ಕೊಪ್ಪಳ ಮಾರುಕಟ್ಟೆಯಲ್ಲಿ ಸಪ್ಪಳ ಶುರು

ನಿಧಾನವಾಗಿ ವ್ಯಾಪಾರ ವಹಿವಾಟು ಆರಂಭ

Team Udayavani, May 3, 2020, 4:18 PM IST

ಕೊಪ್ಪಳ ಮಾರುಕಟ್ಟೆಯಲ್ಲಿ ಸಪ್ಪಳ ಶುರು

ಕೊಪ್ಪಳ: ಕೋವಿಡ್ 19 ನಿಯಂತ್ರಣಕ್ಕಾಗಿ ಲಾಕ್‌ ಡೌನ್‌ ಜಾರಿಯಾಗಿದ್ದು, ಗ್ರೀನ್‌ ಜೋನ್‌ ವ್ಯಾಪ್ತಿಯ ಕೆಲವು ಜಿಲ್ಲೆಗಳಲ್ಲಿ ಕಾರ್ಯ ಚಟುವಟಿಕೆ ಆರಂಭಕ್ಕೆ ಸರ್ಕಾರ ವಿನಾಯಿತಿ ನೀಡಿದೆ. ಈ ಬೆನ್ನಲ್ಲೆ ಜಿಲ್ಲಾಡಳಿತ ಜಿಲ್ಲೆಯ ಸಣ್ಣ-ಮಧ್ಯಮ ಉದ್ಯಮ, ಸಿವಿಲ್‌ ಕಾಮಗಾರಿ, ನರೇಗಾ ಸೇರಿದಂತೆ ಜನರು ಗುಂಪು ಸೇರುವ ಕೆಲ ಸ್ಥಳ, ಚಟುವಟಿಕೆಗಳನ್ನು ಹೊರತುಪಡಿಸಿ ಅಂಗಡಿ-ಮುಂಗಟ್ಟು ತೆರೆಯಲು ನಿರ್ಬಂಧದಲ್ಲೇ ಅನುಮತಿ ನೀಡಿದೆ. ಹೀಗಾಗಿ ಜಿಲ್ಲೆ ತಿಂಗಳ ಬಳಿಕ ನಿಧಾನಗತಿಯಲ್ಲಿ ಕಾರ್ಯಚಟುವಟಿಕೆ ಆರಂಭಿಸುತ್ತಿದೆ.

ಹೌದು. ಕೋವಿಡ್ 19  ಮಹಾಮಾರಿ ನಿಯಂತ್ರಣಕ್ಕೆ ಸಾಮಾಜಿಕ ಅಂತರವೊಂದೇ ಮದ್ದು ಎನ್ನುವುದನ್ನು ಅರಿತು ಸರ್ಕಾರ ಇಡೀ ದೇಶದಲ್ಲಿ 40 ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಿತ್ತು. ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ 19  ನಿಯಂತ್ರಣಕ್ಕಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆ ಇನ್ನೂ ಗ್ರೀನ್‌ (ಹಸಿರು ಪಟ್ಟಿ) ಝೋನ್‌ನಲ್ಲಿರುವುದು ಸಮಾಧಾನದ ವಿಷಯ.

ಕಾಮಗಾರಿ ಆರಂಭ: ಕೋವಿಡ್ 19 ದಿಂದಾಗಿ ಜಿಲ್ಲೆಯ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಬಂದ್‌ ಮಾಡಲಾಗಿತ್ತು. ಆದರೆ ಈಗ ಸಣ್ಣ ಹಾಗೂ ಮಧ್ಯಮ ಉದ್ಯಮಗಳನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಕಾರ್ಯಾರಂಭಗೊಂಡಿವೆ. ಇನ್ನೂ ಜಿಲ್ಲೆಯ ಗ್ರಾಮೀಣದಲ್ಲಿ ಸಿವಿಲ್‌ ಕಾಮಗಾರಿಗಳ ಕಾರ್ಯವೂ ನಿಧಾನವಾಗಿ ಆರಂಭವಾಗಿವೆ. ಸಾಧ್ಯವಾದಷ್ಟು ಗುಂಪು ಸೇರುವಿಕೆ ತಡೆಯಲು ಸೂಚಿಸಿದೆ.

ಆಭರಣ, ಬಟ್ಟೆ ಅಂಗಡಿ ಆರಂಭ: ಜಿಲ್ಲಾಡಳಿತವು ಜಿಲ್ಲೆಯಲ್ಲಿನ 19 ಜನ ಸೇರುವಂತಹ ಅಂಗಡಿ-ಮುಂಗಟ್ಟು ಹೊರತುಪಡಿಸಿ ಉಳಿದಂತೆ ನಗರ ಪ್ರದೇಶದಲ್ಲಿ ಚಿನ್ನಾಭರಣ ಮಳಿಗೆಗಳು, ಬಟ್ಟೆ, ಸ್ಟೇಷನರಿ, ಎಲೆಕ್ಟ್ರಿಕ್‌, ಹಾರ್ಡ್‌ವ್ಹೆರ್‌, ಸಿಮೆಂಟ್‌ ಅಂಗಡಿಗಳು, ಮೊಬೈಲ್‌ ಮಾರಾಟ ಮಳಿಗೆಗಳು ಅನುಮತಿ ಪಡೆದು ವಹಿವಾಟು ಆರಂಭಿಸಿವೆ. ಈ ಎಲ್ಲ ಅಂಗಡಿಗಳಿಗೂ ಜಿಲ್ಲಾಡಳಿತ ಸಾಮಾಜಿಕ ಅಂತರ ಕಾಪಾಡಬೇಕು. ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್‌ ಬಳಕೆ ಮಾಡುವುಂತ ನಿರ್ಬಂಧ ಹಾಕಿದೆ.

ತರಕಾರಿ ಮನೆ ಮನೆಗೆ: ಜನದಟ್ಟಣೆ ಸೇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತರಕಾರಿ ಮಾರುಕಟ್ಟೆ ಆರಂಭಿಸಿಲ್ಲ. ಜಿಲ್ಲಾಡಳಿತ ಮೊದಲಿನಂತೆ ಸರ್ಕಾರಿ ಹಾಗೂ ಖಾಸಗಿ, ರೈತರ ವಾಹನಗಳಲ್ಲಿ ನಗರ, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದೆ. ಎಪಿಎಂಸಿಯಲ್ಲಿ ಖರೀದಿ ಕೇಂದ್ರವು ನಡೆಯುತ್ತಿದೆ.

ಕೃಷಿ ಕಾರ್ಯ ನಿರಾತಂಕ: ಇನ್ನೂ ಜಿಲ್ಲೆಯಲ್ಲಿ ಕೋವಿಡ್ 19  ಲಾಕ್‌ಡೌನ್‌ ಆದ ಕೆಲವೇ ದಿನಗಳ ಬಳಿಕ ರೈತರ ಸಮಸ್ಯೆಯನ್ನು ಅರಿತು ಜಿಲ್ಲೆಯಲ್ಲಿ ಕೃಷಿ ಕಾರ್ಯಕ್ಕೆ ಕೆಲವೊಂದು ನಿರ್ಬಂಧ ವಿಧಿಸಿ ಕಾರ್ಯ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಮೆಕ್ಯಾನಿಕ್‌ ಅಂಗಡಿಗಳು ಕಾರ್ಯಾರಂಭಗೊಂಡಿವೆ. ಆದರೆ ಕೃಷಿ ಉತ್ಪನ್ನ ಮಾರಾಟವಾಗದೇ ಅನ್ನದಾತ ತೊಂದರೆ ಅನುಭವಿಸುತ್ತಿದ್ದಾನೆ. ನಿರ್ಬಂಧವಿದ್ದರೂ ಸುತ್ತಾಟ: ಜಿಲ್ಲೆಯಲ್ಲಿ ಕೃಷಿ ಸಂಬಂಧಿತ ವಾಹನಗಳು ಹಾಗೂ ಆರೋಗ್ಯಕ್ಕೆ ಸಂಬಂಧಿತ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಯಿದ್ದರೂ ಜಿಲ್ಲೆಯಲ್ಲಿ ಬೈಕ್‌ ಸೇರಿದಂತೆ ಕೆಲ ಗೂಡ್ಸ್‌ ವಾಹನಗಳು ಸಂಚರಿಸುತ್ತಿವೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅಂಗಡಿಗಳ ಆರಂಭಕ್ಕೆ ವಿನಾಯಿತಿ ನೀಡಿದ್ದು, ನಿರ್ಬಂಧವನ್ನೂ ವಿಧಿಸಿದೆ. ಕಾಮಗಾರಿ ಆರಂಭಕ್ಕೂ ಒಪ್ಪಿಗೆ ಸೂಚಿಸಿದೆ. ಈ ಮಧ್ಯೆಯೂ ಲಾಕ್‌ಡೌನ್‌ ಮುಂದುವರಿದಿದ್ದು, ಜಿಲ್ಲೆಯ ಜನತೆ ಮನೆ ಬಿಟ್ಟು ಹೊರಗೆ ಬರುತ್ತಿದ್ದಾರೆ. ಇದು ಜಿಲ್ಲಾಡಳಿತಕ್ಕೂ ದೊಡ್ಡ ತಲೆನೋವಾಗಿದೆ.

ದತ್ತು ಕಮ್ಮಾರ

ಟಾಪ್ ನ್ಯೂಸ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.