ರಷ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೆ ಕೋವಿಡ್ -19 ಸೋಂಕು ದೃಢ
Team Udayavani, May 1, 2020, 7:35 AM IST
ಮಾಸ್ಕೋ: ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿಗೆ ಒಳಗಾದ ರಷ್ಯಾದ ಮೊದಲ ಅತ್ಯುನ್ನತ ಶ್ರೇಣಿಯ ಅಧಿಕಾರಿಯಾಗಿದ್ದಾರೆ ಮಾಧ‍್ಯಮ ವರದಿ ಮಾಡಿದೆ.
ಇದರ ಬೆನ್ನಲ್ಲೇ ಮಿಖಾಯಿಲ್ ಮಿಶಸ್ಟಿನ್, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ವೀಡಿಯೊ ಕರೆ ಮಾಡಿ ಸ್ವಯಂ-ಪ್ರತ್ಯೇಕವಾಗುವುದಾಗಿ ತಿಳಿಸಿದ್ದಾರೆ. 54 ವರ್ಷದ ಮಿಖಾಯಿಲ್ ಜನವರಿಯಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. ಇದೀಗ ಉಪ ಪ್ರಧಾನಿ ಮಂತ್ರಿ ಆಂಡ್ರೇ ಬೆಲೌಸೊವ್ ತಾತ್ಕಾಲಿಕವಾಗಿ ಮಿಶುಸ್ಟಿನ್ ಅವರ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ.
ರಷ್ಯಾಧ ಅಧ್ಯಕ್ಷ ಪುಟಿನ್ , ದೇಶದಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಾಗಿನಿಂದ ಸಭೆಗಳಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಮಿಖಾಯಿಲ್ ಅವರನ್ನೂ ಕೂಡ ಭೇಟಿಯಾಗಿರಲಿಲ್ಲ. ರಷ್ಯಾದಲ್ಲಿ ಆರ್ಥಿಕ ವಿಚಾರಗಳನ್ನು ಮೇಲ್ವೀಚಾರಣೆ ನಡೆಸುವುದು ಮತ್ತು ಅಧ್ಯಕ್ಷರಿಗೆ ಮಾಹಿತಿ ನೀಡುವುದು ಪ್ರಧಾನಿಯ ಜವಾಬ್ದಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.