ಲಾಕ್‌ಡೌನ್‌ ಸಡಿಲಿಕೆಯಾಗಿಲ್ಲ : ಶಿವಕುಮಾರ್‌

ಜನ ತಪ್ಪು ಸಂದೇಶಗಳನ್ನು ನಂಬದಿರಿ ಕಚೇರಿ ಕೆಲಸದ ನಂತರ ಮನೆಗೆ ತೆರಳಲು ನೌಕರರಿಗೆ ಜಿಲ್ಲಾಧಿಕಾರಿ ಸೂಚನೆ

Team Udayavani, Apr 29, 2020, 1:17 PM IST

29-April-12

ಶಿವಮೊಗ್ಗ: ಪೊಲೀಸರು- ಆರೋಗ್ಯ ಇಲಾಖೆಯವರಿಂದ ಕೋವಿಡ್ ಜಾಗೃತಿ.

ಶಿವಮೊಗ್ಗ: ಕೋವಿಡ್ ನಿಂದ ಜನರನ್ನು ರಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ ಲಾಕ್‌ಡೌನ್‌ ಘೋಷಿಸಿದ್ದು, ಆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಲಾಕ್‌ಡೌನ್‌ ಸಡಿಲಗೊಳಿಸಲಾಗಿದೆ ಎಂದು ತಪ್ಪು ಸಂದೇಶ ಹರಿದಾಡುತ್ತಿದ್ದು, ಇದನ್ನೆಲ್ಲ ಜನ ನಂಬದೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

ಅವರು ಮಂಗಳವಾರ ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಗೋಪಿ ವೃತ್ತದಲ್ಲಿ ಜನಜಾಗೃತಿಗಾಗಿ ಏರ್ಪಡಿಸಲಾಗಿದ್ದ ಬೀದಿನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ಸೋಂಕಿನಿಂದ ಸ್ವಯಂ ಸಂರಕ್ಷಿಸಿಕೊಳ್ಳಬಹುದಾದ ವಿಧಾನಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಾಟಕಗಳ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿದೆ. ಯಾವುದೇ ಸೋಂಕು ಬರುವ ಮುನ್ನ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅನುಕೂಲಕರ ಎಂದರು.

ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ಸಂಬಂಧಿತ ವಿವಿಧ ಇಲಾಖೆ ಅಧಿಕಾರಿ-ಸಿಬ್ಬಂದಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಮಾನ್ಯ ಮುಖ್ಯಮಂತ್ರಿಗಳು ಕಾಲಕಾಲಕ್ಕೆ ನೀಡಿದ ಸೂಚನೆಗಳಿಂದಾಗಿ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ದಾಖಲಾಗಿಲ್ಲ. ಇದರಿಂದಾಗಿ ಶಿವಮೊಗ್ಗ ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ. ಅದಕ್ಕಾಗಿ ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.

ಪ್ರಸ್ತುತ ಲಾಕ್‌ಡೌನ್‌ ಇದ್ದಾಗ್ಯೂ ಜನಸಾಮಾನ್ಯರ ಅನುಕೂಲಕ್ಕೆ ತೊಂದರೆಯಾಗದಿರಲೆಂದು ಜನರು ತಮ್ಮ ಅಗತ್ಯ ವಸ್ತುಗಳ ಖರೀದಿಸಲು, ಬ್ಯಾಂಕುಗಳಿಗೆ ತೆರಳಲು, ಸೀಮಿತ ಅವಧಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಕ್ಕಾಗಿ ಅವಕಾಶ ಮಾಡಿಕೊಡಲಾಗಿದೆ. ಕಚೇರಿ ಸಿಬ್ಬಂದಿ ಕೂಡ ಕಚೇರಿ ಕೆಲಸದ ನಂತರ ನೇರವಾಗಿ ಮನೆಗೆ ತೆರಳುವಂತೆ ಸೂಚಿಸಲಾಗಿದೆ. ಆದರೆ ಸಾರ್ವಜನಿಕ ವಲಯದಲ್ಲಿ ಲಾಕ್‌ಡೌನ್‌ ಸಡಿಲಗೊಂಡು ಜನರ ಅನುಕೂಲಕ್ಕೆ ತಕ್ಕಂತೆ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂಬ ಬಗ್ಗೆ ತಪ್ಪು ಸಂದೇಶ ಹರಿದಾಡುತ್ತಿದೆ. ಇದು ಸರಿಯಲ್ಲ. ಲಾಕ್‌ಡೌನ್‌ ಸಡಿಲಗೊಳಿಸಿಲ್ಲ. ಅದು ಸರ್ಕಾರದ ಮುಂದಿನ ಆದೇಶದವರೆಗೆ ಮುಂದುವರೆಯಲಿದೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗಿಳಿದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದವರು ಎಚ್ಚರಿಸಿದ್ದಾರೆ.

ಅಗತ್ಯತೆಗಳಿಗಾಗಿ ನಗರದಲ್ಲಿ ಸಂಚರಿಸುವ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು. ಕೈಗವಸು ಹಾಕಿಕೊಳ್ಳುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ಕೃಷಿ ಚಟುವಟಿಕೆ, ರಸಗೊಬ್ಬರ-ಬೀಜಗಳ ಮಾರಾಟ ಮತ್ತು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೃಷಿಕರು ತಮ್ಮ ಕೃಷಿ ಉತ್ಪನ್ನಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಾರಾಟ ಮತ್ತು ಊರಿಂದೂರಿಗೆ ಸಾಗಾಟ ಮಾಡಬಹುದಾಗಿದೆ ಎಂದರು.

ಕೆಲಸವನ್ನರಸಿ ಶಿವಮೊಗ್ಗ ಜಿಲ್ಲೆಗೆ ಬಂದಿದ್ದ ಹೊರರಾಜ್ಯಗಳ 400ಕ್ಕೂ ಹೆಚ್ಚಿನ ಕಾರ್ಮಿಕರು ಇದ್ದು, ಅವರನ್ನು ಅವರ ಮೂಲಸ್ಥಳಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ನಾಳೆಯೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಕೆ.ಶಾಂತರಾಜು ಸೇರಿದಂತೆ ಪೊಲೀಸ್‌ ಇಲಾಖೆ ಅಧಿಕಾರಿ-ಸಿಬ್ಬಂದಿ ಹಾಗೂ ಸ್ವಯಂ ಸೇವಾ ಸಂಸ್ಥೆಯ ಕಲಾವಿದರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sonia gandhi

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

9

BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ

car-parkala

Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Sonia gandhi

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.