ಕೋವಿಡ್ ಮುಕ್ತ ಜಿಲ್ಲೆಯಾಗಿ ಉಳಿಸಲು ಜಿಲ್ಲಾಡಳಿತ ಸನ್ನದ್ಧ

Team Udayavani, May 3, 2020, 10:45 AM IST

3-may-12

ಸಾಂಧರ್ಭಿಕ ಚಿತ್ರ

ಚಿಕ್ಕಮಗಳೂರು: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್‌ಡೌನ್‌ ವಿಧಿಸಿದ ಪರಿಣಾಮ ಜಿಲ್ಲೆ ಕೋವಿಡ್ ಮುಕ್ತ ಜಿಲ್ಲೆಯೊಂದಿಗೆ ಹಸಿರು ವಲಯ ಸ್ಥಾನ ಗಿಟ್ಟಿಸಿಕೊಂಡಿದೆ.

ದೇಶದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಕೋವಿಡ್ ಸೋಂಕಿನ ಕುರಿತು ಜನರಲ್ಲಿ ಅರಿವು ಮೂಡಿಸಿ ಮುಂಜಾಗ್ರತಾ ಕ್ರಮ ಕೈಗೊಂಡಿತು. ಇದರ ಬೆನ್ನಲ್ಲೆ ಕೇಂದ್ರ ಸರ್ಕಾರ ಮೊದಲ ಹಂತದ ಲಾಕ್‌ಡೌನ್‌ ಘೋಷಿಸುತ್ತಿದ್ದಂತೆ ಮೊದಲ ಹಂತದ ಲಾಕ್‌ಡೌನ್‌ನನ್ನು ಕಟ್ಟುನಿಟ್ಟಾಗಿ ಪಾಲಿಸಿದ ಪರಿಣಾಮ ಕೋವಿಡ್ ಸೋಂಕು ಜಿಲ್ಲೆಯೊಳಗೆ ನುಸುಳದಂತೆ ನೋಡಿಕೊಳ್ಳಲು ಸಾಧ್ಯವಾಗಿದ್ದು, ಎರಡನೇ ಹಂತದ ಲಾಕ್‌ಡೌನ್‌ ಏ.14 ರಿಂದ ಮೇ 3ರ ಕಟ್ಟುನಿಟ್ಟಾಗಿ ನಿಭಾಯಿಸಿ ಜಿಲ್ಲೆ ಹಸಿರು ವಲಯದ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ 17ರವರೆಗೆ ಲಾಕ್‌ಡೌನ್‌ ವಿಸ್ತರಿಸಲು ಮುಂದಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಮೂರನೇ ಹಂತದ ಲಾಕ್‌ ಡೌನ್‌ಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ ಮೊದಲ ಮತ್ತು ಎರಡನೇ ಹಂತದ ಲಾಕ್‌ಡೌನ್‌ ಅವಧಿಯಲ್ಲಿ ಕೋವಿಡ್ ಸೋಂಕು ಪಾಸಿಟಿವ್‌ ಪ್ರಕರಣ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದು, ಎರಡನೇ ಹಂತದ ಲಾಕ್‌ ಡೌನ್‌ಗೆ ಒಂದಿಷ್ಟು ಸಡಲಿಕೆಯನ್ನು ಸರ್ಕಾರ ಘೋಷಿಸಿತು.

ಎರಡನೇ ಹಂತದ ಲಾಕ್‌ಡೌನ್‌ ಅವಧಿಯಲ್ಲಿ ಕೃಷಿ ಚಟುವಟಿಕೆಗೆ ಇದ್ದ ನಿರ್ಬಂಧವನ್ನು ಸಡಿಲಗೊಳಿಸಿ ರೈತರು ಕೃಷಿ ಚಟುವಟಿಕೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಮೇ17ರವರೆಗೂ ವಿಧಿಸಿರುವ ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಕೃಷಿ ಚಟುವಟಿಕೆಗೆ ಎಂದಿನಂತೆ ನಡೆಯಲಿದೆ. ಮುಂಜಾಗ್ರತಾ ಕ್ರಮ ಕೈಗೊಂಡು ರೈತರು ತಾವು ಬೆಳೆದ ಬೆಳೆ ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆ ಮುಂದುವರಿಯಲಿದೆ.

ಜನರ ದಿನಬಳಕೆ ವಸ್ತುಗಳ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಿದ್ದು, ಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳು ತೆರೆದಿರಲಿವೆ. ಕೈಗಾರಿಕೆ, ಉದ್ಯಮ, ಕೃಷಿ ಯಂತ್ರೋಪಕರಣ ಅಂಗಡಿಗಳು, ರಸಗೊಬ್ಬರ ರಾಸಾಯನಿಕ ಔಷಧ ಮಳಿಗೆ, ಬ್ಯಾಂಕ್‌, ಪೆಟ್ರೋಲ್‌ ಬಂಕ್‌, ಔಷಧ ಮಳಿಗೆ, ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಸರ್ಕಾರಿ ಕಚೇರಿಗಳು, ಜಿಲ್ಲೆಯೊಳಗೆ ಬಸ್‌ ಸೇವೆ, ಬಟ್ಟೆ ಅಂಗಡಿ, ಹೋಟೆಲ್‌ ಉದ್ಯಮ ಪಾರ್ಸಲ್‌ ಸೇವೆಗೆ ಸೀಮಿತಗೊಳಿಸಿ ಮದ್ಯದಂಗಡಿ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆದರೆ, ಮುಂಜಾಗ್ರತಾ ಕ್ರಮ ಕೈಗೊಂಡು ಕೆಲಸ ಕಾರ್ಯಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಆಟೋ ಸಂಚಾರ ಇದೆ. ಇಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟ್ಯಾಕ್ಸಿ, ಚಿತ್ರಮಂದಿರ, ಹೋಮ್‌ ಸ್ಟೇ, ಮಾಲ್‌ಗ‌ಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಸಲೂನ್‌ ಶಾಪ್‌, ಶಾಪಿಂಗ್‌ ಮಾಲ್‌ ಸೇರಿದಂತೆ ಭಾರೀ ಜನ ಜನಸಂದಣಿ ಕ್ಷೇತ್ರಗಳಿಗೆ ನಿರ್ಬಂ ಧಿಸಲಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳ ವಾಹನ ಜಿಲ್ಲೆಯೊಳಗೆ ಪ್ರವೇಶಿಸದಂತೆ ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡು ಮುಂದಾಗಲಿದ್ದು, ಜಿಲ್ಲೆಯ ಗಡಿಪ್ರದೇಶದಲ್ಲಿ ಪೊಲೀಸ್‌ ಇಲಾಖೆ ಇನಷ್ಟು ಬಿಗಿ ಕ್ರಮಗಳಿಗೆ ಮುಂದಾಗಲಿದೆ.

ಮೂರನೇ ಹಂತದ ಲಾಕ್‌ಡೌನ್‌ ಅವ ಧಿಯಲ್ಲಿ ಕೆಲವು ಸೇವೆಗಳು ದೊರೆಯಲಿದ್ದು, ಪ್ರತಿ ದಿನ ಬೆಳಗ್ಗೆ 7 ರಿಂದ ಸಂಜೆ 7ಗಂಟೆವರೆಗೂ ವ್ಯಾಪಾರ, ವಹಿವಾಟುಗಳಿಗೆ ಅವಕಾಶ
ನೀಡಲಾಗಿದೆ. ಅದರೊಂದಿಗೆ ಸಾಮಾಜಿಕ ಅಂತರ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.