ಉಡುಪಿ : ಮಧ್ಯಾಹ್ನ ಒಂದರವರೆಗೂ ಅಂಗಡಿ ಮಳಿಗೆಗೆ ಅವಕಾಶ
Team Udayavani, May 2, 2020, 9:36 PM IST
ಉಡುಪಿ : ಜಿಲ್ಲೆಯು ಹಸಿರು ವಲಯಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಜನರಿಗೆ ಇನ್ನಷ್ಟು ಲಾಕ್‌ಡೌನ್ ಸಡಿಲಿಕೆ ವಿನಾಯಿತಿ ದೊರೆತಿದೆ.
ಸೋಮವಾರದಿಂದ ದಿನ ಬಳಕೆ ವಸ್ತುಗಳ ಖರೀದಿ ಸಮಯವನ್ನೂ ವಿಸ್ತರಿಸಿದ್ದು, ಬೆಳಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಅಂಗಡಿ ಮಳಿಗೆಗಳು ಕಾರ್ಯ ನಿರ್ವಹಿಸಲಿವೆ. ಇದರೊಂದಿಗೆ ಕಾರ್ಖಾನೆಗಳಲ್ಲಿನ ಸಿಬಂದಿಗೆ ಸಂಜೆ 5 ರಿಂದ 7 ರವರೆಗೆ ಮನೆಗೆ ತೆರಳಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಶನಿವಾರ ಜಿ.ಪಂ. ಸಭಾಂಣದಲ್ಲಿ ನಡೆದ ಜಿಲ್ಲೆಗೆ ಅಂತರ್ ಜಿಲ್ಲೆ/ ರಾಜ್ಯದಿಂದ ಜನರನ್ನು ಕರೆತರುವ ಮತ್ತು ಕಳುಹಿಸಿ ಕೊಡುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆದರೆ ಅಂತರ್ ಜಿಲ್ಲಾ ಪ್ರವಾಸಕ್ಕೆ ಅನುಮತಿ ನೀಡುವುದಿಲ್ಲ ಎಂಬುದನ್ನು ಖಚಿತಪಡಿಸಿದ ಅವರು, ಜಿಲ್ಲೆಯೊಳಗಿನ ಬಸ್ ಸಂಚಾರವನ್ನು ಇನ್ನೂ ಒಂದು ವಾರದ ಕಾಲ ಆರಂಭಿಸುವುದಿಲ್ಲ. ಸೆಲೂನ್, ಸ್ಪಾಗಳನ್ನೂ ಸಹ ತೆರೆಯಲು ಇನ್ನೂ ಒಂದು ವಾರ ಅವಕಾಶವಿಲ್ಲ ಎಂದು ಹೇಳಿದರು.
ವೈದ್ಯಕೀಯ ಕಾರಣ ಹೊರತುಪಡಿಸಿ ಇತರ ಕಾರಣಕ್ಕೆ ಪಾಸ್ ನೀಡುವುದಿಲ್ಲ. ಅಕ್ರಮ ಪ್ರವೇಶಿಸುವವರಿಗೆ ಕಡ್ಡಾಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಹಾಗೆಯೇ ಅಂತರ್‌ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್‌ಗೆ ಒಳಪಡಬೇಕು. ಆ ಷರತ್ತಿನೊಂದಿಗೆ ಮಾತ್ರ ಜಿಲ್ಲೆಯೊಳಗೆ ಪ್ರವೇಶಿಸಲು ಬಿಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಕಠಿಣ ನಿಯಮಾವಳಿ ಅನಿವಾರ್ಯ. ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.