ತುಮಕೂರಿಗೆ ಇಂದಿನಿಂದ ಹೇಮೆ ನೀರು

ಪ್ರತಿದಿನ 2 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆಗೆ ಸೂಚನೆ: ಹಾಸನ ಜಿಲ್ಲೆ ಶಾಸಕರ ವಿರೋಧ

Team Udayavani, May 1, 2020, 2:14 PM IST

ತುಮಕೂರಿಗೆ ಇಂದಿನಿಂದ ಹೇಮೆ ನೀರು

ಸಾಂದರ್ಭಿಕ ಚಿತ್ರ

ಹಾಸನ: ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಮಾತ್ರ ಶುಕ್ರವಾರ ದಿಂದ ನಾಲೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಹೇಮಾವತಿ ಎಡದಂಡೆ ನಾಲೆಯಲ್ಲಿ ಹಾಸನ, ಮಂಡ್ಯ ಮತ್ತು ತುಮಕೂರು ಜಿಲ್ಲೆಗೆ ನೀರು ಹರಿಯಬೇಕು. ಆದರೆ ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೀರು ಹರಿಸದೆ ತುಮಕೂರು ಜಿಲ್ಲೆಗೆ ಮಾತ್ರ ಎಡದಂಡೆ ನಾಲೆಗೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮತ್ತು ಹಾಸನ ತಾಲೂಕು ಗೊರೂರಿನಲ್ಲಿರುವ ಹೇಮಾವತಿ ಯೋಜನೆಯ ಎಂಜಿನಿಯರ್‌ಗಳಿಗೆ ಗುರುವಾರ ಸೂಚನೆ ನೀಡಲಾಗಿದ್ದು, ಶುಕ್ರವಾರದಿಂದ 15 ದಿನಗಳವರೆಗೆ ಪ್ರತಿದಿನ 2ಸಾವಿರ ಕ್ಯೂಸೆಕ್‌ ನಂತೆ 2 ಟಿಎಂಸಿ ನೀರು ಹರಿಯಲಿದೆ.

ಸಚಿವರ ಲಾಬಿ: ತುಮಕೂರು ಜಿಲ್ಲೆಯಲ್ಲಿ ಕುಡಿವ ನೀರಿಗೆ ತೊಂದರೆ ಇದೆ. ಹಾಗಾಗಿ ತುರ್ತಾಗಿ ನೀರು ಹರಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಹಾಸನ ಜಿಲ್ಲಾ ಹೆಚ್ಚುವರಿ ಉಸ್ತುವಾರಿ ಸಚಿವರೂ ಆಗಿರುವ ಜೆ.ಸಿ.ಮಾಧುಸ್ವಾಮಿ ಒತ್ತಡ ಹೇರಿ ನೀರು ಬಿಡಿಸಿಕೊಳ್ಳುವ ಮೂಲಕ ತವರು ಜಿಲ್ಲೆ ತುಮಕೂರಿನ ಪರ ಲಾಬಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೇಮಾವತಿ ಜಲಾಶಯದಿಂದ ನಾಲೆಗಳಲ್ಲಿ ನೀರು ಹರಿಸಿ ಅಚ್ಚುಕಟ್ಟು ಪ್ರದೇಶದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಬೇಸಿಗೆಯಲ್ಲಿ ಕುಡಿಯುವ ನೀರಿನ ಬವಣೆ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಜೆಡಿಎಸ್‌ ಶಾಸಕರಾದ ಎ.ಟಿ. ರಾಮಸ್ವಾಮಿ. ಎಚ್‌.ಡಿ.ರೇವಣ್ಣ, ಸಿ.ಎನ್‌. ಬಾಲಕೃಷ್ಣ ಅವರು ಒತ್ತಾಯಿಸಿದ್ದರು. ಆದರೆ ಈಗ ಹಾಸನ ಜಿಲ್ಲೆಗೆ ನೀರು ಬಿಡದೆ ಹಾಸನ ಜಿಲ್ಲೆಯ ಮೂಲಕವೇ ತುಮಕೂರು ಜಿಲ್ಲೆಗೆ ಮಾತ್ರ ನೀರು ಕೊಂಡೊಯ್ಯಲಾಗುತ್ತಿದೆ. ಈ ಬೆಳವಣಿಗೆಯು ರಾಜಕೀಯ ಸಂಘರ್ಷಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಹೇಮಾವತಿ
ಜಲಾಶಯವು ಹಾಸನ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಯ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಆದರೆ ಮೂರು ಜಿಲ್ಲೆಗೆ ನೀರು ಕೊಡದೆ ತುಮಕೂರು ಜಿಲ್ಲೆಗೆ ಮಾತ್ರ ನೀರು ಹರಿಸಲು ಮುಂದಾಗಿ ರುವುದು ಅನು ಮಾನಕ್ಕೆ ಕಾರಣವಾಗಿದೆ.

ಕುಡಿಯುವ ನೀರಿಗಾಗಿ ಬಿಡುಗಡೆ:
ಹೇಮಾವತಿ ಜಲಾಶಯದಿಂದ ತುಮಕೂರಿಗೆ 15 ದಿನಗಳ ವರೆಗೆ 2000 ಕ್ಯೂಸೆಕ್‌ ನೀರನ್ನು ಶುಕ್ರವಾರದಿಂದ ಬಿಡಲಾಗುತ್ತಿದೆ. ಈ ಸಂಬಂಧ ಸೂಚನೆ ಬಂದಿದೆ. ಅಚ್ಚುಕಟ್ಟು ವ್ಯಾಪ್ತಿಯ ಇನ್ನುಳಿದ ಜಿಲ್ಲೆಗಳಿಗೂ ಅಗತ್ಯವಿದ್ದರೆ ನೀರು ಬಿಡುಗಡೆಗೆ ಅಗತ್ಯದಷ್ಟು ನೀರು ಜಲಾಶಯ ದಲ್ಲಿದೆ. ಎಂದು ಹೇಮಾವತಿ ಯೋಜನೆ ಕಾರ್ಯಪಾಲಕ ಎಂಜಿನಿಯರ್‌ ವೆಂಕಟರ ಮಣಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಐಸಿಸಿ ಸಭೆ ಕರೆದು ತೀರ್ಮಾನಿಸಲಿ: ಶುಕ್ರವಾರದಿಂದ ನೀರು ಬಿಡುತ್ತಿರುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಬೇರೆ ಯಾರೇ ಆಗಲಿ ಏಕ ಪಕ್ಷೀಯ ತೀರ್ಮಾನ ತೆಗೆದುಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ಅಚ್ಚುಕ್ಟ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಕೆರೆಗಳಿಗೂ ನೀರು ಹರಿಸಬೇಕು. ಹೇಮಾವತಿ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಶಾಸಕರನ್ನೊಳಗೊಂಡ ನೀರಾವರಿ ಸಲಹಾ ಸಮಿತಿ ಸಭೆ ( ಐಸಿಸಿ ಸಭೆ) ಕರೆದು ಚರ್ಚಿ ನೀರು ಬಿಡುವ
ತೀರ್ಮಾನ ಕೈಗೊಳ್ಳಬೇಕು. ಈ ಸಂಬಂಧ ಹಾಸನ ಜಿಲ್ಲೆಯ ಅಚ್ಚುಕಟ್ಟು ವ್ಯಾಪ್ತಿಯ ಜೆಡಿಎಸ್‌ ಶಾಸಕರು ಶುಕ್ರವಾರ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಜೆಡಿಎಸ್‌ ಮುಖಂಡ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಅವರು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.