ಕ್ಯಾನ್ಸರ್‌ ಪೀಡಿತನಿಗೆ ಜಿಲ್ಲಾಡಳಿತ ಸ್ಪಂದನೆ

Team Udayavani, May 2, 2020, 3:19 PM IST

huballi-tdy-6

ಧಾರವಾಡ: ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರು ವೃದ್ಧೆಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ, ಅವರ ಕ್ಯಾನ್ಸರ್‌ ಪೀಡಿತ ಮೊಮ್ಮಗನಿಗೆ ಬೆಂಗಳೂರಿನಿಂದ ಔಷಧಿ ತರಿಸಿಕೊಟ್ಟಿದ್ದಾರೆ.

ನಗರದ ಚರಂತಿಮಠ ಗಾರ್ಡನ್‌ನ ಜೈ ಜಿನೇಂದ್ರ ಕಾಲೋನಿಯ ನಿವಾಸಿ ಶಕುಂತಲಾ ಎಂಬ ವಯೋವೃದ್ಧ ಮಹಿಳೆಯೊಬ್ಬರು 4-5 ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಕ್ಯಾನ್ಸರ್‌ ಪೀಡಿತನಾಗಿರುವ ತನ್ನ 27 ವರ್ಷದ ಮೊಮ್ಮಗ ಸುನೀಲ ಅವಾರಿಗೆ ಔಷಧಿ ತೆಗೆದುಕೊಂಡು ಬರಲು ವಾಹನ ಪಾಸ್‌ ಪಡೆಯಲು ಬಂದಾಗ, ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಸಮಸ್ಯೆ ನಿವೇದಿಸಿಕೊಂಡಿದ್ದರು. ಆಗ ಜಿಲ್ಲಾಧಿಕಾರಿಗಳು ಪಾಸ್‌ ವಿತರಣೆ ವಿಭಾಗದ ಸಿಬ್ಬಂದಿ ಕರೆದು ಅಜ್ಜಿಗೆ ಸಹಾಯ ಮಾಡಲು ಸೂಚಿಸಿದ್ದರು.

ಕ್ಯಾನ್ಸರ್‌ ಪೀಡಿತ ಮೊಮ್ಮಗನಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 30 ಸಾವಿರ ರೂ. ಮೌಲ್ಯದ ಔಷಧ , ಮಾತ್ರೆಗಳು ಬೇಕಾಗುತ್ತವೆ. ಕಿದ್ವಾಯಿಯಲ್ಲಿ ಈ ಮಾತ್ರೆಗಳು ಅಲ್ಲಿನ ವೈದ್ಯರಾದ ಡಾ| ಶ್ಯಾಮಸುಂದರ ಅವರ ಸಹಾಯದಿಂದ ತಮಗೆ ಉಚಿತವಾಗಿ ಸಿಗುತ್ತಿವೆ. ಪ್ರತಿ ತಿಂಗಳು ಆ ವೈದ್ಯರೇ ಬಸ್‌ ಚಾರ್ಜ್‌ ಸಹ ನೀಡಿ ಉಪಕರಿಸುತ್ತಿರುವುದನ್ನು ಅಜ್ಜಿ ವಿವರಿಸಿದ್ದಾಳೆ. ಈಗ ತನಗೆ ಬಾಡಿಗೆ ಕಾರು ತೆಗೆದುಕೊಂಡು ಬೆಂಗಳೂರಿಗೆ ಹೋಗಿ ಔಷಧ ತರುವ ಸಾಮರ್ಥ್ಯವೂ ಇಲ್ಲ ಎಂಬುದನ್ನು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ಹೇಳಿದ್ದಾಳೆ. ಮಾನವೀಯತೆಯಿಂದ ಈ ಪ್ರಕರಣದಲ್ಲಿ ಸಹಾಯ ಮಾಡಲು ನಿರ್ಧರಿಸಿದ ಸಿಬ್ಬಂದಿ, ಅನಿವಾರ್ಯ ಕಾರಣದಿಂದ ಬೆಂಗಳೂರಿಗೆ ಹೋಗಲು ಪಾಸ್‌ ಕೇಳಲು ಬಂದ ಜಿಲ್ಲಾ ಖಜಾನೆ ಸಿಬ್ಬಂದಿ ಮೂಲಕ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಔಷಧ  ತರಿಸಿಕೊಟ್ಟಿದ್ದಾರೆ.

ಉಚಿತ ಪರೀಕ್ಷೆ: ಔಷಧ ಬಂದ ನಂತರ ಅದನ್ನು ನೇರವಾಗಿ ರೋಗಿಗೆ ಕೊಡುವ ಮೊದಲು ರಕ್ತ ಪರೀಕ್ಷೆಯೊಂದು ಕಡ್ಡಾಯವಾಗಿತ್ತು. ಆಗ ನವನಗರದ ಕ್ಯಾನ್ಸರ್‌ ಆಸ್ಪತ್ರೆಯ ಡಾ| ಉಮೇಶ ಹಳ್ಳಿಕೇರಿ ಅವರನ್ನು ಸಂಪರ್ಕಿಸಿದಾಗ ಅವರೂ ಕೂಡ ಉಚಿತವಾಗಿ ಪರೀಕ್ಷೆ ಮಾಡಿ ವರದಿ ನೀಡಿದ ನಂತರ, ಆ ವರದಿಯನ್ನು ಬೆಂಗಳೂರಿನ ತಜ್ಞ ವೈದ್ಯರಾದ ಡಾ| ಶಾಮಸುಂದರ್‌ ಅವರಿಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿ, ಅವರ ಸಲಹೆ ಪಡೆದ ನಂತರ ರೋಗಿಗೆ ಔಷಧಿ  ತೆಗೆದುಕೊಳ್ಳಲು ಸಾಧ್ಯವಾಗಿದೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅವರ ಕಚೇರಿಯ ಪಾಸ್‌ ವಿತರಣಾ ವಿಭಾಗದ ನೋಡಲ್‌ ಅಧಿಕಾರಿ ದೀಪಕ ಮಡಿವಾಳರ, ತಹಶೀಲ್ದಾರ್‌ ಪ್ರವೀಣ ಹುಚ್ಚಣ್ಣವರ, ಕೆ.ಎ. ಜಂಗೂರ, ಧರಣೇಂದ್ರ ಕಸಮಾಳಗಿ, ಇಸ್ಮಾಯಿಲ್‌ ಮಳಲಿ, ಜಿ.ಬಿ. ಪಾಟೀಲ, ಅರವಿಂದ, ಸುನೀಲ, ಅಶೋಕ ನಿಂಗೋಳಿ ಮತ್ತಿತರರು ಮುತುವರ್ಜಿ ವಹಿಸಿ ಮೊಮ್ಮಗನ ಚಿಕಿತ್ಸೆಗೆ ನೆರವಾಗಿದ್ದನ್ನು ಶಕುಂತಲಾ ಸ್ವತಃ ಜಿಲ್ಲಾ ಧಿಕಾರಿಯನ್ನು ಭೇಟಿಯಾಗಿ ಮನದುಂಬಿ ಸ್ಮರಿಸಿ, ಕೃತಜ್ಞತೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.