ಬಾದಾಮಿಯಲ್ಲಿ ಲಾಕ್‌ಡೌನ್ ಮತ್ತಷ್ಟು ಬಿಗಿ
Team Udayavani, May 2, 2020, 4:58 PM IST
ಬಾದಾಮಿ: ಕೋವಿಡ್ 19 ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಲಾಕ್‌ಡೌನ್ ಮತ್ತಷ್ಟು ಬಿಗಿಗೊಳಿಸಲಾಗಿದೆ.
ಬೀಳಗಿ, ಹುನಗುಂದ ಮತ್ತು ಬಾದಾಮಿಯಲ್ಲಿ ಯಾವುದೇ ಸೋಂಕಿತ ಪ್ರಕರಣಗಳು ಕಂಡುಬರದೇ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಾಡಳಿತ ದ್ವಿ ಚಕ್ರವಾಹನ ನಿಷೇಧ ಮಾಡಿದೆ. ಬಾದಾಮಿಯಲ್ಲಿ ರಾಮದುರ್ಗ ಸರ್ಕಲ್, ಕಬ್ಬಲಗೇರಿ ಸರ್ಕಲ್‌ನಲ್ಲಿ ಮತ್ತು ಹಲಕುರ್ಕಿ ಕ್ರಾಸ್‌ನಲ್ಲಿ ಚೆಕ್‌ಪೋಸ್ಟ್ ಹಾಕಲಾಗಿದೆ.
ಅನುಮತಿ ಪಾಸ್ ಇಲ್ಲದೇ ಯಾವುದೇ ವಾಹನ ಬಿಡುತ್ತಿಲ್ಲ. ದ್ವಿಚಕ್ರವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಚೆಕ್‌ಪೋಸ್ಟ್ ನಲ್ಲಿ ಬಿಗಿಯಾದ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ತಹಶೀಲ್ದಾರ್ ಸುಹಾಸ ಇಂಗಳೆ ನೇತೃತ್ವದಲ್ಲಿ ತಾಪಂ ಇಒ ಡಾ| ಪುನೀತ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬಣಕಾರ, ಮುಖ್ಯಾಧಿಕಾರಿ ಜ್ಯೋತಿ ಗಿರೀಶ, ಟಿಎಚ್‌ಒ ಎಂ.ಎನ್. ಪಾಟೀಲ ಪೊಲೀಸ್, ಕಂದಾಯ, ಆರೋಗ್ಯ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.