ಅಮೆರಿಕ: ನೆರವು ಸಿಗದಿದ್ದರೆ ಚಿಲ್ಲರೆ ವ್ಯಾಪಾರಿಗಳು ಅತಂತ್ರ

Team Udayavani, May 1, 2020, 12:41 PM IST

ಅಮೆರಿಕ: ನೆರವು ಸಿಗದಿದ್ದರೆ ಚಿಲ್ಲರೆ ವ್ಯಾಪಾರಿಗಳು ಅತಂತ್ರ

ಮಣಿಪಾಲ: ಕೋವಿಡ್‌-19 ತಡೆಗಾಗಿ ನಡೆಯುತ್ತಿರುವ ಲಾಕ್‌ಡೌನ್‌ನಿಂದಾಗಿ ಚಿಲ್ಲರೆ ವ್ಯಾಪಾರಿಗಳು ಚಿಂತೆಗೀಡಾಗಿದ್ದಾರೆ. ಈಗಾಗಲೇ ವಿಶ್ವದೆಲ್ಲೆಡೆ ಕಾರ್ಯಾಚರಿಸುತ್ತಿರುವ ಚಿಲ್ಲರೆ ವ್ಯಾಪಾರಿಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ವಿಪರ್ಯಾಸ ಎಂದರೆ ಚಿಲ್ಲರೆ ಮಾರುಕಟ್ಟೆ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳತ್ತ ಕಣ್ಣು ಹಾಯಿಸದ ಕೆಲ ದೇಶಗಳು ಇಡೀ ಕ್ಷೇತ್ರವನ್ನು ಮರೆತಂತಿದೆ. ಇದಕ್ಕೆ ಅಮೆರಿಕವೂ ಹೊರತಾಗಿಲ್ಲ. ಲಾಕ್‌ಡೌನ್‌ ಜಾರಿಯಾದಾಗಿನಿಂದ ಇಲ್ಲಿನ ಚಿಲ್ಲರೆ ಮಾರುಕಟ್ಟೆ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ಚಿಲ್ಲರೆ ಒಕ್ಕೂಟವು (ಎನ್‌ಆರ್‌ಎಫ್‌) ನೆರವು ಕೋರಿ ಸಾಕಷ್ಟು ಬಾರಿ ಸರಕಾರದ ಎದುರು ಸಹಾಯ ಹಸ್ತ ಚಾಚಿದೆ. ಆದರೆ ಮನವಿಗೆ ಸರಕಾರ ಸ್ಪಂದಿಸಿಲ್ಲ.

ದೇಶಕ್ಕೆ ಪ್ರಮುಖ ಆದಾಯ ಮೂಲ
ಚಿಲ್ಲರೆ ಉದ್ಯಮವು ಖಾಸಗಿ ವಲಯದ ಅತಿದೊಡ್ಡ ಉದ್ಯೋಗದಾತ ಕ್ಷೇತ್ರವಾಗಿದ್ದು, 29 ದಶಲಕ್ಷ ಜನರಿಗೆ ಕೆಲಸವನ್ನು ಒದಗಿಸುತ್ತದೆ ಎಂದು ಎನ್‌ಆರ್‌ಎಫ್‌ ಹೇಳಿದ್ದು, ಇದು ಯು.ಎಸ್‌. ಆರ್ಥಿಕತೆಯ ಬೆಳವಣಿಗೆಗೆ ಪ್ರಮುಖ ಆದಾಯ ಮೂಲವಾಗಿದೆ. ಗ್ರಾಹಕರಿಗೆ ಅನಿಲ ಪೂರೈಕೆ, ವಸ್ತ್ರ ಸೇರಿದಂತೆ ಮತ್ತಿತ್ತರ ದಿನನಿತ್ಯದ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವಲ್ಲಿ ಇದರ ಪಾತ್ರ ಅಗಾಧ. ಆದರೆ ಇದೀಗ ಈ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ಉದ್ಯೋಗ ನಷ್ಟ ಭೀತಿ ಎದುರಿಸುತ್ತಿದೆ ಎನ್ನುತ್ತಿದೆ ಸಿಎನ್‌ಬಿಸಿ.

ಯೋಜನೆ ಪಡೆಯಲು ಅನರ್ಹರು
ಅನೇಕ ಮಧ್ಯಮ ಗಾತ್ರದ ಚಿಲ್ಲರೆ ವ್ಯಾಪಾರಿಗಳು ಸರಕಾರ ಘೋಷಿಸಿರುವ ಯಾವುದೇ ಆರ್ಥಿಕ ನೆರವು ಯೋಜನೆಗಳ ಸೌಲಭ್ಯಗಳಿಗೆ ಅರ್ಹರಲ್ಲ ಎನ್ನಲಾಗುತ್ತಿದ್ದು, ದೊಡ್ಡ ದೊಡ್ಡ ಕಂಪನಿಗಳ ನಷ್ಟವನ್ನು ಸರಿದೂಗಿಸಲು ಸರಕಾರ ಹೆಚ್ಚಿನ ಒಲವು ತೋರಿಸುತ್ತಿದೆ ಎಂಬುದು ಕೇಳಿಬರುತ್ತಿರುವ ಆರೋಪ.

ಜೀವನ ಅತಂತ್ರ
ರಿಟೇಲರ್ಸ್‌ ಅಸೋಸಿಯೇಶನ್‌ ಸದ್ಯ ಜಾರಿಯಾಗಿರುವ ಯೋಜನೆಯನ್ನು ಮರು ಮಾರ್ಪಾಡು ಮಾಡುವಂತೆ ಒತ್ತಾಯಿಸಿದೆ. ಒಂದು ವೇಳೆ ಆರ್ಥಿಕ ನೆರವು ಸಿಗದಿದ್ದರೆ ಸಾವಿರಾರು ಜನ ಉದ್ಯೋಗ ಕಳೆದುಕೊಂಡು ಅತಂತ್ರರಾಗುತ್ತಾರೆ ಎನ್ನುತ್ತದೆ ಒಕ್ಕೂಟ.
ಎಲ್ಲ ಕ್ಷೇತ್ರಕ್ಕೂ ಅನ್ವಯವಾಗುವಂತೆ ಚಿಲ್ಲರೆ ಮಾರುಕಟ್ಟೆ ಉದ್ಯಮಕ್ಕೂ ಹಣಕಾಸಿನ ನೆರವು ಸಿಗಬೇಕು. ಇಲ್ಲದಿದ್ದರೇ ಆರ್ಥಿಕ ಕ್ಷೇತ್ರದ ಪ್ರಮುಖ ವಲಯವಾದ ಈ ಕ್ಷೇತ್ರ, ವ್ಯಾಪಾರಿಗಳು ಮತ್ತು ಕಾರ್ಮಿಕರ ಮೇಲೆ ಸದ್ಯ ಎದುರಾಗಿರುವ ಸೋಂಕು ಬಿಕ್ಕಟ್ಟು ದೀರ್ಘ‌ಕಾಲೀನ ಪರಿಣಾಮಗಳನ್ನು ಬೀರಲಿದೆ ಎಂಬುದು ಆರ್ಥಿಕ ವಿಶ್ಲೇಷಕರ ಅಭಿಪ್ರಾಯ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.