40 ಟನ್‌ ದ್ರಾಕ್ಷಿ ಖರೀದಿಸಿದ ಸುರೇಶ್‌

ಚೌಡರೆಡ್ಡಿ ತೋಟದಿಂದ ಖರೀದಿಸಿದ ಸಂಸದರು; ರಾಜ್ಯ ಸರ್ಕಾರ ವಿರುದ್ಧ ವಾಗ್ಧಾಳಿ

Team Udayavani, May 2, 2020, 2:14 PM IST

40 ಟನ್‌ ದ್ರಾಕ್ಷಿ ಖರೀದಿಸಿದ ಸುರೇಶ್‌

ಚಿಕ್ಕಬಳ್ಳಾಪುರ: ಇತ್ತೀಚೆಗೆ ಆಲಿಕಲ್ಲು ಸಮೇತ ಬಿದ್ದ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ದ್ರಾಕ್ಷಿ ನೆಲಕಚ್ಚಿದ್ದರ ಜೊತೆಗೆ ಲಾಕ್‌ಡೌನ್‌ ಪರಿಣಾಮ ಮಾರುಕಟ್ಟೆ ಇಲ್ಲದೇ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್‌ ಕೈ ಹಿಡಿದಿದ್ದು, ತಾಲೂಕಿನ ಹರಿಸ್ಥಳದ ರೈತರಿಂದ ಟನ್‌ಗಟ್ಟಲೇ ದ್ರಾಕ್ಷಿ ಖರೀದಿ ಮಾಡಿದರು. ಕೊರೊನಾ ಹರಡುವುದನ್ನು ತಪ್ಪಿಸಲು ಲಾಕ್‌ಡೌನ್‌ ಜಾರಿಯಲ್ಲಿದ್ದು, ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ ಮಾರುಕಟ್ಟೆ ಇಲ್ಲದೇ ಬೆಳೆದ ಅಪಾರ ಪ್ರಮಾಣದ ದ್ರಾಕ್ಷಿ ತಿಪ್ಪೆಗೆ ಸುರಿಯುವಂತಾಗಿದೆ. ಇದನ್ನರಿತ ಸಂಸದ ಸುರೇಶ್‌, ಹರಿಸ್ಥಳದ ಚೌಡರೆಡ್ಡಿ ಎಂಬುವರು 5 ಎಕರೆಯಲ್ಲಿ ಬೆಳೆದಿದ್ದ ಸುಮಾರು 40 ಟನ್‌ ದ್ರಾಕ್ಷಿಯನ್ನು ಖರೀದಿ ಮಾಡಿದರು.

ಸರ್ಕಾರದಲ್ಲಿ ಗೊಂದಲ: ಈ ವೇಳೆ ಮಾತನಾಡಿದ ಸಂಸದ ಸುರೇಶ್‌, ಕೋವಿಡ್‌ -19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಅಧಿಕಾರಿ ಮಂತ್ರಿಗಳಲ್ಲೇ ಗೊಂದಲ ಇದೆ. ಸರ್ಕಾರಕ್ಕೆ ಅರ್ಜೆಂಟಾಗಿ ಖಜಾನೆಗೆ ದುಡ್ಡು ಬರಬೇಕಿದೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡುವಂತೆ ಪ್ರಧಾನಿಗೆ ಸರ್ಕಾರವೇ ಪತ್ರ ಬರೆದಿದೆ. ಆದ್ರೆ ಪಿಎಂ ಎರಡು ಬಾರಿ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ ಎಂದರು.

ಸರ್ಕಾರ ರೈತರಿಗೆ, ಸಾರ್ವಜನಿಕರಿಗೆ ಆತ್ಮಸ್ಥೈರ್ಯ ಮೂಡಿಸಿಲ್ಲ. ಬೆಳೆಗಳನ್ನು ಸರ್ಕಾರವೇ ಖರೀದಿ ಮಾಡಿ ಗ್ರಾಹಕರಿಗೆ ಬಡವರಿಗೆ, ನಿರ್ಗತಿಕರಿಗೆ ಹಂಚಬಹುದಿತ್ತು. ಆದರೆ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ವಾಗ್ಧಾಳಿ ನಡೆಸಿದರು. ದ್ರಾಕ್ಷಿ, ಹೂವು, ಹಣ್ಣು, ತರಕಾರಿ ಬೆಳೆಯುವ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ನಾವು ರೈತರ ತೋಟಗಳಿಗೆ ತೆರಳಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ವಿತರಿಸುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ, ಮುಖಂಡರಾದ ನಂದಿ ಅಂಜಿನಪ್ಪ, ಜರಾಮರೆಡ್ಡಿ, ಕೆ.ವಿ.ನವೀನ್‌ ಕುಮಾರ್‌, ಅಡ್ಡಗಲ್‌ ಶ್ರೀಧರ್‌, ಜಿಪಂ ಮಾಜಿ ಅಧ್ಯಕ್ಷ ಮುನೇಗೌಡ, ಕುಂದಲಗುರ್ಕಿ ಮುನೀಂದ್ರ, ಪಟ್ರೇನಹಳ್ಳಿ ಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ಕೊಡಲು ಸಾಧ್ಯವಾಗಿಲ್ಲ. ಆದರೆ ಹೊರಗಡೆ ಬಂದ್ರೆ ದಂಡ ಹಾಕ್ತೀವಿ ಅಂತಾರೆ. ಜನ ಎಲ್ಲಿಂ ದ ದುಡ್ಡು ತರಬೇಕು ದಂಡ ಕಟ್ಟೋಕೆ. ಕೋವಿಡ್‌ 19 ವಿಚಾರದಲ್ಲಿ ಅಕ್ಕಿ ಕೊಟ್ಟಿದ್ದು ಬಿಟ್ಟರೆ ಸರ್ಕಾರ ಜನರಿಗೆ ಬೇರೇನೂ ಮಾಡಿಲ್ಲ .
ಡಿ.ಕೆ.ಸುರೇಶ್‌, ಸಂಸದರು

ಟಾಪ್ ನ್ಯೂಸ್

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

yatnal

Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್‌ ಮಾತು

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

Belagavi: There is no dissent in BJP, Vijayendra is our president: Pratap Simha

Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್‌ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chikkaballapur; 3 ಕೋಟಿ ರೂ. ಮೌಲ್ಯದ ಮೊಬೈಲ್‌ ಫೋನ್‌ಗಳೊಂದಿಗೆ ಲಾರಿ ಚಾಲಕ ನಾಪತ್ತೆ!

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

11-bng

Bengaluru: ಚಕ್ರ ವಾಹನಗಳು, ಮನೆ ಕಳ್ಳತನ: ಮೂವರು ಆರೋಪಿಗಳ ಬಂಧನ

R. Ashok visited the Bellary district hospital

Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.