ಯುಎಇ ಕನ್ನಡಿಗರ ಏರ್‌ಲಿಫ್ಟ್ ಗೆ ಚಿಂತನೆ; ಕೇಂದ್ರದ ಜತೆ ಚರ್ಚೆ: ಡಾ. ಅಶ್ವತ್ಥನಾರಾಯಣ


Team Udayavani, May 3, 2020, 6:47 PM IST

ಯುಎಇ ಕನ್ನಡಿಗರ ಏರ್‌ಲಿಫ್ಟ್‌; ಕೇಂದ್ರದ ಜತೆ ಚರ್ಚೆ: ಡಾ. ಅಶ್ವತ್ಥನಾರಾಯಣ

ಬೆಂಗಳೂರು: ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ದೇಶಕ್ಕೆ ವಾಪಸಾಗಲು ವಿಮಾನಯಾನ ಸೌಕರ್ಯ ಕಲ್ಪಿಸುವ ಸಂಬಂಧ ಕೇಂದ್ರಕ್ಕೆ ಮನವಿ ಮಾಡುವುದರ ಜತೆಗೆ ಬಂದವರಿಗೆ ಸೂಕ್ತ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಭರವಸೆ ನೀಡಿದರು.

ದುಬೈ ಕನ್ನಡಿಗರ ಜತೆ ಭಾನುವಾರ  ವೀಡಿಯೋ ಸಂವಾದ ನಡೆಸಿದ ಡಾ. ಅಶ್ವತ್ಥನಾರಾಯಣ ಅವರು ದುಬೈ ಕನ್ನಡಿಗರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಕಡೆಯಿಂದ ಆಗುವ ಎಲ್ಲ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದರು.

ಕೋವಿಡ್‌ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ದುಬೈ ಕನ್ನಡಿಗರಿಗೆ ಆಹಾರ, ಆರೋಗ್ಯ ಹಾಗೂ ಕಾನೂನು ಸೇವೆ ಒದಗಿಸಲು ಅಲ್ಲಿನ ಅನಿವಾಸಿ ಭಾರತೀಯ ಉದ್ಯಮಿಗಳು, ವೃತ್ತಿಪರರು ವೆಬ್‌ಸೈಟ್‌ ಆರಂಭಿಸಿ ನೆರವು ಒದಗಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ, “ವಿದೇಶಗಳಿಂದ ಬರುವ 10-12 ಸಾವಿರ ಜನರಿಗೆ ಕ್ವಾರಂಟೈನ್‌ ವ್ಯವಸ್ಥೆಯನ್ನೂ ರಾಜ್ಯ ಸರ್ಕಾರದ ಕಡೆಯಿಂದ ಮಾಡಲಾಗುತ್ತದೆ”ಎಂದರು.

ವಿದೇಶದಲ್ಲಿ ಉದ್ಯೋಗ ಕಳೆದುಕೊಂಡು ಭಾರತಕ್ಕೆ ವಾಪಸಾದವರ ಪೈಕಿ ಅಗತ್ಯ ಇರುವವರಿಗೆ ವೃತ್ತಿಪರ ಕೌಶಲ ತರಬೇತಿಗೆ ವ್ಯವಸ್ಥೆ ಮಾಡಲಾಗುತ್ತದೆ. ಮುದ್ರಾ ಯೋಜನೆಯಡಿ ಉದ್ದಿಮೆ ಆರಂಭಿಸಲು ಅಗತ್ಯ ಹಣಕಾಸು ನೆರವು ಪಡೆಯಬಹುದು. ಜತೆಗೆ, ಕೋರಿಕೆ ಮೇರೆಗೆ ನಿರ್ದಿಷ್ಟ ಸಿಬಿಎಸ್‌ಸಿ ಶಾಲೆಗಳಲ್ಲಿ ಅನಿವಾಸಿ ಭಾರತೀಯರ ಮಕ್ಕಳ ಪ್ರವೇಶಕ್ಕೆ ಸಹಕರಿಸುವುದಾಗಿ ಹೇಳಿದರು.

ದುಬೈನಲ್ಲಿ 10-15 ಕಾರ್ಮಿಕರು ಒಂದೇ ಕೊಠಡಿಯಲ್ಲಿ ಇರುತ್ತಾರೆ. ಈ ಪೈಕಿ ಒಬ್ಬರಿಗೂ ಸೋಂಕಿದ್ದರೂ ಉಳಿದವರಿಗೂ ಅಪಾಯ ತಪ್ಪಿದ್ದಲ್ಲ. ಹಾಗಾಗಿ ಅಂಥವರಿಗೆ ಕ್ವಾರಂಟೈನ್‌ ವ್ಯವಸ್ಥೆಗೆ ನೆರವಾಗಬೇಕು ಎಂಬ ಮನವಿಗೆ ಸ್ಪಂದಿಸಿದ ಅವರು, ” ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ, ಅಗತ್ಯ ನೆರವು ಒದಗಿಸಲು ಒತ್ತಾಯಿಸಲಾಗುತ್ತದೆ. ಅಂಥವರು ಭಾರತಕ್ಕೆ ವಾಪಸಾಗಲು ಬಯಸಿದರೆ ಅವರಿಗೆ ಸರ್ಕಾರವೇ ಇಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಕಲ್ಪಿಸುತ್ತದೆ. ವಿದೇಶಗಳಿಂದ ಬರುವವರನ್ನು ಹೋಟೆಲ್‌ಗಳಲ್ಲಿ ಪ್ರತ್ಯೇಕವಾಗಿ ಇರಿಸಿ,  ಅಗತ್ಯ ಸೌಕರ್ಯ ಒದಗಿಸಲಾಗುತ್ತದೆ,” ಎಂದು ವಿವರಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.