ಆಶಾಗಳ ಸಂಬಳ ಹೆಚ್ಚಳಕ್ಕೆ ಸಿಎಂಗೆ ಪತ್ರ
ಕೋವಿಡ್ ವಾರಿಯರ್ಗೆ ಮಾಸ್ಕ್-ದಿನಸಿ ಕಿಟ್ ವಿತರಣೆ, ಕೋವಿಡ್ ತಡೆಗೆ ಸಹಕರಿಸಲು ನಡಹಳ್ಳಿ ಮನವಿ
Team Udayavani, Apr 29, 2020, 1:35 PM IST
ಮುದ್ದೇಬಿಹಾಳ: ತಾಲೂಕಿನ ಆಶಾ, ಆರೋಗ್ಯ ಕಾರ್ಯಕರ್ತರಿಗೆ ಶಾಸಕ ನಡಹಳ್ಳಿ ಮಾಸ್ಕ್, ಆಹಾರ ಸಾಮಗ್ರಿ ಕಿಟ್, ಅಲ್ಪೋಪಹಾರ ವಿತರಿಸಿದರು.
ಮುದ್ದೇಬಿಹಾಳ: ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸಂಬಳವನ್ನು ಕೋವಿಡ್ ಹಾವಳಿ ಮುಗಿಯುವವರೆಗಾದರೂ ದ್ವಿಗುಣಗೊಳಿಸಲು ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇಲ್ಲಿನ ಎಂಜಿವಿಸಿ ಕಾಲೇಜು ಮೈದಾನದಲ್ಲಿ ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕವಚ ಆ್ಯಂಬುಲೆನ್ಸ್ ಸಿಬ್ಬಂದಿ ಸೇರಿ ಸುಮಾರು 400 ಜನರಿಗೆ ಮಂಗಳವಾರ ಅಲೊ³àಪಹಾರ, ಗುಣಮಟ್ಟದ ಎನ್-95 ಮಾಸ್ಕ್, ಆಹಾರ ಸಾಮಗ್ರಿ ಕಿಟ್ ವಿತರಿಸಿ ಅವರು ಮಾತನಾಡಿದರು. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹಾರಕ್ಕೆ ಮತ್ತು ಸಂಬಳ ಹೆಚ್ಚಳ ವಿಷಯ ಪ್ರಸ್ತಾಪಿಸುವೆ ಎಂದರು.
ಇದುವರೆಗೆ ತಾಲೂಕಿನಾದ್ಯಂತ ಎನ್-95 ಗುಣಮಟ್ಟದ 1000 ಮಾಸ್ಕ್ ಹಂಚಲಾಗಿದೆ. ಇನ್ನೂ ಹೆಚ್ಚಿನ ಮಾಸ್ಕ್ಗಳನ್ನು ಅಹಮದಾಬಾದ್‌ನಿಂದ ತರಿಸಿ ಎಲ್ಲರಿಗೂ ತಲುಪಿಸುವ ಉದ್ದೇಶವಿದೆ. ಕೋವಿಡ್ ಹಾವಳಿ ಸಂಪೂರ್ಣ ತೊಲಗುವವರೆಗೂ ನಿಮ್ಮೆಲ್ಲರ ಮನೆ ಮನೆಗೆ ಆಹಾರದ ಕಿಟ್ ತಲುಪಿಸುವೆ ಎಂದರು. ಸರ್ಕಾರ ವಿಶೇಷ ಅನುಮತಿ ಕೊಟ್ಟಕೂಡಲೇ ಬೇರೆ ರಾಜ್ಯಕ್ಕೆ ದುಡಿಯಲು ಹೋದ ಇಲ್ಲಿನ ಬಡಜನರು ಮರಳಿ ಬರುತ್ತಾರೆ. ಅವರ ಆರೋಗ್ಯ ತಪಾಸಣೆ ಜೊತೆಗೆ ಹಸಿವನ್ನು ತಣಿಸುವುದು ನಮ್ಮೆಲ್ಲರ ಮುಂದಿರುವ ದೊಡ್ಡ ಸವಾಲು. ಇದನ್ನು ವ್ಯವಸ್ಥಿತವಾಗಿ ಮಾಡಬೇಕಿದೆ ಎಂದರು.
ಸಿಪಿಐ ಆನಂದ ವಾಗಮೋಡೆ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ಸರ್ಕಾರಿ ನೌಕರರ ಸಂಘದ ಆರೋಗ್ಯ ಇಲಾಖೆ ಪ್ರತಿನಿಧಿ ಎಂ.ಎಸ್.ಗೌಡರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಪುರಸಭೆ ಸಿಬ್ಬಂದಿ ರಮೇಶ ಮಾಡಬಾಳ, ಬಸವರಾಜ ನಂದಿಕೇಶ್ವರಮಠ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು. ಶಾಸಕರು ಸ್ವತಃ ತಾವೇ ಎಲ್ಲರಿಗೂ ಅಲ್ಪೋಪಹಾರ ಹಂಚಿ ಸರಳತೆ ಮೆರೆದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಕಿದ್ದ ಸುಣ್ಣದ ಗೆರೆಯ ಬಾಕ್ಸ್
ನಲ್ಲೇ ಎಲ್ಲರನ್ನೂ ಕೂಡಿಸಿದ್ದು ಗಮನಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.