ತೆಲಂಗಾಣ ಮಾದರಿಯಲ್ಲಿ ಹೊಸ ಮರಳು ನೀತಿ: ಪಾಟೀಲ
Team Udayavani, May 2, 2020, 6:21 PM IST
ಗದಗ: ಜನತೆಗೆ ಕಡಿಮೆ ದರದಲ್ಲಿ ಸುಲಭ ಹಾಗೂ ಪಾರದರ್ಶಕವಾಗಿ ಮರಳು ದೊರೆಯುವಂತೆ ಮಾಡಲು ತೆಲಂಗಾಣ ಮಾದರಿಯಲ್ಲಿ ಹೊಸ ಮರಳು ನೀತಿಗೆ ರಾಜ್ಯ ಸಂಪುಟ ಸಭೆ ಅನುಮೋದನೆ ನೀಡಿದೆ. ಅದರಂತೆ ಈಗಾಗಲೇ ಖಾಸಗಿಯವರ ಬಳಿ ಇರುವ ಮರಳು ಪಾಯಿಂಟ್‌ಗಳ ಅವಧಿ ಮುಗಿದ ಬಳಿಕ ನವೀಕರಿಲಾಗುವುದಿಲ್ಲ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳು ಗಣಿಗಾರಿಕೆ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಿರ್ವಹಿಸುವ ಉದ್ದೇಶದಿಂದ ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಗ್ರಾಹಕರು ನೇರವಾಗಿ ಮರಳು ಪಡೆಯಲು ಅನುಕೂಲವಾಗುತ್ತದೆ. ಅಕ್ರಮ ಗಣಿಗಾರಿಕೆಯನ್ನು ತಡೆ ಗಟ್ಟಲು ಹೊಸದಾಗಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲಾಗುತ್ತಿದೆ. ಅಕ್ರಮ ಮರಳುಗಾರಿಕೆಯಲ್ಲದೇ ಅನಧಿಕೃತ ಖನಿಜ ಗಣಿಗಾರಿಕೆ, ಸಾಗಾಣಿಕೆ ಮತ್ತು ಅನಧಿಕೃತ ಖನಿಜ ದಾಸ್ತಾನು ವಿರುದ್ಧ ಪರಿಣಾಮಕಾರಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೊಸ ಮರಳು ನೀತಿಯನ್ವಯ ಹಳ್ಳ, ತೊರೆ, ಕೆರೆಗಳಲ್ಲಿನ ಮರಳು ನಿಕ್ಷೇಪಗಳನ್ನು ತೆಗೆಯಲು ಆಯಾ ಗ್ರಾಪಂಗಳಿಂದ ಅನುಮತಿ ಪಡೆಯಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ನಿರ್ವಹಿಸುವ ಸಮುದಾಯಿತ್ವ ಕಾಮಗಾರಿಗಳು, ಮನೆ, ರಸ್ತೆ ಕಾಮಗಾರಿಗಳಿಗೆ ಲಘು ವಾಹನ ಮತ್ತು ಎತ್ತಿನ ಗಾಡಿಗಳ ಮೂಲಕ ಮರಳು ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ನದಿ, ಅಣೆಕಟ್ಟುಗಳ ಹಿನ್ನೀರಿನ ಪ್ರದೇಶಗಳಲ್ಲಿನ ಮರಳು ನಿಕ್ಷೇಪಗಳನ್ನು ಸರರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳ ಮೂಲಕ ಗ್ರಾಹಕರಿಗೆ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿಪ ಸದಸ್ಯ ಎಸ್.ವಿ.ಸಂಕನೂನರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಡಾ| ಆನಂದ ಕೆ., ಎಸ್‌ಪಿ ಯತೀಶ ಎನ್. ಸುದ್ದಿಗೋಷ್ಠಿಯಲ್ಲಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.