ನೇಕಾರರಿಗೆ ಪರಿಹಾರ ಒದಗಿಸಲು ಆಗ್ರಹ
Team Udayavani, Apr 29, 2020, 5:05 PM IST
ಮುನವಳ್ಳಿ: ಕೋವಿಡ್ 19 ಹಿನ್ನೆಲೆಯಲ್ಲಿ ತಿಂಗಳಿನಿಂದ ಲಾಕಡೌನ್ ಇದ್ದು, ನಷ್ಟ ಅನುಭವಿಸುತ್ತಿರುವ ಪಟ್ಟಣದ 150ಕ್ಕೂ ಹೆಚ್ಚು ನೇಕಾರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ನೇಕಾರ ಸಮಾಜದ ವತಿಯಿಂದ ರಾಜ್ಯ ವಿಧಾನಸಭೆ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಇವರಿಗೆ ಮನವಿ ಸಲ್ಲಿಸಲಾಯಿತು.
ನೇಕಾರಿಕೆಯನ್ನೇ ಮೂಲಕಸಬನ್ನಾಗಿಸಿ ಕೊಂಡು ಜೀವನ ಮಾಡುತ್ತಿರುವ ಬಡ ನೇಕಾರ ಕುಟುಂಬಗಳು ಲಾಕ್‌ಡೌನ್ ದಿಂದ ಬಹಳ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ದೈನಂದಿನ ಜೀವನ ಮಾಡುವುದು ಕಠಿಣವಾಗಿದೆ. ಇತ್ತೀಚಿಗಷ್ಟೇ ಪ್ರವಾಹದಿಂದ ಮನೆ, ಉದ್ಯೋಗವನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸಿ ಇನ್ನೇನು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ಮತ್ತೆ ಗಾಯಕ್ಕೆ ಬರೆ ಹಚ್ಚಿದಂತಾಗಿದೆ. ಆದ್ದರಿಂದ ಕೂಡಲೇ ಸರ್ಕಾರ ನೇಕಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸುಭಾಸ ಸಣಕಲ್ಲ, ಮಲ್ಲೇಶ ಸೂಳೇಭಾಂವಿ, ವಿಲಾಸ ಸಣಕಲ್ಲ, ವೆಂಕಟೇಶ ದಿನ್ನಿಮನಿ, ಚನ್ನಪ್ಪ ಕಳಸನ್ನವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.