ದ.ಕ: ಕೋವಿಡ್ ಹೊಸ ಪ್ರಕರಣವಿಲ್ಲ
Team Udayavani, Apr 30, 2020, 10:13 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಒಟ್ಟು ಸ್ವೀಕೃತವಾದ 390 ಗಂಟಲ ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಎಲ್ಲವೂ ನೆಗೆಟಿವ್ ಆಗಿದ್ದು, ಕಳೆದೆರಡು ದಿನಗಳಿಂದ ಜಿಲ್ಲೆಗೆ ಕೊಂಚ ನೆಮ್ಮದಿ ತಂದಿದೆ.
ಹೊಸದಾಗಿ 248 ಮಂದಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 394 ವರದಿ ಸ್ವೀಕೃತಿಗೆ ಬಾಕಿ ಇವೆ. ತೀವ್ರ ಉಸಿರಾಟದ ಸಮಸ್ಯೆಗಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಒಟ್ಟು 21 ಮಂದಿ ಸೋಮವಾರ ದಾಖಲಾಗಿದ್ದಾರೆ. 70 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದ್ದು, 12 ಮಂದಿ ಹೊಸದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 59 ಮಂದಿ ಸುರತ್ಕಲ್ ಎನ್‌ಐಟಿಕೆಯಲ್ಲಿ, 40 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.
ವೃದ್ಧೆಯ ಸ್ಥಿತಿ ಗಂಭೀರ
ಕೋವಿಡ್ ದೃಢಪಟ್ಟು ವೆನಾÉಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಟ್ವಾಳ ಕಸಬಾ ನಿವಾಸಿ 67 ವರ್ಷದ ವೃದ್ಧೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ಉಳಿದ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಬೋಳೂರಿನಲ್ಲಿ ಮುಂಜಾಗ್ರತೆ
ಮಂಗಳೂರು ನಗರ ವ್ಯಾಪ್ತಿಯ ಬೋಳೂರು ಪರಿಸರದಲ್ಲಿ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬುಧವಾರ ಸಂಜೆಯಿಂದ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಈ ಭಾಗದಲ್ಲಿ ಕೋವಿಡ್ ಸೋಂಕು ಬಾಧಿಸಿರುವ ಕುರಿತು ಜಿಲ್ಲಾಡಳಿತದ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ. ಆದರೆ ಕೋವಿಡ್ ಪ್ರಕರಣವೊಂದು ದೃಢಪಟ್ಟಿರುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ವದಂತಿ ಹಬ್ಬಿದೆ.
79 ರೋಗಿಗಳ ಸ್ಯಾಂಪಲ್ ಸಂಗ್ರಹ
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಎ. 1ರಿಂದ 22ರ ನಡುವೆ ಕೇರಳ ರಾಜ್ಯ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆ ಗಳ ಒಟ್ಟು 79 ಮಂದಿ ರೋಗಿಗಳು ಚಿಕಿತ್ಸೆ ಪಡೆದು ಬಿಡು ಗಡೆಗೊಂಡಿದ್ದು, ಅವರೆಲ್ಲರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ತೆಗೆಯುವ ಕಾರ್ಯ ನಡೆಯುತ್ತಿದೆ.
ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವೃದ್ಧೆಯರಿಗೆ ಮತ್ತು ಅವರ ಸಂಪರ್ಕದಲ್ಲಿದ್ದ ಒಟ್ಟು ಐವರಿಗೆ ಕೋವಿಡ್ ತಗಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ ಎಲ್ಲರನ್ನೂ ಈಗಾಗಲೇ ಕ್ವಾರಂಟೈನ್ ಮಾಡಿ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ.
ಆಯಾ ಜಿಲ್ಲಾಡಳಿತವು ಈ ರೋಗಿಗಳೊಂದಿಗೆ ಅವರ ಮನೆಯವರನ್ನೂ ಕರೆಸಿ ಆಯಾ ಜಿಲ್ಲೆ, ತಾಲೂಕುಗಳಲ್ಲೇ ಗಂಟಲ ದ್ರವ ಮಾದರಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.