ಲಾಕ್‌ಡೌನ್ ಉಲ್ಲಂಘನೆ: 16,962 ಜನರ ಬಂಧನ
Team Udayavani, May 2, 2020, 7:51 PM IST
ಮುಂಬಯಿ, ಮೇ 1: ಕೋವಿಡ್ -19 ಹಿನ್ನೆಲೆ ನಿಷೇಧಿತ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಮಹಾರಾಷ್ಟ್ರ ಪೊಲೀಸರು ರಾಜ್ಯಾದ್ಯಂತ ಲಾಕ್‌ಡೌನ್ ಉಲ್ಲಂಘಿತರ ವಿರುದ್ಧ 85,500 ಕ್ಕೂ ಹೆಚ್ಚು ಅಪರಾಧಗಳನ್ನು ದಾಖಲಿಸಿದ್ದು, ಈವರೆಗೆ 16,962 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಮಾರ್ಚ್ ಅಂತ್ಯದಿಂದ ಕೋವಿಡ್ -19 ವಿರುದ್ಧ ಹೋರಾಡುವಾಗ ಮತ್ತು ಲಾಕ್‌ಡೌನ್ ಜಾರಿಗೊಳಿಸುವಾಗ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ 85,586 ಜನರ ವಿರುದ್ಧ ಪೊಲೀಸರು ಅಪರಾಧಗಳನ್ನು ದಾಖಲಿಸಿದ್ದಾರೆ ಎಂದವರು ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ಸಾರ್ವಜನಿಕ ಸೇವಕರಿಂದ ಘೋಷಿಸಲ್ಪಟ್ಟ ಆದೇಶದ ಅಸಹಕಾರಕ್ಕೆ ಸಂಬಂಧಿಸಿದೆ. ಅಲ್ಲದೆ, ಲಾಕ್‌ಡೌನ್ ಸಂಬಂಧಿತ ರೂಢಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 16,962 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಅವಧಿಯಲ್ಲಿ 21 ಅಧಿಕಾರಿಗಳು ಸೇರಿದಂತೆ ಕನಿಷ್ಠ 161 ಪೊಲೀಸ್ ಸಿಬಂದಿಗಳು ಕೋವಿಡ್ 19 ವೈರಸ್ ಗೆ ಪಾಸಿಟಿವ್ ಕಂಡುಬಂದಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಪೋಲೀಸರ ಮೇಲೆ ಹಲ್ಲೆಯ ಕನಿಷ್ಠ 167 ಪ್ರಕರಣಗಳು ದಾಖಲಾಗಿದ್ದು, ಈವರೆಗೆ 580 ಆರೋಪಿಗಳನ್ನು ಬಂಧಿಸಲಾಗಿದೆ ಎಂದರು. ಲಾಕ್ ಡೌನ್ ಅವಧಿಯಲ್ಲಿ ಪೊಲೀಸರು ಅಕ್ರಮ ಸಾಗಣೆಯ 1,237 ಅಪರಾಧಗಳನ್ನು ದಾಖಲಿಸಿದ್ದು, 50,000 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಅವಧಿಯಲ್ಲಿ ವಿವಿಧ ಅಪರಾಧಗಳಿಗೆ ಪೊಲೀಸರು 3.02 ಕೋಟಿ ರೂ. ಗಳನ್ನು ದಂಡವಾಗಿ ಸಂಗ್ರಹಿಸಿದ್ದಾರೆ. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕನಿಷ್ಠ 622 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.