ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಪರೀಕ್ಷಾ ಕೇಂದ್ರ ಆರಂಭ


Team Udayavani, May 1, 2020, 1:23 PM IST

1-May–14

ಕಲಬುರಗಿ: ಯುನೈಟೆಡ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಪರೀಕ್ಷಾ ಕೇಂದ್ರದ ಪಡಿತರದಾರರಿಗೆ ಕಿಟ್‌ಗಳನ್ನು ಡಾ| ವಿಕ್ರಮ್‌ ಸಿದ್ಧಾರೆಡ್ಡಿ ಪರಿಶೀಲಿಸಿದರು.

ಕಲಬುರಗಿ: ದೇಶವಲ್ಲದೇ ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಹೊಡೆದೊಡಿಸುವಲ್ಲಿ ಎಲ್ಲರ ಪಾತ್ರ ಬಹು ಮುಖ್ಯವಾಗಿದ್ದು, ಇಲ್ಲಿನ ಪ್ರಖ್ಯಾತ ಯುನೈಟೆಡ್‌ ಆಸ್ಪತ್ರೆಯಲ್ಲಿ ಭಾರತೀಯ
ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಅನುಮೋದಿತ ಕೋವಿಡ್‌ -19 ಪರೀಕ್ಷಾ ಕೇಂದ್ರ ಆರಂಭವಾಗಿದೆ.

ಯುನೈಟೆಡ್‌ ಆಸ್ಪತ್ರೆಯಲ್ಲಿ ಏ. 30ರಿಂದ ಆಸ್ಪತ್ರೆಗೆ ದಾಖಲಾಗುವ ಎಲ್ಲ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್‌-19 ಕ್ಷೀಪ್ರ ಪರೀಕ್ಷೆಯನ್ನು ಪ್ರಾರಂಭಿಸಲಾಗಿದೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ| ವಿಕ್ರಮ್‌ ಸಿದ್ಧಾರೆಡ್ಡಿ ತಿಳಿಸಿದ್ದಾರೆ. ಕೋವಿಡ್‌-19 ಭಯಾನಕ ರೋಗ ವೇಗವಾಗಿ ಹಬ್ಬುತ್ತಿರುವುದನ್ನು ತಪ್ಪಿಸಲು ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಮಹತ್ವದ ಕಾರ್ಯ ಅರಿತು ಪರೀಕ್ಷಾ ಕೇಂದ್ರ ಆರಂಭಿಸಲಾಗಿದೆ. ಈ ಭಾಗದಲ್ಲಿ ಕೋವಿಡ್‌-19 ವೇಗ ಪರೀಕ್ಷೆಯ ಕೇಂದ್ರ ಆರಂಭಿಸಲಾದ ಮೊದಲ ಆಸ್ಪತ್ರೆ ತಮ್ಮದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಣೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಕೀಟ್‌ಗಳನ್ನು ದಕ್ಷಿಣ ಕೋರಿಯಾದಿಂದ ತರಿಸಿಕೊಳ್ಳಲಾಗಿದ್ದು, ಬಳಕೆಗೆ ಭಾರತೀಯ ವೈದ್ಯಕೀಯ ಸಂಶೋಧನಾದ ಮಂಡಳಿ ಅನುಮೋದನೆ ನೀಡಿದೆ. ನೆರೆಯ ಆಂಧ್ರಪ್ರದೇಶ ಸರ್ಕಾರ ಹಾಗೂ ಅಮೇರಿಕಾ ಸಂಯುಕ್ತ ಸರ್ಕಾರಗಳು ಜನಸಮೂಹ ತಪಾಸಣೆಗಾಗಿ ಇದೇ ಕಿಟ್‌ಗಳನ್ನು ವ್ಯಾಪಕವಾಗಿ ಬಳಸುತ್ತಿವೆ. ಇದು ಕೇವಲ ತಪಾಸಣಾ ಪರೀಕ್ಷಾ ಕೇಂದ್ರವಾಗಿದ್ದು, ಇದರಲ್ಲಿ ಪಾಸಿಟಿವ್‌ ಬಂದರೆ ಅದನ್ನು ಸರ್ಕಾರವೇ ತನ್ನ ಅಧೀನ ಆರೋಗ್ಯ ಸಂಸ್ಥೆಗಳ ಮೂಲಕ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಿ ದೃಢಪಡಿಸುತ್ತದೆ. ಯುನೈಟೆಡ್‌ ಆಸ್ಪತ್ರೆಯು ರೋಗಿಗಳ ಸುರಕ್ಷತೆ ವಿಷಯದಲ್ಲಿ ಅತ್ಯುನ್ನತ ಮಾದರಿಗಳನ್ನು ಯಾವಾಗಲು ಅನುಸರಿಸುತ್ತಾ ಬಂದಿದ್ದು, ಅದೇ ಬದ್ಧತೆ ಮುಂದುವರೆದ ಭಾಗವಾಗಿ ಈಗ ಕೋವಿಡ್‌-19 ಪರೀಕ್ಷಾ ಕೇಂದ್ರ ಆರಂಭಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಡಾ| ವಿಕ್ರಮ್‌ ಸಿದ್ಧಾರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.