ಬಹುಹಳ್ಳಿ ಕುಡಿವ ನೀರು ಕಾಮಗಾರಿ
Team Udayavani, May 1, 2020, 4:13 PM IST
ಆಲಮಟ್ಟಿ: ಶಾಸಕ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ಸಭೆ ನಡೆಯಿತು.
ಆಲಮಟ್ಟಿ: ಶಾಸಕ ಶಿವಾನಂದ ಪಾಟೀಲ ನೇತೃತ್ವದಲ್ಲಿ ಆಲಮಟ್ಟಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಸೂಚನೆ ಹಾಗೂ
ಪರಿಹಾರ ಕ್ರಮ ಪರಿಶೀಲನೆ ಸಭೆ ಮಂಜಪ್ಪ ಹರ್ಡೇಕರ್ ಸ್ಮಾರಕ ಭವನದಲ್ಲಿ ಗುರುವಾರ ನಡೆಯಿತು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ಕೇಳಿದರು. ಮಾತೃಪೂರ್ಣ ಯೋಜನೆಯಡಿ ಫಲಾನುಭವಿಗಳಿಗೆ ಸಮರ್ಪಕವಾಗಿ ಸೌಲಭ್ಯ ದೊರೆಯದಿರುವುದು ಬೆಳಕಿಗೆ ಬಂದಿತು. ಗ್ರಾಮಸ್ಥರಿಗೆ ಕುಡಿಯುವ ನೀರು ಹಾಗೂ ಶೌಚಾಲಯಗಳ ಬಗ್ಗೆ ಶಾಸಕರು ಪಿಡಿಒಗಳಿಂದ ಮತ್ತು ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಯೋಜನೆಯಲ್ಲಾಗಿರುವ ಲೋಪಗಳ ಬಗ್ಗೆ ಕೆಲ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ಆಲಮಟ್ಟಿ ಬಹುಹಳ್ಳಿ ಕುಡಿಯುವ ನೀರು ಯೋಜನೆ ವ್ಯಾಪ್ತಿಯ ಆಲಮಟ್ಟಿ, ಅರಳದಿನ್ನಿ, ಬೇನಾಳ, ಕಿರಿಶ್ಯಾಳ, ಅಬ್ಬಿಹಾಳ, ಹೆಬ್ಟಾಳ ಸೇರಿ ಏಳು ಗ್ರಾಮಗಳಿಗೆ ನೀರು ಪೂರೈಸಲು
ಎರಡು ವರ್ಷದ ಹಿಂದೆ ಕಾಮಗಾರಿ ಆರಂಭಿಸಿದರೂ ಈವರೆಗೆ ಪೂರ್ಣಗೊಳ್ಳದ್ದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಯುಕೆಪಿ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಭಿಯಂತರರಿಗೆ ಸೂಚಿಸಿದರು.
ಅರಳದಿನ್ನಿಯಲ್ಲಿ ನಿರುಪಯುಕ್ತವಾದ ಶುದ್ದ ಕುಡಿವ ನೀರಿನ ಘಟಕವನ್ನು ಸ್ಥಳಾಂತರಿಸಬೇಕು. ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಆಲಮಟ್ಟಿಯಲ್ಲಿ ಕುಡಿವ ನೀರು ಸರಬರಾಜಿಗೆ ಆಂತರಿಕ ಪೈಪ್‌ಲೈನ್‌ಗೆ ಅಂದಾಜು ಪಟ್ಟಿ ತಯಾರಿಸಲು ಅಭಿಯಂತರರಿಗೆ ಸೂಚಿಸಿದರು. ತಾಪಂ ಸದಸ್ಯ ಮಲ್ಲು ರಾಠೊಡ, ಗ್ರಾಪಂ ಅಧ್ಯಕ್ಷೆ ಸೈದಮ್ಮಾ ಬೆಣ್ಣಿ, ಉಪಾಧ್ಯಕ್ಷ ಬಿ.ಜೆ.ನದಾಫ, ತಹಶೀಲ್ದಾರ್ ಶಿವಲಿಂಗ ಪ್ರಭು ವಾಲಿ, ಇಒಗಳಾದ ಭಾರತಿ ಚೆಲುವಯ್ಯ, ಬಿ.ಜೆ. ಇಂಡಿ, ತಾಲೂಕು ಆರೋಗ್ಯಾಧಿಕಾರಿ ಎಸ್.ಎಸ್.ಓತಗೇರಿ, ವೈದ್ಯಾಧಿಕಾರಿ ಪ್ರಕಾಶ ಗೋಟಖೀಂಡ್ಕಿ , ಕೃಷಿ ಅಧಿಕಾರಿ ಬಿ.ಎಸ್. ಕೋನರಡ್ಡಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.