ಸಾರಿಗೆ ಇಲಾಖೆಗೆ ಇಸ್ರೋ ತಂತ್ರಜಾನದ ನೆರವು ಪಡೆಯಲು ಯತ್ನ
Team Udayavani, Apr 30, 2020, 1:24 PM IST
ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಕುರಿತು ಬುಧವಾರ ಬೆಂಗಳೂರಿನ ಇಸ್ರೋ ಪ್ರಧಾನ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು. ಇಸ್ರೋ ತಂತ್ರಜ್ಞಾನವನ್ನು ಪಡೆದು ಸಾರಿಗೆ ಇಲಾಖೆಯ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಕೆಎಸ್ಆರ್ಟಿಸಿ, ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿಎಂಟಿಸಿ ಸಂಸ್ಥೆಗಳ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂ ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿ ಕೊಡಬೇಕು, ಸಾರಿಗೆ ಸಂಸ್ಥೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಒದಗಿಸಲು ಮತ್ತು ಆದಾಯ ಸೋರಿಕೆ ತಡೆಗಟ್ಟಲು ಇಸ್ರೋದಿಂದ ಮಾರ್ಗದರ್ಶನ ಒದಗಿಸಿಕೊಡಬೇಕೆಂದು ಉಪಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಕೋವಿಡ್ ಪಿಡುಗಿನಿಂದಾಗಿ ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಮಟ್ಟ ತೀವ್ರವಾಗಿ ಕುಸಿದಿದೆ. ಇದರಿಂದ ಚೇತರಿಸಿಕೊಳ್ಳಲು ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಸಾಧ್ಯಾ ಸಾಧ್ಯತೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಉಪಮುಖ್ಯ ಮಂತ್ರಿ ಲಕ್ಷ್ಮಣ ಸವದಿ ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೋ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ ನೆರವು ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಇಸ್ರೋದ ಸೈಂಟಿಫಿಕ್ ಸೆಕ್ರೆಟರಿ ಡಾ. ಉಮಾಮಹೇಶ್ವರನ್ ಹಾಗೂ ಇಸ್ರೋದ ಅಂತರಿಕ್ಷ್ ಎಂ.ಡಿ. ರಾಕೇಶ್ ಶಶಿಭೂಷಣ್ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.