ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಮನವಿ
Team Udayavani, Apr 30, 2020, 3:12 PM IST
ಚಾಮರಾಜನಗರ: ಕೋವಿಡ್ 19 ಸಂದರ್ಭದಲ್ಲಿ ತಲೆ ದೋರಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಧ್ರುವ ನಾರಾಯಣ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಮಾಜಿ ಸಂಸದರು ಮತ್ತು ಮುಖಂಡರು, ಕೆಪಿಸಿಸಿ ರಚಿಸಲ್ಪಟ್ಟಿರುವ ಮೈಸೂರು ಪ್ರಾದೇಶಿಕ ಕಾರ್ಯಪಡೆಯಿಂದ ಗಮನಿಸಲ್ಪಟ್ಟಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಲುಪಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ, ಕುಂತೂರು, ಅಳಗಂಚಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಲ್ಲಿ ಪ್ರಾರಂಭಿಸಿ ಸುಮಾರು 14-15 ತಿಂಗಳಾದರೂ ಕಬ್ಬನ್ನು ಕಟಾವು ಮಾಡದೆ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಲು ಅವಕಾಶ ನೀಡಬೇಕು. ಲಾಕ್‌ಡೌನ್‌ನಿಂದ ಮನೆಯಲ್ಲೇ ಇರುವ ಕೂಲಿ ಕಾರ್ಮಿಕರಿಗೆ ನರೇಗಾ
ಯೋಜನೆಯಡಿ ನಿರುದ್ಯೋಗ ಭತ್ಯೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ತೋಟಗಾರಿಕೆ ಬೆಳಗಳಾದ ಹೂ, ಹಣ್ಣು, ತರಕಾರಿ, ಕೃಷಿ ಬೆಳೆಗಳಾದ ಕೋಸು, ಬಾಳೆ, ಕಲ್ಲಂಗಡಿ ಟೊಮೆಟೋ ಇತರೆ ಕಟಾವು ಮಾಡದೆ ನಷ್ಟವಾಗಿದೆ. ಇದರ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಮಾರುಕಟ್ಟೆ ದರದಲ್ಲಿ ರಾಷ್ಟ್ರೀಯ ತೋಟ ಗಾರಿಕಾ ಮಿಷನ್‌ಯೋಜನೆಯಡಿಯಲ್ಲಿ ಪರಿಹಾರ ಕೊಡಿಸಬೇಕು. ಸಂಕಷ್ಟದಲ್ಲಿರುವ ರೈತರು, ವೃದ್ದಾಪ್ಯ
ಪಿಂಚಿಣಿದಾರ ರಿಗೆ, ಅಸಂಘಟಿತ ವಲಯದಲ್ಲಿರುವವರಿಗೆ ಮತ್ತು ಜನ್‌ಧನ್ ಖಾತೆ ಹೊಂದಿರುವ ಎಲ್ಲಾ ಬಡವರ ಖಾತೆಗೆ 5 ಸಾವಿರ ರೂ. ಹಾಕಬೇಕು. ಸೆಸ್ಕ್ನಿಂದ ಮನೆ ಮನೆಗೆ ತೆರಳಿ ವಿದ್ಯುತ್ ಬಿಲ್ ವಸೂಲಿಯನ್ನು ತಕ್ಷಣವೇ ನಿಲ್ಲಿಸಬೇಕು. ಶ್ರಮಿಕ ವರ್ಗಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು. ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್, ಮಾಜಿ ಶಾಸಕರಾದ ಕೃಷ್ಣಮೂರ್ತಿ, ಬಾಲ ರಾಜ್, ಜಿಪಂ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್, ವಕೀಲ ಅರುಣ್‌ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.