ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಇನ್ನಿಲ್ಲ
Team Udayavani, Apr 30, 2020, 9:56 AM IST
ಮುಂಬೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ (67) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದ ಇವರು ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದರಿಂದ ಮುಂಬೈನ ಸರ್ ಹೆಚ್. ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಇಂದು ತಮ್ಮ 67ನೇ ವಯಸ್ಸಿಗೆ ನಿಧನರಾಗಿದ್ದಾರೆ. ಸಹೋದರ ರಣಧೀರ್ ಕಪೂರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ನಿನ್ನೆಯಷ್ಟೇ ನಟ ಇರ್ಫಾನ್ ಖಾನ್ ಅವರನ್ನು ಕಳೆದುಕೊಂಡ ದುಃಖ ಮಾಸುವ ಮೊದಲೇ ಭಾರತೀಯ ಚಿತ್ರರಂಗದ ಮೊತ್ತೊಬ್ಬ ದಿಗ್ಗಜ ನಟ ರಿಷಿ ಕಪೂರ್ ಇಂದು ನಮ್ಮನಗಲಿದ್ದಾರೆ. 2018 ಕ್ಯಾನ್ಸರ್ ಕಾಣಿಸಿಕೊಂಡ ನಂತರ ರಿಷಿ ಕಪೂರ್ ಅಮೆರಿಕಾದ ನ್ಯೂಯಾರ್ಕ್ ಗೆ ತೆರಳಿ ಒಂದು ವರ್ಷ ಚಿಕಿತ್ಸೆ ಪಡೆದು ಕಳೆದ ಸೆಪ್ಟೆಂಬರ್ನಲ್ಲಿ ಭಾರತಕ್ಕೆ ವಾಪಾಸಾಗಿದ್ದರು. ಫೆಬ್ರವರಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಎರಡು ಭಾರೀ ಆಸ್ಪತ್ರೆಗೆ ದಾಖಲಾಗಿದ್ದರು.
ಇತ್ತೀಚೆಗಷ್ಟೇ ದೀಪಿಕಾ ಪಡುಕೋಣೆ ಜೊತೆ ಸಿನಿಮಾ ಮಾಡುವುದಾಗಿ ಅವರು ಘೋಷಣೆ ಕೂಡ ಮಾಡಿದ್ದರು. ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
T 3517 – He’s GONE .. ! Rishi Kapoor .. gone .. just passed away ..
I am destroyed !— Amitabh Bachchan (@SrBachchan) April 30, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.