ಎಲ್ಲ ನಾಗರಿಕರಿಗೆ ಉಚಿತ ಆರೋಗ್ಯ ರಕ್ಷಣೆ: ಟೋಪೆ
Team Udayavani, May 3, 2020, 7:17 PM IST
ಜಾಲ್ನಾ, ಮೇ 2: ಮಹಾರಾಷ್ಟ್ರ ಸರಕಾರದ ಆರೋಗ್ಯ ಯೋಜನೆಯ ವ್ಯಾಪ್ತಿಗೆ ರಾಜ್ಯದ ಸಮಸ್ತ ನಾಗರಿಕರನ್ನು ಸೇರಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಘೋಷಿಸಿದ್ದಾರೆ. ಮಹಾರಾಷ್ಟ್ರವು ತನ್ನ ಜನರಿಗೆ ಉಚಿತ ಮತ್ತು ನಗದುರಹಿತ ವಿಮಾ ರಕ್ಷಣೆಯನ್ನು ಒದಗಿಸುವ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ ಎಂದವರು ಹೇಳಿದ್ದಾರೆ.
ಜಾಲ್ನಾ ದಲ್ಲಿ ಮಹಾರಾಷ್ಟ್ರ ದಿನದ ಆಚರಣೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೋಪೆ ಅವರು, ಪ್ರಸ್ತುತ ರಾಜ್ಯದ ಜನಸಂಖ್ಯೆಯ ಶೇ. 85 ರಷ್ಟು ಜನರನ್ನು ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (ಎಂಜೆಪಿಜೆ) ಅಡಿಯಲ್ಲಿ ಸೇರಿಸಿಕೊಳ್ಳಲಾಗಿದ್ದು, ಉಳಿದಿರುವ ಶೇ.15ರಷ್ಟು ಜನರನ್ನೂ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸುವುದನ್ನು ತಡೆಯುವ ಉದ್ದೇಶದಿಂದ ಸರಕಾರಿ, ಅರೆ ಸರಕಾರಿ ನೌಕರರು ಮತ್ತು ಬಿಳಿ ಪಡಿತರ ಚೀಟಿ ಹೊಂದಿರುವವರನ್ನು ಈ ಯೋಜನೆಯಲ್ಲಿ ಸೇರಿಸಲು ಮನವಿ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದರು.
ಪುಣೆ ಮತ್ತು ಮುಂಬಯಿಯ ಖಾಸಗಿ ಆಸ್ಪತ್ರೆ ಗಳಲ್ಲಿ ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ಸರಕಾರವು ಜನರಲ್ ಇನ್ಸೂರೆನ್ಸ್ ಪಬ್ಲಿಕ್ ಸೆಕ್ಟರ್ ಅಸೋಸಿಯೇಶನ್ (ಜಿಐಪಿಎಸ್ ಎ) ಜತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸಚಿವರು ತಿಳಿಸಿದ್ದಾರೆ. ಅಂತೆಯೇ, ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಶುಲ್ಕವನ್ನು ಪ್ರಮಾಣೀಕರಿಸಲು ಎಲ್ಲಾ ರೋಗಗಳಿಗೆ ವಿಭಿನ್ನ ಪ್ಯಾಕೇಜ್‌ಗಳನ್ನು ವಿನ್ಯಾಸಗೊಳಿಸಲಾಗುವುದು ಎಂದವರು ಹೇಳಿದ್ದಾರೆ. ಈ ಹಿಂದೆ 496 ಆಸ್ಪತ್ರೆಗಳನ್ನು ಈ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗಿತ್ತು, ಆದರೆ ಈಗ 1,000 ಕ್ಕೂ ಹೆಚ್ಚು ಆಸ್ಪತ್ರೆಗಳು ಇದರ ವ್ಯಾಪ್ತಿಗೆ ಬರುತ್ತವೆ ಎಂದು ಟೋಪೆ ನುಡಿದಿದ್ದಾರೆ. ವಿಪತ್ತು
ನಿರ್ವಹಣಾ ಕಾಯಿದೆ ಮತ್ತು ಸಾಂಕ್ರಾಮಿಕ ಕಾಯಿದೆಯ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯ ಶುಲ್ಕವನ್ನು ರಾಜ್ಯ ಸರಕಾರವು ನಿಗದಿಪಡಿಸಿದೆ ಎಂದು ಸಚಿವರು ಹೇಳಿದ್ದಾರೆ. ಜಿಐಪಿಎಸ್‌ಎ ಜತೆಗೆ ಸಂಬಂಧವಿಲ್ಲದ ಆಸ್ಪತ್ರೆಗಳು ಕೂಡ ತಮ್ಮ ಚಿಕಿತ್ಸಾ ಶುಲ್ಕವನ್ನು ಪ್ರಮಾಣೀಕರಿಸಬೇಕಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.