ಪತ್ನಿಗೆ ಕೋವಿಡ್ 19 ಪಾಸಿಟಿವ್ ಎಂದು ತಿಳಿಯುತ್ತಲೇ ಆತ್ಮಹತ್ಯೆಗೆ ಶರಣಾದ ಪತಿ
ಇಡೀ ಕಾಲೋನಿಯನ್ನು ಬಂದ್ ಮಾಡಿ ಸೋಂಕಿತ ಪ್ರದೇಶ ಎಂದು ಘೋಷಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Apr 30, 2020, 7:11 PM IST
ನವದೆಹಲಿ: ಪತ್ನಿಗೆ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಎಂದು ಬಂದ ಬೆನ್ನಲ್ಲೇ ಆಚಾರ್ಯ ಪುರಿ ಕಾಲೋನಿಯ 53 ವರ್ಷದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯಲ್ಲಿ ಗುರುವಾರ ನಡೆದಿದೆ ಎಂದು ವರದಿ ತಿಳಿಸಿದೆ.
ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಇಡೀ ಕಾಲೋನಿಯನ್ನು ಬಂದ್ ಮಾಡಿ ಸೋಂಕಿತ ಪ್ರದೇಶ ಎಂದು ಘೋಷಿಸಿರುವುದಾಗಿ ವರದಿ ವಿವರಿಸಿದೆ.
ತಾಯಿಗೆ ಕೋವಿಡ್ 19 ವೈರಸ್ ಇದೆ ಎಂದು ವಿಷಯ ತಿಳಿದ ಬಳಿಕ ತಂದೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಮೃತ ವ್ಯಕ್ತಿಯ ಮಗ ಪೊಲೀಸರಿಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಹೊಟ್ಟೆಯ ಅಲ್ಸರ್ ನೋವಿನಿಂದ ಬಳಲುತ್ತಿದ್ದ ಸತ್ಬೀರ್ ಸಾಹ್ನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಸಂಜೆ ಆಕೆಗೆ ಕೋವಿಡ್ 19 ವೈರಸ್ ವರದಿ ಪಾಸಿಟಿವ್ ವರದಿ ಬಂದಿತ್ತು. ಕೂಡಲೇ ಆಕೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಐಸೋಲೇಶನ್ ನಲ್ಲಿ ಇರಿಸಲಾಗಿತ್ತು.
ಮೇಲ್ನೋಟದ ತನಿಖೆಯಲ್ಲಿ ಪತ್ನಿಗೆ ಕೋವಿಡ್ 19 ವೈರಸ್ ತಗುಲಿರುವುದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಈ ಕೃತ್ಯಕ್ಕೆ ಮುಂದಾಗಿರುವುದಾಗಿ ತಿಳಿದು ಬಂದಿದೆ. ನಾವು ಎಲ್ಲಾ ಆಯಾಮಗಳಿಂದಲೂ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.