“ನರೇಗಾ’ ದಿನಗೂಲಿ ಏರಿಕೆ; ಉದ್ಯೋಗ ಹೆಚ್ಚಳ?
ಲಾಕ್ಡೌನ್ ಅವಧಿಯಲ್ಲೂ ಕಾಮಗಾರಿ ನಡೆಸಲು ಸರಕಾರದಿಂದ ಅನುವು
Team Udayavani, May 3, 2020, 5:56 AM IST
ವಿಶೇಷ ವರದಿ- ಮಂಗಳೂರು : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯ ದಿನಗೂಲಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದ.ಕ. ಜಿಲ್ಲೆಯಲ್ಲಿಯೂ ನರೇಗಾ ಯೋಜನೆಯಡಿ ಉದ್ಯೋಗಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ.
ಲಾಕ್ಡೌನ್ ಇದ್ದಾಗ್ಯೂ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ನಡೆಸಲು ಸರಕಾರ ಅನುವು ಮಾಡಿಕೊಟ್ಟಿದೆ. ದ.ಕ. ಜಿಲ್ಲೆಯಲ್ಲಿ 2,471 ಮಂದಿ ಪ್ರಸ್ತುತ ನರೇಗಾದಡಿ ಕೂಲಿ ಮಾಡುತ್ತಿದ್ದಾರೆ. ಎ. 1ರಿಂದ ರೂ. 249ರಿಂದ 275ಕ್ಕೆ ಏರಿಕೆ ಮಾಡಲಾಗಿದೆ. ಒಂದೆಡೆ ಲಾಕ್ಡೌನ್ನಿಂದಾಗಿ ಇತರ ಕೆಲಸಗಳು ನಡೆಯುತ್ತಿಲ್ಲವಾದ್ದರಿಂದ ಗ್ರಾಮೀಣ ಭಾಗಗಳ ಕಾರ್ಮಿಕರಿಗೆ ನರೇಗಾ ಕೆಲಸ ನೀಡುತ್ತಿದೆ.
ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚು ಆದ್ಯತೆ
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಸುಲಭವಾಗುವಂತೆ ಆರಂಭದಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ನಡೆಸುವಂತೆ ಸರಕಾರ ಆದೇಶ ನೀಡಿತ್ತು. ಇದೀಗ ಸಾಮುದಾಯಿಕ ಕೆಲಸಗಳಿಗೂ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಸ್ತುತ ಜಿಲ್ಲೆಯ ಯಾವ ಗ್ರಾ.ಪಂ.ಗಳಲ್ಲಿ ವೈಯಕ್ತಿಕ ಕೆಲಸಗಳಿವೆಯೋ ಅಂತಹ ಗ್ರಾ.ಪಂ.ಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಕ್ರಿಯಾಯೋಜನೆ ಆಗಿರುವ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕೆಲಸ ನಡೆಯುತ್ತಿದೆ. ಕೃಷಿ ಹೊಂಡ ನಿರ್ಮಾಣ, ಇಂಗುಗುಂಡಿಗಳ ನಿರ್ಮಾಣ, ಕೊಟ್ಟಿಗೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಮಳೆ ನೀರು ಕೊಯ್ಲು ಕಾಮಗಾರಿ, ಕೆಲವೊಂದು ತೋಟದ ಕೆಲಸಗಳು ಮೊದಲಾದ ಕೆಲಸಗಳಿಗೆ ಅವಕಾಶ ನೀಡಲಾಗುತ್ತಿದೆ. ಸ್ಥಳೀಯ ಗ್ರಾ.ಪಂ.ಗಳು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲು ಸೂಚಿಸಲಾಗಿದೆ.
ಆಸಕ್ತರು ಹೆಚ್ಚಾಗಿದ್ದಾರೆ; ಅವಕಾಶ ಸದ್ಬಳಕೆಯಾಗಲಿ
ಜಿಲ್ಲೆಯಲ್ಲಿ ಆರಂಭದ ದಿನಗಳಲ್ಲಿ ನರೇಗಾ ಯೋಜನೆಯಡಿ ಕಾರ್ಮಿಕರು ಆಸಕ್ತಿ ತೋರಿಸುತ್ತಿರಲಿಲ್ಲ. ಪ್ರಸ್ತುತ ಆಸಕ್ತರ ಸಂಖ್ಯೆ ಹೆಚ್ಚುತ್ತಿದೆ. ಎಪ್ರಿಲ್ನಿಂದ ದಿನಗೂಲಿ ಹೆಚ್ಚಾಗಿರುವುದರಿಂದ ನರೇಗಾದಡಿ ಕೂಲಿ ಮಾಡುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಲಾಕ್ಡೌನ್ ವೇಳೆಯಲ್ಲಿಯೂ ನರೇಗಾದಡಿ ಕೆಲಸ ಮಾಡಲು ನೀಡಿರುವ ಅವಕಾಶ ಹೆಚ್ಚು ಹೆಚ್ಚು ಬಳಕೆಯಾಗಲಿ.
- ಡಾ | ಸೆಲ್ವಮಣಿ ಆರ್.
ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದ.ಕ. ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.