ನಕಲಿ ಬೀಜ-ಗೊಬ್ಬರ ಮಾರಿದರೆ ಕಠಿಣ ಕ್ರಮ
Team Udayavani, Apr 30, 2020, 5:44 PM IST
ರೋಣ: ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆ ನಿಯಮವಳಿಗೆ ಅನುಸಾರವಾಗಿ ರೈತರಿಗೆ ಬೀಜ, ಗೊಬ್ಬರ, ಕ್ರಿಮಿನಾಶಕಗಳನ್ನು ಮಾರಾಟ ಮಾಡಬೇಕು ಎಂದು ಗದಗ ಜಂಟಿ ಕೃಷಿ ಕಾರ್ಯಾಲಯದ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲ ಹೇಳಿದರು.
ಅವರು ಪಟ್ಟಣದ ವಿವಿಧ ಬೀಜ, ಗೊಬ್ಬರ, ಕ್ರಿಮಿನಾಶಕ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಾತನಾಡಿದರು. ಕೋವಿಡ್ 19 ವೈರಸ್ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲಾಖೆಯ ನಿಮಯಗಳಂತೆ ಸಾಮಾಜಿಕ ಅಂತರದೊಂದಿಗೆ ರೈತರಿಗೆ ಬೀಜ ಗೊಬ್ಬರವನ್ನು ಮಾರಾಟ ಮಾಡಬೇಕು. 2020-21 ಮುಂಗಾರಿ ಹಂಗಾಮಿನಲ್ಲಿ ರೈತರಿಗೆ ಇಲಾಖೆಯಿಂದ ಪ್ರಮಾಣೀಕರಿಸಿದ ಬೀಜ ಹಾಗೂ ಗೊಬ್ಬರ ಮಾರಾಟ ಮಾಡಬೇಕು. ಅಲ್ಲದೇ ಇಲಾಖೆ ನಿಮಯ ಹಾಗೂ ದರವನ್ನು ಬಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಲಾಗುತ್ತದೆ. ಆದ್ದರಿಂದ ಯಾವುದೇ ರೈತರಿಗೆ ಮೋಸವಾಗದಂತೆ ಮಾರಾಟ ಮಾಡಬೇಕು. ಪ್ರತಿದಿನವೂ ದರದ ಪಟ್ಟಿಯನ್ನು ಕಡ್ಡಾಯವಾಗಿ ಅಂಗಡಿಯಲ್ಲಿ ಹಾಕಬೇಕು. ಅಲ್ಲದೇ ಸರ್ಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಬೀಜ ಗೊಬ್ಬರವನ್ನು ಪೂರೈಸಲಾಗುತ್ತದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿಂದ್ರಗೌಡ ಪಾಟೀಲ ಮಾತನಾಡಿ, ಅಕ್ರಮವಾಗಿ ಬೀಜಗಳನ್ನು ದಾಸ್ತಾನು ಮಾಡುವುದಾಗಲಿ, ನಕಲಿ ಬೀಜಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.