ಎಚ್ಚರ..ಬಡಿಗೆ ಹಿಡಿದು ಬರ್ತಿದಾರೆ!
Team Udayavani, Apr 30, 2020, 3:57 PM IST
ಶಹಾಬಾದ: ಕೋವಿಡ್ ವೈರಸ್ ಹರಡದಂತೆ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು.
ಶಹಾಬಾದ: ಇವರು ಪೊಲೀಸರಲ್ಲ..ಆದರೂ ಕೈಯಲ್ಲಿ ಬಡಿಗೆ ಹಿಡಿದು, ಸೀಟಿ ಹೊಡೆಯುತ್ತಾ ಬಂದರೆ ಜನರೆಲ್ಲ ಮನೆಗೆ ಓಡಿಹೋಗುತ್ತಾರೆ. ಹೌದು! ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಂಕೂರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಜನ ಜಾಗೃತಿ ಮೂಡಿಸುತ್ತಿರುವ ರೀತಿ ಇದು.
ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುತ್ತಿದ್ದರೆ ಅಲ್ಲಿಗೆ ಬಡಿಗೆ ಹಿಡಿದು, ಸೀಟಿ ಹೊಡೆಯುತ್ತಾ ದೌಡಾಯಿಸಿ ಮನೆಗೆ ಹೋಗುವಂತೆ ಮಾಡುತ್ತಿದ್ದಾರೆ ಈ ಆಶಾ ಕಾರ್ಯಕರ್ತೆಯರು. ಅಲ್ಲದೇ ದಿನಸಿ ಅಂಗಡಿ, ತರಕಾರಿ ಅಂಗಡಿ ಎದುರು ನಿಲ್ಲುವ ಗ್ರಾಹಕರು, ಮಾಲೀಕರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿ ಹೇಳುತ್ತಿದ್ದಾರೆ. ಇವರ ಕಾರ್ಯ ಇಷ್ಟಕ್ಕೇ ಸೀಮಿತವಾಗಿಲ್ಲ. ಜತೆಗೆ ಗ್ರಾಮದ ಪ್ರತಿಯೊಂದು ಓಣಿಗಳಲ್ಲಿಯೂ ಓಡಾಡುವ ಮೂಲಕ ಪಕ್ಕದ ಜಿಲ್ಲೆ, ರಾಜ್ಯದಿಂದ ಬಂದವರನ್ನು ಗುರುತಿಸಿ ತಾಲೂಕಾಡಳಿತಕ್ಕೆ ತಿಳಿಸುತ್ತಿದ್ದಾರೆ.
ತಾಲೂಕಾಡಳಿತದಿಂದ ಬಂದ ಆಹಾರ ಧಾನ್ಯಗಳ ಕಿಟ್‌ಗಳನ್ನು ಮತ್ತು ಹಾಲಿನ ಪಾಕೆಟ್‌ಗಳನ್ನು ಬಡ ಕುಟುಂಬದವರಿಗೆ ಹಂಚುವ ಜವಾಬ್ದಾರಿ ಹೊತ್ತಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೇ ಅಪಾಯಕಾರಿ ಪರಿಸ್ಥಿತಿಯಲ್ಲಿಯೂ ಮನೆ-ಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ತಪಾಸಣೆಯನ್ನು ಇವರು ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮಲ್ಲಿನಾಥ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.