ಅರ್ಹರಿಗೆ ಆಹಾರ ಕಿಟ್‌ ನೀಡಿ: ಶಾಸಕ ಹಾಲಪ್ಪ


Team Udayavani, Apr 29, 2020, 6:09 PM IST

ಅರ್ಹರಿಗೆ ಆಹಾರ ಕಿಟ್‌ ನೀಡಿ: ಶಾಸಕ ಹಾಲಪ್ಪ

ಯಲಬುರ್ಗಾ: ತಾಲೂಕಿನ ಜನತೆ ಲಾಕ್‌ ಡೌನ್‌ ನಿಯಮ ಪಾಲಿಸಬೇಕು. ಬಡ ಜನತೆ ಲಾಕ್‌ಡೌನ್‌ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ವೈಯಕ್ತಿಕವಾಗಿ ಒಂದು ಸಾವಿರ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಅವುಗಳನ್ನು ತಾಲೂಕಾಡಳಿತ ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಮಂಗಳವಾರ ಸುಮಾರು ಒಂದು ಸಾವಿರ ಅಗತ್ಯ ದಿನಸಿ ಆಹಾರ ಧಾನ್ಯ ಕಿಟ್‌ಗಳನ್ನು ತಾಲೂಕಾಡಳಿತಕ್ಕೆ ನೀಡಿ ಅವರು ಮಾತನಾಡಿದರು. ಸರಕಾರದಿಂದ ಯಾವ ಸೌಲಭ್ಯ ಪಡೆಯದೆ ವಂಚಿತರಾದ ಕಡು ಬಡವರನ್ನು ಗುರುತಿಸಿ ಆಹಾರ ಧಾನ್ಯ ಕಿಟ್‌ಗಳನ್ನು ಜನರ ಮನೆಗೆ ಬಾಗಿಲಿಗೆ ತಲುಪಿಸಬೇಕು ಎಂದು ತಹಶೀಲ್ದಾರ್‌ ಅವರಿಗೆ ಸೂಚಿಸಿದರು.

ತಾಲೂಕಾಡಳಿತ ಸರ್ವೇ ನಡೆಸಿ ಬಡವರ ಪಟ್ಟಿ ಸಿದ್ದಪಡಿಸಿದೆ. ಅಂತಹ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ದಿನಸಿ ಆಹಾರ ಧಾನ್ಯ ಕಿಟ್‌ಗಳನ್ನು ವಿತರಿಸಬೇಕು. ಅನ್ಯರ ಪಾಲಾಗದಂತೆ ಕಡು ಬಡವರಿಗೆ ಮುಟ್ಟಿಸುವ ಕಾರ್ಯವನ್ನು ತಾಲೂಕಾಡಳಿತ ಮಾಡಬೇಕು. ತಾಲೂಕಿನಲ್ಲಿ ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಆಹಾರ ಧಾನ್ಯಗಳ ಕಿಟ್‌ ಸೇರಿದಂತೆ ಯಾವುದಾದರೂ ನೆರವು ನೀಡುವ ಇಚ್ಚೆ ಹೊಂದಿದ್ದರೆ ಕೂಡಲೇ ತಾಲೂಕಾಡಳಿತಕ್ಕೆ ತಲುಪಿಸಬೇಕು ಎಂದರು. ಬಸವಲಿಂಗಪ್ಪ ಭೂತೆ, ಸಿ.ಎಚ್‌ ಪೊಲೀಸಪಾಟೀಲ, ಬಿಜೆಪಿ ತಾಲೂಕಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್‌, ವೀರಣ್ಣ ಹುಬ್ಬಳ್ಳಿ, ಈರಪ್ಪ ಕುಡಗುಂಟಿ, ಶರಣಪ್ಪ ಈಳಿಗೇರ, ಹಂಚ್ಯಾಳಪ್ಪ ತಳವಾರ, ಸಿದ್ದರಾಮೇಶ್ವರ ಬೇಲೇರಿ, ಷಣ್ಮುಖಪ್ಪ ರಾಂಪೂರ, ಸುರೇಶಗೌಡ ಶಿವನಗೌಡ್ರ, ಶಂಭು ಜೋಳದ, ಡಿವೈಎಸ್ಪಿ ವೆಂಕಟಪ್ಪ ನಾಯಕ, ತಹಶೀಲ್ದಾರಗಳಾದ ಶ್ರೀಶೈಲ್‌ ತಳವಾರ, ಕಿರಣಕುಮಾರ, ಇಒ ಜಯರಾಂ ಚವ್ಹಾಣ, ಮಹೇಶ ನಿಡಶೇಷಿ, ಎಂ.ನಾಗರಡ್ಡಿ, ಹನುಮಂತಪ್ಪ ತಳವಾರ ಇದ್ದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.