ಕೋವಿಡ್ -19ಗೆ ನಲುಗಿದ ಅಮೆರಿಕ: ಒಂದೇ ದಿನ 1,435 ಜನರು ಸಾವು
Team Udayavani, May 3, 2020, 8:36 AM IST
ವಾಷಿಂಗ್ಟನ್: ಕೋವಿಡ್ -19 ಅಮೆರಿಕಾದಲ್ಲಿ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 1,435 ಜನರು ಬಲಿಯಾಗಿದ್ದಾರೆ. ಜಾನ್ಸ್ ಹಾಫ್ ಕಿನ್ಸ್ ಯುನಿವರ್ಸಿಟಿ ನೀಡಿದ ಅಂಕಿಅಂಶಗಳ ಪ್ರಕಾರ ಇವರೆಗೂ ಈ ದೇಶದಲ್ಲಿ ಸುಮಾರು 66 ಸಾವಿರಕ್ಕಿಂತಲೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಮಾತ್ರವಲ್ಲದೆ 11 ಲಕ್ಷಕ್ಕಿಂತಲೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು ಅತೀ ಹೆಚ್ಚು ವೈರಾಣು ಪೀಡಿತರಿರುವ ದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಸೋಂಕಿಗೆ ಒಳಗಾದ ಸುಮಾರು 1,73,725 ಮಂದಿ ಗುಣಮುಖರಾಗಿದ್ದಾರೆ. ಈ ಪೈಕಿ ನ್ಯೂಯಾರ್ಕ್ ನಗರವೊಂದರಲ್ಲೇ ಅತೀ ಹೆಚ್ಚು ಸೋಂಕಿತರಿದ್ದು (3,19,213) , ಇಲ್ಲಿ 24,368 ಜನರು ಮೃತಪಟ್ಟಿದ್ದಾರೆ.
ಈ ಕುರಿತು ಅಮೆರಿಕಾದ ಅಧ್ಯಕ್ಷ ಕಳವಳ ವ್ಯಕ್ತಪಡಿಸಿದ್ದು, ಸೋಂಕು ವೈರಸ್ ಹರಡಲು ಕಾರಣರಾದವರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಮತ್ತೊಮ್ಮೆ ಹರಿಹಾಯ್ದಿದ್ದಾರೆ.
ಜಗತ್ತಿನಾದ್ಯಂತ 34 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ಮಾರಕ ವೈರಸ್ ಗೆ ತುತ್ತಾಗಿದ್ದು, 2.44ಲಕ್ಷಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಕಂಡು ವಿಶ್ವ ಆರೋಗ್ಯ ಸಂಸ್ಥೆ ಕೂಡ ಕಳವಳ ವ್ಯಕ್ತಪಡಿಸಿದ್ದು ಹಲವು ದೇಶಗಳಲ್ಲಿ ಜಾರಿಗೆ ತಂದಿರುವ ಲಾಕ್ ಡೌನ್ ಸಡಿಲಿಕೆ ಮಾಡಿದರೆ ಮತ್ತಷ್ಟು ಅಪಾಯಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.