ಅಪಾಯದ ಮುನ್ಸೂಚನೆ ಬೋಳೂರು ಪ್ರಕರಣ

ಲಾಕ್‌ಡೌನ್‌ ಕಠಿನವಾದರಷ್ಟೇ ಕೋವಿಡ್‌-19 ಪ್ರಸರಣ ತಡೆ ಸಾಧ್ಯ

Team Udayavani, May 1, 2020, 5:52 AM IST

ಅಪಾಯದ ಮುನ್ಸೂಚನೆ ಬೋಳೂರು ಪ್ರಕರಣ

ಮಂಗಳೂರಿನ ಬೋಳೂರುವಿನಲ್ಲಿ ಸೀಲ್‌ಡೌನ್‌ ಮಾಡಲಾಗುತ್ತಿರುವುದು.

ವಿಶೇಷ ವರದಿ-ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಶಕ್ತಿನಗರದ ಇಬ್ಬರಿಗೆ ಕೋವಿಡ್‌-19 ದೃಢವಾದ ಮೂರೇ ದಿನಗಳಲ್ಲಿ ಬೋಳೂರು ನಿವಾಸಿಯೊಬ್ಬರಲ್ಲಿಯೂ ಕೋವಿಡ್‌-19 ಖಚಿತವಾಗಿದೆ. ಇದು ನಗರಕ್ಕೆ ಅಪಾಯದ ನಿಶಾನೆಯಾಗಿದ್ದು, ಲಾಕ್‌ಡೌನನ್ನು ಇನ್ನಷ್ಟು ಬಿಗಿಗೊಳಿಸುವುದು ಈಗ ಅನಿವಾರ್ಯ.

ಜನ ಸಾಂದ್ರತೆ ಮತ್ತು ವ್ಯವಹಾರ ಚಟುವಟಿಕೆಗಳು ಹೆಚ್ಚಾಗಿರುವ ಮಂಗಳೂರಿನಲ್ಲಿ ಕೋವಿಡ್‌-19 ಸೋಂಕು ಹೆಚ್ಚುತ್ತಿರುವುದು ಆತಂಕದ ವಿಚಾರ. ಜಿಲ್ಲಾಡಳಿತವು ತತ್‌ಕ್ಷಣವೇ ಎಚ್ಚೆತ್ತುಕೊಂಡು ಕಠಿನ ಕ್ರಮಗಳನ್ನು ಜಾರಿಗೊಳಿಸದೆ ಹೋದರೆ ಪರಸ್ಥಿತಿ ಕೈಮೀರುವ ಅಪಾಯವಿದೆ.
ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಮಂಗಳೂರಿನಲ್ಲಿ ಬಹುತೇಕ ಜನರು ಅನಗತ್ಯವಾಗಿ, ಸಾಮಾಜಿಕ ಅಂತರ ಕಾಯದೆ ತಿರುಗಾಡುತ್ತಿರುವುದು ಎಲ್ಲೆಂದರಲ್ಲಿ ಕಾಣುತ್ತಿತ್ತು. ಈಗ ಮೂರು ಪ್ರಕರಣಗಳು ನಗರದೊಳಗೆ ದೃಢವಾದ ಬಳಿಕವೂ ಲಾಕ್‌ಡೌನ್‌ ಪಾಲನೆಗೆ ಗಮನ ನೀಡಿದಂತೆ ಕಾಣುತ್ತಿಲ್ಲ.

ಮಂಗಳೂರಿನ 2ನೇ ಪ್ರಕರಣ
ಬೋಳೂರಿನ 58ರ ಹರೆಯದ ಮಹಿಳೆ ಇತ್ತೀಚೆಗೆ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಮಹಿಳೆ ಮತ್ತು ಕುಟುಂಬದವರ ಸಂಪರ್ಕ ಹೊಂದಿದವರನ್ನು ಪತ್ತೆ ಕಾರ್ಯ ನಡೆಸಲಾಗುತ್ತಿದೆ.ಈ ಮನೆ ಮಂದಿ ಇತ್ತೀಚೆಗೆ ನಗರದ ಹಲವೆಡೆ ಹೋಗಿ ಬಂದಿರುವ ಮಾಹಿತಿಯೂ ಇದೆ.

ಡಿಸ್ಚಾರ್ಜ್ ಆದವರ ಮೇಲೆ ನಿಗಾ
ಮನಪಾ ವ್ಯಾಪ್ತಿಯಲ್ಲಿ ದೃಢಪಟ್ಟ 3 ಕೋವಿಡ್‌-19 ಪ್ರಕರಣಗಳು ಫಸ್ಟ್‌ ನ್ಯೂರೋ ಆಸ್ಪತ್ರೆಯ ಮೂಲದಿಂದಲೇ ಬಂದಿವೆ. ಈ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡವರ ಪಟ್ಟಿಯನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿದ್ದು, ಅದರಲ್ಲಿ ಮನಪಾ ವ್ಯಾಪ್ತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜತೆಗೆ, ಫಸ್ಟ್‌ ನ್ಯೂರೊ ಆಸ್ಪತ್ರೆ ನಗರಕ್ಕೆ ಹೊಂದಿಕೊಂಡಂತೆಯೇ ಇದೆ. ಸೀಲ್‌ಡೌನ್‌ ಆಗಿರುವ ಇಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಇದ್ದು, ಅವರಲ್ಲಿ ಕೆಲವರ ಪರೀಕ್ಷಾ ವರದಿಯಷ್ಟೇ ಬಂದಿದೆ. ಈ ಆಸ್ಪತ್ರೆಯಲ್ಲಿ ಕೆಲಸ ಮಾಡುವವರಲ್ಲಿ ಹಲವರು ನಗರ ವ್ಯಾಪ್ತಿಯವರು. ಹೀಗಾಗಿ ಫಸ್ಟ್‌ ನ್ಯೂರೊ ಆಸ್ಪತ್ರೆ ಸಂಪರ್ಕದಿಂದ ಮತ್ತಷ್ಟು ಕೋವಿಡ್‌-19 ಪ್ರಕರಣಗಳು ದೃಢಪಟ್ಟರೆ ಆಗ ಪರಿಸ್ಥಿತಿ ಬಿಗಡಾಯಿಸುವುದರಲ್ಲಿ ಅನುಮಾನವಿಲ್ಲ.

ಬೋಳೂರು ಸೀಲ್‌ಡೌನ್‌; ಕಟ್ಟೆಚ್ಚರ
ಬೋಳೂರಿನ ಬಹುಭಾಗವನ್ನು ಸೀಲ್‌ಡೌನ್‌ ಮಾಡಲಾಗಿದೆ. ಇಲ್ಲಿನ ಜೇಮ್ಸ್‌ ಡಿ’ಸೋಜಾ ಮನೆಯಿಂದ ಬೋಳೂರು ಹಿಂದೂ ರುದ್ರಭೂಮಿಯ ವರೆಗೆ ಹಾಗೂ ಸುಲ್ತಾನ್‌ ಬತ್ತೇರಿಯ ಹೊಟೇಲ್‌ ಬಿ.ಜೆ., ಹೊಟೇಲ್‌ ಶ್ರೀ ವಿನಾಯಕದಿಂದ ಹಿಂದೂ ರುದ್ರಭೂಮಿಯ ಬೋಳೂರು ಪ್ರವೇಶ ದ್ವಾರದ ವರೆಗಿನ ಪ್ರದೇಶವನ್ನು ಕಂಟೈನ್‌ಮೆಂಟ್‌ ಪ್ರದೇಶವಾಗಿ ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಒಟ್ಟು 135 ಮನೆಗಳಿದ್ದು, 12 ಅಂಗಡಿಗಳಿವೆ. ಒಟ್ಟು 640 ಜನರು ವಾಸವಾಗಿದ್ದಾರೆ. ಸ್ಮಾರ್ಟ್‌ ಸಿಟಿ ಮಂಗಳೂರು ಯೋಜನೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಅವರನ್ನು ಕಂಟೈನ್‌ಮೆಂಟ್‌ ವ್ಯಾಪ್ತಿಯ ಇನ್ಸಿಡೆಂಟ್‌ ಕಮಾಂಡರ್‌ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 5 ಕಿ.ಮೀ. ವ್ಯಾಪ್ತಿಯ ಬೋಂದೆಲ್‌, ಎಂಸಿಎಫ್‌ ಹಾಗೂ ಬೋಳಾರ ನೇತ್ರಾವತಿ ನದಿ ವರೆಗಿನ ಪ್ರದೇಶವನ್ನು ಬಫರ್‌ ಝೋನ್‌ ಎಂದು ಗುರುತಿಸಲಾಗಿದೆ. ಪಶ್ಚಿಮಕ್ಕೆ ಅರಬ್ಬಿ ಸಮುದ್ರದ 5 ಕಿ.ಮೀ. ವ್ಯಾಪ್ತಿಯೂ ಸೇರಿದೆ.

ಡಿಸ್ಚಾರ್ಜ್ ಆದವರಲ್ಲಿ ಮಂಗಳೂರಿನವರೇ ಅಧಿಕ
ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಎ.1ರಿಂದ 22ರ ನಡುವೆ ಕೇರಳ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆಗಳ 79 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅತೀ ಹೆಚ್ಚು ಮಂದಿ ಮಂಗಳೂರು ತಾಲೂಕಿ(29)ನವರು.

 ಸ್ವಯಂ ಜಾಗೃತಿ ಅಗತ್ಯ
ಲಾಕ್‌ಡೌನ್‌ ಇನ್ನಷ್ಟು ಕಠಿನಗೊಳಿಸುವ ಬಗ್ಗೆ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಅದಕ್ಕಿಂತಲೂ ಮುಖ್ಯವಾಗಿ ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಸ್ವಯಂ ಜಾಗೃತಿ ವಹಿಸಿಕೊಳ್ಳುವುದು ಉತ್ತಮ. ಮನೆಯಲ್ಲಿಯೇ ಇದ್ದು ಎಲ್ಲರ ನೆಮ್ಮದಿ ಆಶಿಸೋಣ. ಈ ನಿಯಮ ಪಾಲನೆಯಾಗದಿದ್ದರೆ ನಗರಕ್ಕೆ ಅಪಾಯವಿದೆ.
 -ವೇದವ್ಯಾಸ ಕಾಮತ್‌, ಶಾಸಕ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ

 ಸಾಮಾಜಿಕ ಅಂತರದ ಶಿಸ್ತು ಮೂಡಲಿ
ಮಂಗಳೂರಿನಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಇದೀಗ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್‌ಡೌನ್‌ ಇನ್ನಷ್ಟು ಕಠಿನ ಮಾಡುವ ಬಗ್ಗೆ ಜಿಲ್ಲಾಡಳಿತ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಹೆಚ್ಚು ಒತ್ತು ನೀಡಲಿ.
 - ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ,
ಅಯುಕ್ತರು, ಮನಪಾ

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.