೈರಾಣುವಿನ ಪ್ರಭಾವ ಕೊಂಚ ಮಟ್ಟಿಗೆ ಕಡಿಮೆಯಾಗಿದ್ದು ಹಲವು ರಾಜ್ಯಗಳು ತಮ್ಮ ಆರ್ಥಿಕತೆಯನ್ನು ಚೇತರಿಸಿಕೊಳ್ಳುವತ್ತ ಗಮನಹರಿಸಿವೆ.
ನಾವು ಬಲಿಪಶುಗಳಾಗಿದ್ದು, ಈಗಾಗಲೇ ಮೃತಪಟ್ಟವರಿಗಾಗಿ ಶೋಕ ವ್ಯಕ್ತಪಡಿಸುತ್ತಿದ್ದೇವೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಅಮೆರಿಕನ್ನರಿಗೆ ಆ ದು:ಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಾವು ಈ ವೈರಸ್ ವಿರುದ್ಧ ಖಂಡಿತಾ ಗೆಲ್ಲುತ್ತೇವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಅಮೆರಿಕಾ 10 ಲಕ್ಷಕ್ಕೂ ಹೆಚ್ಚು ಕೋವಿಡ್ 19 ಪ್ರಕರಣಗಳನ್ನು ಹೊಂದಿರುವ ಮೊದಲ ದೇಶವಾಗಿದೆ. ಇದೀಗ ಒಟ್ಟಾರೆಯಾಗಿ 10,35,765 ಪ್ರಕರಣಗಳಿದ್ದು, 59,266 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ನ್ಯೂಯಾರ್ಕ್ ನಗರದಲ್ಲೇ ಅತೀ ಹೆಚ್ಚು ಪ್ರಕರಣಗಳಿದ್ದು ನಂತರದ ಸ್ಥಾನದಲ್ಲಿ ನ್ಯೂಜೆರ್ಸಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.