ನೀರಿನ ಸಮಸ್ಯೆಗೆ ಅಧಿಕಾರಿಗಳೇ ಕಾರಣ

Team Udayavani, May 2, 2020, 3:25 PM IST

2-May-19

ಹಿರಿಯೂರು: ನಗರದ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ರೈತ ಮುಖಂಡರ ಸಭೆ ನಡೆಯಿತು.

ಹಿರಿಯೂರು: ತಾಲೂಕಿನ ವಾಣಿವಿಲಾಸ ಜಲಾಶಯದಿಂದ ವೇದಾವತಿ ನದಿ ಮೂಲಕ ಚಳ್ಳಕೆರೆ ತಾಲೂಕಿನ ನದಿ ಪಾತ್ರದ ಹಳ್ಳಿಗಳಿಗೆ ನೀರು ಹರಿಸುವ ವಿಚಾರದಲ್ಲಿ ಸವಾಲು, ಪ್ರತಿ ಸವಾಲು ಹಾಕಿ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸಬಾರದು. ಬದಲು ಸೂಕ್ತ ಪರಿಹಾರಕ್ಕೆ ಮುಂದಾಗಬೇಕು ಎಂದು ರೈತ ಮುಖಂಡ ಆರನಕಟ್ಟೆ ಶಿವಕುಮಾರ್‌ ಹೇಳಿದರು.

ನಗರದ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ವೇದಾವತಿ ನದಿಗೆ ನೀರು ಬಿಡುಗಡೆ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಸತ್ಯನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಜಲಾಶಯ ನಿರ್ವಹಣೆ ಮತ್ತು ನೀರನ್ನು ಸಂರಕ್ಷಣೆ ಮಾಡುವ ಹೊಣೆಗಾರಿಕೆ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದೆ. ಚಳ್ಳಕೆರೆ ತಾಲೂಕಿಗೆ ನೀರು ಬಿಡುವ ಬಗ್ಗೆ ಪ್ರಾದೇಶಿಕ ಆಯುಕ್ತರು ಹಾಗೂ ನೀರಾವರಿ ಸಲಹಾ ಸಮಿತಿ ತೀರ್ಮಾನ ಮಾಡಬೇಕು ಎಂದರು.

ಈ ಮೊದಲು ಚಳ್ಳಕೆರೆ ತಾಲೂಕಿನ ವೇದಾವತಿ ನದಿ ಪಾತ್ರದ ಹಳ್ಳಿಗಳಿಗೆ ಕುಡಿಯುವ ನೀರಿಗಾಗಿ 0.25 ಟಿಎಂಸಿ ನೀರು ಬಿಡುವ ಕುರಿತು ಪ್ರಾದೇಶಿಕ ಆಯುಕ್ತರು ಎರಡು ಬಾರಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲೆಯ ಶಾಸಕರ ಅಭಿಪ್ರಾಯ ಪಡೆದು ಆದೇಶ ಹೊರಡಿಸಿದ್ದಾರೆ. ಈಗ ಹೆಚ್ಚುವರಿ ನೀರು ಬಿಡಬೇಕಾದರೂ ಇದೇ ನಿಯಮ ಅನುಸರಿಸಬೇಕಿತ್ತು. ನೀರಾವರಿ ಸಲಹಾ ಸಮಿತಿ ಆದೇಶವಿಲ್ಲದೆ ನೀರು ಹರಿಸಲು ಹೋಗಿ ಅಧಿಕಾರಿಗಳು ಗೊಂದಲ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ವಾಣಿವಿಲಾಸ ಜಲಾಶಯದಿಂದ 0.25 ಟಿಎಂಸಿ ನೀರು ವೇದಾವತಿ ನದಿ ಮೂಲಕ ಹರಿದು ಚಳ್ಳಕೆರೆಯನ್ನು ತಲುಪುತ್ತದೆಯೋ ಇಲ್ಲವೋ ಎಂಬ ಅಂದಾಜು ಇರಬೇಕಾಗಿತ್ತು. ಅದನ್ನು ಅಂದಾಜಿಸದೆ ಆದೇಶ ಹೊರಡಿಸಿದ್ದು ಎಷ್ಟು ಸರಿ ಎಂದರು. ಡಿವೈಎಸ್‌ಪಿ ರಮೇಶ್‌ ಮಾತನಾಡಿ,ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಪ್ರತಿಭಟನೆ ನಡೆಸದೆ ಶಾಂತಿ ಕಾಪಾಡಬೇಕು. ಇದೆಲ್ಲಾ ಮುಗಿದ ನಂತರ ಕ್ಷೇತ್ರದ ಶಾಸಕರು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ರೈತ ಮುಖಂಡರು ಚರ್ಚೆ ನಡೆಸೋಣ ಎಂದರು. ಕಸವನಹಳ್ಳಿ ರಮೇಶ್‌, ಎಚ್‌.ಆರ್‌. ತಿಮಯ್ಯ, ಆಲೂರು ಸಿದ್ದರಾಮಣ್ಣ, ನಾರಾಯಣಾಚಾರ್‌, ಪಿ.ಕೆ. ಗೌಡ, ಕೆ.ಟಿ. ತಿಪ್ಪೇಸ್ವಾಮಿ, ಸಿಪಿಐ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.