‘ನಿತ್ಯೋತ್ಸವ’ ಖ್ಯಾತಿಯ ಹಿರಿಯ ಕವಿ, ಸಾಹಿತಿ ಪದ್ಮಶ್ರೀ ಕೆ.ಎಸ್. ನಿಸಾರ್ ಅಹಮದ್ ನಿಧನ
Team Udayavani, May 3, 2020, 2:26 PM IST
ಬೆಂಗಳೂರು: ‘ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ, ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ’ ಎಂಬ ರಮ್ಯಾದ್ಭುತ ಸಾಲಿನ ಹಾಡನ್ನು ಬರೆದು ಕರುನಾಡಿನಾದ್ಯಂತ ‘ನಿತ್ಯೋತ್ಸವ’ ಕವಿ ಎಂದೇ ಮನೆಮಾತಾಗಿದ್ದ ಕೆ.ಎಸ್. ನಿಸಾರ್ ಅಹಮದ್ ಅವರು ಇಂದು ಕನ್ನಡ ಕುಲಕೋಟಿಯನ್ನು ಅಗಲಿದ್ದಾರೆ.
ನಿಸಾರ್ ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಅವರನ್ನು ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ನಿಸಾರ್ ಅಹಮದ್ ಅವರು 1936ರ ಫೆಬ್ರವರಿ 5ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಜನಿಸಿದರು. ಅವರ ತಂದೆ ಕೆ.ಎಸ್. ಹೈದರ್ ಮತ್ತು ತಾಯಿ ಷಾನ್ ವಾಜ್ ಬೇಗಂ. ಭೂವಿಜ್ಞಾನ ವಿಭಾಗದಲ್ಲಿ ಎಂ.ಎಸ್ಸಿ ಪದವಿಯನ್ನು ಪಡೆದಿದ್ದ ನಿಸಾರ್ ಅವರು ಬೆಂಗಳೂರು, ಶಿವಮೊಗ್ಗ, ಗುಲ್ಬರ್ಗಾ ಸೇರಿದಂತೆ ನಾಡಿನ ಹಲವು ಕಡೆಗಳಲ್ಲಿ ಪ್ರಾದ್ಯಾಪಕಾರಾಗಿ ಸೇವೆಯನ್ನು ಸಲ್ಲಿಸಿದ್ದರು.
2003ರಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊಫೆಸರ್ ನಿಸಾರ್ ಅಹಮದ್ ಅವರು ಆಯ್ಕೆಗೊಂಡಿದ್ದರು. ಕೇಂದ್ರ ಸರಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಗೌರವಕ್ಕೂ ನಮ್ಮ ನಿತ್ಯೋತ್ಸವದ ಕವಿ ನಿಸಾರ್ ಪಾತ್ರರಾಗಿದ್ದರು.
ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಎಂ.ಸಿ. ಸೀತಾರಾಮಯ್ಯ, ಜಿ.ಪಿ. ರಾಜರತ್ನಂ, ಎಲ್. ಗುಂಡಪ್ಪ ಮೊದಲಾದ ಗುರುಗಳ ಪ್ರಭಾವಕ್ಕೊಳಗಾಗಿದ್ದ ನಿಸಾರ್ ಅವರಲ್ಲಿ ಸಹಜವಾಗಿಯೇ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು.
ನಿಸಾರ್ ಅಹಮ್ಮದ್ ಅವರು ಕರ್ನಾಟಕದ ಜನಸಾಮಾನ್ಯರಿಗೂ ಪರಿಚಿತರಾದದ್ದು ‘ನಿತ್ಯೋತ್ಸವ’ ಕವನ ಸಂಕಲನದ ಮೂಲಕ. ಅದರಲ್ಲಿನ ಜನಪ್ರಿಯ ಗೀತೆಯಾದ ‘ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ..’ ಕವನದ ಮೂಲಕ. ಇದು ಕರುನಾಡಿನಾದ್ಯಂತ ಇಂದೂ ಸಹ ಮನೆಮಾತಾಗಿದೆ.
ಮನಸು ಗಾಂಧಿ ಬಜಾರು, ನೆನದವರ ಮನದಲ್ಲಿ, ಸುಮುಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಆಯ್ದ ಕವಿತೆಗಳು, ನಿತ್ಯೋತ್ಸವ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಸಮಗ್ರ ಕವಿತೆಗಳು, ನವೋಲ್ಲಾಸ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಪ್ರೊಫೆಸರ್ ನಿಸಾರ್ ಅಹಮದ್ ಅವರ ಪ್ರಮುಖ ಕವನ ಸಂಕಲನಗಳು.
ನಿಸಾರ್ ಅಹಮ್ಮದ್ ಅವರು ತಮ್ಮ ಸಾಹಿತ್ಯ ಕೃಷಿ ಜೀವನದಲ್ಲಿ ವಿಮರ್ಶಾ ಬರಹಗಳು, ಅನುವಾದ ಬರಹ ವಿಭಾಗಗಳಲ್ಲೂ ಕೈಯಾಡಿಸಿದ್ದರೂ ಜನಸಾಮಾನ್ಯರಿಗೆ ಅವರೆಂದೂ ನಿತ್ಯೋತ್ಸವದ ಕವಿಯಾಗಿಯೇ ಉಳಿದಿದ್ದರು. ಇದೀಗ ಪ್ರೊಫೆಸರ್ ನಿಸಾರ್ ಅಹಮ್ಮದ್ ಅವರು ಭೌತಿಕವಾಗಿ ನಮ್ಮನ್ನಗಲಿದ್ದರೂ ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಅತ್ಯುನ್ನತ ಕೊಡುಗೆಗಳ ಮೂಲಕ ಅವರ ನೆನಪು ಕನ್ನಡಿಗರ ಮನದಲ್ಲಿ ನಿತ್ಯ ನೂತನವಾಗಿರುತ್ತದೆ.
ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಅ.ನ.ಕೃ. ಪ್ರಶಸ್ತಿ, ಸೋವಿಯತ್ ನೆಹರೂ ಪುರಸ್ಕಾರ, ಕರ್ನಾಟಕ ವಿಶ್ವ ವಿದ್ಯಾನಿಲಯದ ಡಾಕ್ಟರೇಟ್, ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಪ್ರೊಫೆಸರ್ ನಿಸಾರ್ ಅಹಮದ್ ಅವರು ಭಾಜನರಾಗಿದ್ದರು. ಕರ್ನಾಟದಲ್ಲಿ ಮೊದಲ ಭಾವಗೀತೆಗಳ ಧ್ವನಿ ಸುರುಳಿ ಬಿಡುಗೆಯಾಗಿದ್ದು ನಿಸಾರ್ ಅಹಮ್ಮದ್ ಅವರ ಭಾವಗೀತಗಳದ್ದು ಎಂಬುದೊಂದು ಹೆಗ್ಗಳಿಕೆಯೇ ಸರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.