ಸೇತುವೆ ಉದ್ಘಾಟನೆ-ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಜಾರಕಿಹೊಳಿ
Team Udayavani, Apr 29, 2020, 4:21 PM IST
ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಲಮಟ್ಟಿ: ಲಾಕ್‌ಡೌನ್ ಇದ್ದರೂ ಶಿಷ್ಟಾಚಾರ ಉಲ್ಲಂಘಿಸಿ ಮುಳವಾಡ ಏತ ನೀರಾವರಿ ಯೋಜನೆಯ ಕೂಡಗಿ ಬಳಿ ಅಂಡರ್ ಪಾಸ್ ಸೇತುವೆ ಹಾಗೂ ತಿಡಗುಂದಿ ಮೇಲ್ಸೇತುವೆ ಕಾಲುವೆಗಳ ಉದ್ಘಾಟನೆಗೆ ಕಾರಣರಾದ ಅ ಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಆಲಮಟ್ಟಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿಷ್ಟಾಚಾರ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ದ ಬುಧವಾರ ಸಂಜೆಯೊಳಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಆಲಮಟ್ಟಿ ಜಲಾಶಯ ಎತ್ತರಕ್ಕೆ ಚಿಂತನೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಗೆ ಎತ್ತರಿಸಲು ನ್ಯಾ| ಬ್ರಿಜೇಶಕುಮಾರ ನೇತೃತ್ವದ ಎರಡನೇ ಕೃಷ್ಣಾ ನ್ಯಾಯಾಧಿಕರಣ ಆದೇಶಿಸಿದೆ. ಆದರೆ ಇನ್ನೂ ಕೇಂದ್ರದಿಂದ ಅಧಿಸೂಚನೆಯಾಗಿಲ್ಲ (ಗೆಜೆಟ್) ಮತ್ತು ಜಲಾಶಯವನ್ನು ಹಂತ ಹಂತವಾಗಿ ಎತ್ತರಿಸಲು ಚಿಂತನೆ ನಡೆದಿದೆ ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಕರಣಗೊಳಿಸಲು ಮುಖ್ಯಮಂತ್ರಿ ಹಾಗೂ ಸ್ಪೀಕರ್ ಪರವಾನಗಿ ಪಡೆದು ಕೇಂದ್ರ ಸಚಿವರನ್ನು ಎರಡು ಬಾರಿ ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದರು. ಮಳೆಗಾಲದಲ್ಲಿ ಹಳ್ಳ-ಕೊಳ್ಳಗಳು ಸೇರಿದಂತೆ ವಿವಿಧ ಮೂಲಗಳಿಂದ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಹೂಳು ಹರಿದು ಬರುವುದನ್ನು ತಡೆಗಟ್ಟಲು ತಾಂತ್ರಿಕ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಲಾಶಯಗಳ ಮಧ್ಯದಲ್ಲಿ ಜಿಲ್ಲೆಗಳಿಗೆ ನೀರು ಹಂಚಿಕೆಯಲ್ಲಿರುವ ವ್ಯತ್ಯಾಸವನ್ನು ಸರಿಪಡಿಸಲು ಅ ಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಸಿಎಂ ಯಡಿಯೂರಪ್ಪನವರು ನೀರಾವರಿಗೆ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಾಕ್‌ಡೌನ್ ತೆರವುಗೊಳಿಸಿದ ನಂತರ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಲಿವೆ. ಸರ್ಕಾರದಲ್ಲಿ ಹಣದ ಕೊರತೆಯಿಲ್ಲ ಎಂದು ಹೇಳಿದರು.ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ಅರುಣ ಶಹಾಪುರ, ಹನುಮಂತ ನಿರಾಣಿ, ಎಂ.ಸಿ.ಮನಗೂಳಿ ಇತರರಿದ್ದರು.
ಜಲಾಶಯಕ್ಕೆ ಸಚಿವ ಜಾರಕಿಹೊಳಿ ಭೇಟಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಆಲಮಟ್ಟಿ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಜಲಾಶಯ ಹಾಗೂ ವಿವಿಧ ಯೋಜನೆಗಳ ಮಾಹಿತಿ ಪಡೆದರು. ಮುಖ್ಯಅಭಿಯಂತರ ಆರ್.ಪಿ.ಕುಲಕರ್ಣಿ ಅವರು ನೀರಿನ ಸಂಗ್ರಹ, ಗೇಟ್‌ಗಳ ನಿರ್ವಹಣೆ, ಯಾತ್ರಿ ನಿವಾಸ, ವೈರ್ ಕಾರ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಮುಳವಾಡ ಏತನೀರಾವರಿ ಯೋಜನೆಯ ಜಾಕ್‌ವೆಲ್ ಗಳ ಯಂತ್ರಗಳು, ವಿದ್ಯುತ್ ಪರಿವರ್ತಕಗಳ ದುರಸ್ತಿ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಕಾಲುವೆಗಳಿಗೆ ನೀರು ಹರಿಯಲು ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದರು. ಆಲಮಟ್ಟಿ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರ ಡಿ.ಬಸವರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ವಿ.ಜಿ.ಕುಲಕರ್ಣಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.