ನರೇಗಾದಡಿ ಕೆಲಸ ನೀಡಿ: ಈಶ್ವರ


Team Udayavani, Apr 29, 2020, 7:03 PM IST

29-April-15

ಭಾಲ್ಕಿ: ಮೊರಂಬಿಯಲ್ಲಿ ನರೇಗಾದಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿಯನ್ನು ಶಾಸಕ ಈಶ್ವರ ಖಂಡ್ರೆ ವೀಕ್ಷಿಸಿದರು.

ಭಾಲ್ಕಿ: ತಾಲೂಕಿನ ಉಚ್ಛಾ ಹಾಗೂ ಮೊರಂಬಿ ಗ್ರಾಮಗಳಿಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದರು.

ಶಾಸಕ ಈಶ್ವರ ಖಂಡ್ರೆ ಅಧಿಕಾರಿಗಳ ತಂಡದೊಂದಿಗೆ ಉಚ್ಛಾ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಚೆಕ್‌ಡ್ಯಾಂ ಹಾಗೂ ಮೊರಂಬಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ ಸಮೀಪ
ಸಸಿ ನೆಡಲು ತೊಡುತ್ತಿರುವ ತಗ್ಗು ವೀಕ್ಷಿಸಿ, ಉದ್ಯೋಗ ಖಾತ್ರಿ ಚೀಟಿ ವಿತರಿಸಿದರು.

ಬಳಿಕ ಮಾತನಾಡಿದ ಅವರು, ಕೋವಿಡ್ ಸೋಂಕು ಹರಡುವಿಕೆ ಭೀತಿಯಿಂದ ಇಡೀ ದೇಶವೇ ಲಾಕ್‌ಡೌನ್‌ ಮಾಡಲಾಗಿದೆ. ಇದರಿಂದ ಬಡ ಜನರು, ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಷೇತ್ರದ ಬಡವರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ನಾನು ಹಾಗೂ ತಮ್ಮ ಬೆಂಬಲಿಗರು ಆಹಾರದ ಪೊಟ್ಟಣ, ತರಕಾರಿ ಕಿಟ್‌ ನೀಡುವ ಮೂಲಕ ನೆರವಿಗೆ ಧಾವಿಸಲಾಗಿದೆ. ಪಡಿತರ ಕಾರ್ಡ್‌ ಹೊಂದಿದ ಎಲ್ಲ ಫಲಾನುಭವಿಗಳು, ಕಾರ್ಡ್‌ ರಹಿತ ಎಲ್ಲ ಜನರಿಗೂ ಎರಡು ತಿಂಗಳ ಪಡಿತರ ಮುಂಗಡವಾಗಿ ನೀಡಲು ಕ್ರಮ ಜರುಗಿಸಲಾಗಿದೆ. ಜತೆಗೆ ಎಲ್ಲ 40 ಗ್ರಾಪಂ ವ್ಯಾಪ್ತಿಗಳಲ್ಲಿ ನರೇಗಾದಡಿ ಪ್ರತಿ ಗ್ರಾಪಂನಿಂದ ಒಬ್ಬರಿಗೆ 275 ರೂ. ಕೂಲಿಯಂತೆ ಪ್ರತಿದಿನ ಕನಿಷ್ಟ 250 ಜನರಿಗೆ 25 ದಿವಸ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಜಿಪಂ ಸದಸ್ಯ ಅಂಬಾದಾಸ ಕೋರೆ, ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ್‌, ತಾಪಂ ಇಒ ಬಸವರಾಜ ನಾಯಕರ್‌, ಶಶಿಧರ ಕೋಸಂಬೆ, ಪಿಡಿಒ ರಾಹುಲ
ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.